Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 19:16 - ಪರಿಶುದ್ದ ಬೈಬಲ್‌

16 ಆಜ್ಞೆಗಳಿಗೆ ವಿಧೇಯನಾಗುವವನು ತನ್ನ ಪ್ರಾಣವನ್ನು ಸಂರಕ್ಷಿಸಿಕೊಳ್ಳುವನು. ಆದರೆ ತನ್ನ ನಡತೆಯ ಬಗ್ಗೆ ನಿರ್ಲಕ್ಷ್ಯದಿಂದಿರುವವನು ಸಾವಿಗೀಡಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಜ್ಞೆಯನ್ನು ಪಾಲಿಸುವವನು ಆತ್ಮವನ್ನು ಪಾಲಿಸುವನು, ನಡತೆಯನ್ನು ಲಕ್ಷಿಸದವನು ಸಾಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ದೈವಾಜ್ಞೆಯನ್ನು ಪಾಲಿಸುವವನು ತನ್ನನ್ನೇ ಕಾಪಾಡಿಕೊಳ್ಳುವನು; ದೈವವಾರ್ತೆಯ ಬಗ್ಗೆ ಅಜಾಗ್ರತನಾಗಿರುವವನು ಸಾಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆಜ್ಞೆಯನ್ನು ಪಾಲಿಸುವವನು ಆತ್ಮವನ್ನು ಪಾಲಿಸುವನು, ನಡತೆಯನ್ನು ಲಕ್ಷಿಸದವನು ಸಾಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯಾರು ಆಜ್ಞೆಗಳನ್ನು ಪಾಲಿಸುತ್ತಾನೋ ಅವನು ತನ್ನ ಜೀವವನ್ನು ಉಳಿಸಿಕೊಳ್ಳುತ್ತಾನೆ, ಆದರೆ ಅವುಗಳನ್ನು ಅಸಡ್ಡೆ ಮಾಡುವವನು ಸಾಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 19:16
25 ತಿಳಿವುಗಳ ಹೋಲಿಕೆ  

ಯೇಸು, “ನಿನ್ನ ಉತ್ತರ ಸರಿಯಾಗಿದೆ. ನೀನು ಹಾಗೆಯೇ ಮಾಡು, ಆಗ ನಿನಗೆ ನಿತ್ಯಜೀವ ದೊರೆಯುವುದು” ಅಂದನು.


ಬುದ್ಧಿಮಾತನ್ನು ಕೇಳದವನು ತನಗೆ ತೊಂದರೆಯನ್ನು ಬರಮಾಡಿಕೊಳ್ಳುವನು. ಬುದ್ಧಿವಾದವನ್ನು ಗೌರವಿಸುವವನು ಪ್ರತಿಫಲವನ್ನು ಹೊಂದುವನು.


ಆದರೆ ಯೇಸು, “ದೇವರ ವಾಕ್ಯವನ್ನು ಕೇಳಿ ಅದಕ್ಕೆ ವಿಧೇಯರಾಗುವ ಜನರೇ ಭಾಗ್ಯವಂತರು!” ಎಂದನು.


ದೇವರನ್ನು ಪ್ರೀತಿಸುವುದು ಎಂದರೆ ಆತನ ಆಜ್ಞೆಗಳಿಗೆ ವಿಧೇಯರಾಗಿರುವುದು. ದೇವರ ಆಜ್ಞೆಗಳು ನಮಗೆ ಕಠಿಣವಾದವುಗಳಲ್ಲ.


ಮತ್ತು ನಾವು ಕೇಳಿಕೊಳ್ಳುವವುಗಳನ್ನು ದೇವರು ನಮಗೆ ನೀಡುತ್ತಾನೆ. ನಾವು ಆತನಿಗೆ ವಿಧೇಯರಾಗಿರುವುದರಿಂದ ಮತ್ತು ಆತನಿಗೆ ಮೆಚ್ಚಿಕೆಯಾದ ಕಾರ್ಯಗಳನ್ನು ಮಾಡುವುದರಿಂದ ಅವುಗಳನ್ನು ಆತನಿಂದ ಪಡೆದುಕೊಳ್ಳುತ್ತೇವೆ.


ಪ್ರವಾದಿಗಳಿಗೆ ದರ್ಶನವಾಗದಿದ್ದರೆ ಜನರು ಹತೋಟಿ ತಪ್ಪುತ್ತಾರೆ. ಆದರೆ ದೇವರ ಕಟ್ಟಳೆಗೆ ವಿಧೇಯನಾಗಿರುವವನು ಸಂತೋಷವಾಗಿರುವನು.


ಎಚ್ಚರಿಕೆಯಿಂದ ಮಾತಾಡುವವನು ತೊಂದರೆಯಿಂದ ಪಾರಾಗುವನು.


ನೀತಿವಂತನ ಜೀವಿತವು ದುಷ್ಟತನದಿಂದ ದೂರವಾಗಿರುವುದು. ತನ್ನ ಜೀವಿತದ ಬಗ್ಗೆ ಎಚ್ಚರಿಕೆಯುಳ್ಳವನು ತನ್ನ ಪ್ರಾಣವನ್ನು ಕಾಪಾಡಿಕೊಳ್ಳುವನು.


“ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡ ಜನರೇ ಧನ್ಯರು. ಅವರು ಜೀವವೃಕ್ಷದ ಹಣ್ಣನ್ನು ತಿನ್ನಲು ಹಕ್ಕುಳ್ಳವರಾಗಿದ್ದಾರೆ. ಅವರು ಬಾಗಿಲುಗಳ ಮೂಲಕ ನಗರದೊಳಕ್ಕೆ ಹೋಗಬಲ್ಲರು.


ಸುನ್ನತಿಯನ್ನು ಮಾಡಿಸಿಕೊಳ್ಳುವುದಾಗಲಿ ಮಾಡಿಸಿಕೊಳ್ಳದಿರುವುದಾಗಲಿ ಮುಖ್ಯವಲ್ಲ. ದೇವರ ಆಜ್ಞೆಗಳಿಗೆ ವಿಧೇಯರಾಗುವುದೇ ಮುಖ್ಯವಾದದ್ದು.


ಈ ಪುಸ್ತಕದಲ್ಲಿ ಬರೆಯಲಾಗಿರುವ ಎಲ್ಲಾ ವಿಷಯಗಳಿಂದ ನಾವು ಕಲಿತುಕೊಳ್ಳತಕ್ಕದ್ದೇನು? ಒಬ್ಬನು ಮಾಡಬಹುದಾದ ಅತ್ಯಂತ ಮುಖ್ಯವಾದ ಕಾರ್ಯವೆಂದರೆ, ದೇವರಲ್ಲಿ ಭಯಭಕ್ತಿಯಿಂದಿದ್ದು ಆತನ ಆಜ್ಞೆಗಳಿಗೆ ವಿಧೇಯನಾಗರುವುದೇ. ಯಾಕೆಂದರೆ ಜನರ ಎಲ್ಲಾ ಕಾರ್ಯಗಳೂ ರಹಸ್ಯಗಳೂ ದೇವರಿಗೆ ಗೊತ್ತಿವೆ. ಆತನು ಪ್ರತಿಯೊಂದು ಕಾರ್ಯವನ್ನೂ ತಿಳಿದಿರುವುದರಿಂದ ಪ್ರತಿಯೊಂದಕ್ಕೂ ನ್ಯಾಯತೀರ್ಪು ನೀಡುವನು.


ರಾಜನ ಆಜ್ಞೆಗೆ ವಿಧೇಯನಾಗುವವನು ಸುರಕ್ಷಿತವಾಗಿರುವನು. ಆದರೆ ಜ್ಞಾನಿಯು ಸೂಕ್ತ ಸಮಯದಲ್ಲಿ ಸೂಕ್ತ ಕಾರ್ಯವನ್ನು ಮಾಡಲು ತಿಳಿದಿದ್ದಾನೆ.


ನನ್ನ ಮಗನೇ, ನನ್ನ ಉಪದೇಶವನ್ನು ಮರೆಯಬೇಡ. ನನ್ನ ಆಜ್ಞೆಗಳನ್ನು ಜ್ಞಾಪಕದಲ್ಲಿಟ್ಟುಕೊ.


“ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ, ನಾನು ಆಜ್ಞಾಪಿಸುವವುಗಳನ್ನು ಮಾಡುವಿರಿ.


ಒಬ್ಬನು ಪ್ರಪಂಚವನ್ನೆಲ್ಲಾ ಗಳಿಸಿಕೊಂಡು ತನ್ನ ಆತ್ಮವನ್ನೇ ಕಳೆದುಕೊಂಡರೆ ಅದರಿಂದ ಅವನಿಗೇನು ಪ್ರಯೋಜನ? ಮನುಷ್ಯನು ತನ್ನ ಆತ್ಮವನ್ನು ಕೊಂಡುಕೊಳ್ಳಲು ಏನನ್ನು ತಾನೇ ಕೊಡಬಲ್ಲನು?


ಅವನು ತುತ್ತೂರಿಯ ಶಬ್ದ ಕೇಳಿದನು. ಆದರೆ ಅದನ್ನು ಅಲಕ್ಷಿಸಿದನು. ಆದ್ದರಿಂದ ಅವನ ಮರಣಕ್ಕೆ ಅವನೇ ಕಾರಣನು. ಅವನು ಆ ಎಚ್ಚರಿಕೆಯ ಶಬ್ದಕ್ಕೆ ಗಮನವನ್ನು ಕೊಟ್ಟಿದ್ದರೆ ಅವನು ಬದುಕುತ್ತಿದ್ದನು.


ನಾನು ಅವರಿಗೆ, ‘ನನಗೆ ವಿಧೇಯರಾಗಿರಿ. ನಾನು ನಿಮಗೆ ದೇವರಾಗಿರುತ್ತೇನೆ, ನೀವು ನನ್ನ ಭಕ್ತರಾಗಿರುತ್ತೀರಿ. ನಾನು ಆಜ್ಞಾಪಿಸಿದ್ದನ್ನೆಲ್ಲವನ್ನು ಮಾಡಿರಿ, ಅದರಿಂದ ನಿಮಗೆ ಒಳ್ಳೆಯದಾಗುವುದು’ ಎಂದು ಮಾತ್ರ ಆಜ್ಞಾಪಿಸಿದ್ದೆ.


ವಕ್ರಬುದ್ಧಿಯುಳ್ಳವರು ಅನೇಕ ಆಪತ್ತುಗಳಿಗೆ ಸಿಕ್ಕಿಕ್ಕೊಂಡಿದ್ದಾರೆ. ಆದರೆ ತನ್ನ ಆತ್ಮದ ಬಗ್ಗೆ ಚಿಂತಿಸುವವನು ಆ ಆಪತ್ತುಗಳಿಂದ ದೂರವಿರುವನು.


ಶಿಕ್ಷೆಯನ್ನು ಒಪ್ಪದವನು ತನಗೇ ಕೇಡುಮಾಡಿಕೊಳ್ಳುತ್ತಾನೆ. ಗದರಿಕೆಯನ್ನು ಕೇಳುವವನು ತಿಳುವಳಿಕೆಯನ್ನು ಪಡೆದುಕೊಳ್ಳುವನು.


ಆತನ ಒಡಂಬಡಿಕೆಗೆ ವಿಧೇಯರಾಗುವ ಜನರಿಗೆ ಆತನು ಒಳ್ಳೆಯವನಾಗಿದ್ದಾನೆ. ಆತನ ಆಜ್ಞೆಗಳಿಗೆ ವಿಧೇಯರಾಗುವ ಜನರಿಗೆ ಆತನು ಒಳ್ಳೆಯವನಾಗಿದ್ದಾನೆ.


ಮೂಢನ ಕೋಪವು ಅವನನ್ನೇ ಕೊಲ್ಲುವುದು. ಮೂರ್ಖನ ಹೊಟ್ಟೆಕಿಚ್ಚು ಅವನನ್ನೇ ಕೊಲ್ಲುವುದು.


ಜ್ಞಾನದ ಮಾರ್ಗವನ್ನು ತೊರೆದವನು ನಾಶನದ ಕಡೆಗೆ ಹೋಗುತ್ತಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು