Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 19:25 - ಪರಿಶುದ್ದ ಬೈಬಲ್‌

25 ದುರಾಭಿಮಾನಿಯನ್ನು ದಂಡಿಸಿದರೆ ಅವನು ಪಾಠವನ್ನು ಕಲಿತುಕೊಳ್ಳಬಹುದು. ವಿವೇಕಿಯನ್ನು ತಿದ್ದಿ ಸರಿಪಡಿಸಿದರೆ ಅವನು ಮತ್ತಷ್ಟು ಜ್ಞಾನವನ್ನು ಗಳಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಧರ್ಮನಿಂದಕನಿಗೆ ಪೆಟ್ಟುಹೊಡೆ, ನೋಡಿದ ಅವಿವೇಕಿ ಜಾಣನಾಗುವನು, ವಿವೇಕಿಯನ್ನು ಗದರಿಸು, ತಾನೇ ತಿಳಿವಳಿಕೆಯನ್ನು ಗ್ರಹಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಕುಚೋದ್ಯನಿಗೆ ಹೊಡೆ, ಮುಗ್ಧರು ಅದನ್ನು ಕಂಡು ಜಾಣರಾಗುವರು; ಜ್ಞಾನಿಯನ್ನು ಗದರಿಸಿದರೆ ಸಾಕು, ಅವನು ಮತ್ತಷ್ಟು ಜ್ಞಾನಿಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಧರ್ಮನಿಂದಕನಿಗೆ ಪೆಟ್ಟುಹೊಡೆ, [ನೋಡಿದ] ಮಂದಮತಿಯು ಜಾಣನಾಗುವನು; ವಿವೇಕಿಯನ್ನು ಗದರಿಸು, ತಾನೇ ತಿಳುವಳಿಕೆಯನ್ನು ಗ್ರಹಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಪರಿಹಾಸ್ಯಗಾರನನ್ನು ಹೊಡೆದರೆ, ಮುಗ್ಧರು ಎಚ್ಚರಗೊಳ್ಳುವರು; ವಿವೇಕಿಯನ್ನು ಗದರಿಸಿದರೆ, ಅವನು ಪರಿಜ್ಞಾನವನ್ನು ಗ್ರಹಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 19:25
10 ತಿಳಿವುಗಳ ಹೋಲಿಕೆ  

ದುರಾಭಿಮಾನಿಯು ದಂಡಿಸಲ್ಪಟ್ಟರೆ ದಡ್ಡನು ಜ್ಞಾನಿಯಾಗುವನು. ಜ್ಞಾನಿಗೆ ಉಪದೇಶಿಸಿದರೆ ತಾನೇ ತಿಳುವಳಿಕೆಯನ್ನು ಹೊಂದವನು.


ಮೂಢನಿಗೆ ಮನವರಿಕೆ ಮಾಡಲು ನೂರು ಏಟುಗಳು ಬೇಕಾದರೂ ಜ್ಞಾನಿಗೆ ಒಂದೇ ಗದರಿಕೆಯು ಸಾಕು.


ಮೂರ್ಖನು ತಂದೆಯ ಬುದ್ಧಿಮಾತನ್ನು ತಿರಸ್ಕರಿಸುವನು. ಬುದ್ಧಿಮಾತನ್ನು ಸ್ವೀಕರಿಸಿಕೊಳ್ಳುವವನು ಜ್ಞಾನಿಯಾಗುತ್ತಾನೆ.


“ನಾನು ಪ್ರೀತಿಸುವ ಜನರನ್ನೇ ನಾನು ತಿದ್ದುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀವು ಆಸಕ್ತಿಯಿಂದಿರಿ! ದೇವರ ಕಡೆಗೆ ತಿರುಗಿಕೊಳ್ಳಿರಿ.


ಆಗ ಆ ಪಟ್ಟಣದ ಜನರು ಸೇರಿ ಆ ಮಗನನ್ನು ಕಲ್ಲೆಸೆದು ಕೊಲ್ಲಬೇಕು. ಹೀಗೆ ನಿಮ್ಮಲ್ಲಿರುವ ದುಷ್ಟತನವನ್ನು ತೆಗೆದುಹಾಕಬೇಕು. ಎಲ್ಲಾ ಇಸ್ರೇಲರು ಇದನ್ನು ಕೇಳಿ ಭಯಗ್ರಸ್ತರಾಗುವರು.


ಆಗ ಇಸ್ರೇಲಿನ ಎಲ್ಲಾ ಜನರಲ್ಲಿ ಭಯವುಂಟಾಗಿ ಅಂಥಾ ಕೆಟ್ಟ ಕೆಲಸವನ್ನು ಎಂದಿಗೂ ಮಾಡುವುದಿಲ್ಲ.


ನೀತಿವಂತನು ನನ್ನನ್ನು ಸರಿಪಡಿಸಿದರೆ ಅದು ನನಗೇ ಒಳ್ಳೆಯದು. ನಿನ್ನ ಭಕ್ತರು ನನ್ನನ್ನು ಗದರಿಸಿದರೆ ಅದು ನನಗೇ ಒಳ್ಳೆಯದು. ಆದರೆ ಕೆಟ್ಟವರ ಕೆಟ್ಟಕೃತ್ಯಗಳ ವಿರೋಧವಾಗಿ ನಾನು ಯಾವಾಗಲೂ ಪ್ರಾರ್ಥಿಸುತ್ತೇನೆ.


ನೀನು ಅಹಂಕಾರಿಗೆ ಅವನ ತಪ್ಪನ್ನು ತಿಳಿಸಲು ಪ್ರಯತ್ನಿಸಿದರೆ ಅವನು ನಿನ್ನನ್ನೇ ಖಂಡಿಸುವನು. ನೀನು ಕೆಡುಕನಿಗೆ ಅವನ ತಪ್ಪನ್ನು ತಿಳಿಸಿದರೆ ಅವನು ನಿನ್ನನ್ನೇ ಗೇಲಿಮಾಡುವನು.


ಈ ಜ್ಞಾನೋಕ್ತಿಗಳಿಗೆ ಕಿವಿಗೊಡುವುದರ ಮೂಲಕ ಜ್ಞಾನಿಗಳು ತಮ್ಮ ಪಾಂಡಿತ್ಯವನ್ನೂ ವಿವೇಕಿಗಳು ತಮ್ಮ ಉಚಿತಾಲೋಚನೆಗಳನ್ನೂ ಹೆಚ್ಚಿಸಿಕೊಳ್ಳಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು