Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 2:20 - ಪರಿಶುದ್ದ ಬೈಬಲ್‌

20 ಆದ್ದರಿಂದ ನೀನು ಒಳ್ಳೆಯವರ ಮಾದರಿಯನ್ನು ಅನುಸರಿಸಬೇಕು. ನೀತಿವಂತರ ಮಾರ್ಗದಲ್ಲಿ ಜೀವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಒಳ್ಳೆಯವರ ನಡತೆಯನ್ನು ಅನುಸರಿಸುವಂತೆ ವಿವೇಕವು ನಿನ್ನನ್ನು ಪ್ರೇರೇಪಿಸಿ, ನೀತಿವಂತರ ದಾರಿಗಳನ್ನು ಹಿಡಿಯುವ ಹಾಗೆ ಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನೀನಾದರೊ ಸಜ್ಜನರ ಮಾರ್ಗದಲ್ಲಿ ನಡೆವೆ, ನೀತಿವಂತರ ಹಾದಿಯನ್ನು ಹಿಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಒಳ್ಳೆಯವರ ನಡತೆಯನ್ನು ಅನುಸರಿಸುವಂತೆ [ವಿವೇಕವು] ನಿನ್ನನ್ನು ಪ್ರೇರಿಸಿ ನೀತಿವಂತರ ಹಾದಿಗಳನ್ನು ಹಿಡಿಯುವ ಹಾಗೆ [ಮಾಡುವದು].

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆದ್ದರಿಂದ ಒಳ್ಳೆಯವರ ಮಾರ್ಗದಲ್ಲಿ ನೀನು ನಡೆಯುವೆ ನೀತಿವಂತರ ದಾರಿಯನ್ನು ನೀನು ಹಿಡಿಯುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 2:20
10 ತಿಳಿವುಗಳ ಹೋಲಿಕೆ  

ನೀವು ಸೋಮಾರಿಗಳಾಗಿರಬೇಕೆಂಬುದು ನಮ್ಮ ಅಪೇಕ್ಷೆಯಲ್ಲ. ದೇವರ ವಾಗ್ದಾನದ ಫಲಗಳನ್ನು ಪಡೆಯುವ ಜನರಂತೆ ನೀವಿರಬೇಕೆಂಬುದು ನಮ್ಮ ಅಪೇಕ್ಷೆ. ಆ ಜನರಿಗೆ ನಂಬಿಕೆ ಮತ್ತು ತಾಳ್ಮೆಯಿದ್ದುದರಿಂದ ಅವರು ದೇವರ ವಾಗ್ದಾನದಂತೆ ಫಲವನ್ನು ಪಡೆದರು.


ನನ್ನ ಪ್ರಿಯ ಸ್ನೇಹಿತನೇ, ಕೆಟ್ಟದ್ದನ್ನು ಅನುಸರಿಸಬೇಡ; ಒಳ್ಳೆಯದನ್ನೇ ಅನುಸರಿಸು. ಒಳ್ಳೆಯದನ್ನು ಮಾಡುವವನು ದೇವರಿಗೆ ಸೇರಿದವನಾಗಿದ್ದಾನೆ. ಆದರೆ ಕೆಟ್ಟದ್ದನ್ನು ಮಾಡುವವನು ದೇವರನ್ನು ಎಂದೂ ತಿಳಿಯದವನಾಗಿದ್ದಾನೆ.


ಯೆಹೋವನು ಹೀಗೆ ಹೇಳುತ್ತಾನೆ: “ಎರಡು ರಸ್ತೆಗಳು ಕೂಡುವಲ್ಲಿ ನಿಂತು ನೋಡಿರಿ. ‘ಒಳ್ಳೆಯ ರಸ್ತೆ ಎಲ್ಲಿದೆ?’ ಎಂದು ಕೇಳಿರಿ. ಆ ರಸ್ತೆಯನ್ನು ಹಿಡಿದು ನಡೆಯಿರಿ. ಹಾಗೆ ಮಾಡಿದರೆ ನಿಮಗೆ ವಿಶ್ರಾಂತಿ ಸಿಕ್ಕುವದು. ಆದರೆ ‘ನಾವು ಒಳ್ಳೆಯ ಹಾದಿಯ ಮೇಲೆ ನಡೆಯುವುದಿಲ್ಲ’ ಎಂದು ನೀವು ಹೇಳಿದ್ದೀರಿ.


ಜ್ಞಾನಿಗಳೊಂದಿಗೆ ಸ್ನೇಹದಿಂದಿರಿ. ಆಗ ನೀವೂ ಜ್ಞಾನಿಗಳಾಗುವಿರಿ. ಆದರೆ ನೀವು ಜ್ಞಾನಹೀನರನ್ನು ನಿಮ್ಮ ಸ್ನೇಹಿತರನ್ನಾಗಿ ಆಯ್ದುಕೊಂಡರೆ, ನಿಮಗೆ ತೊಂದರೆ ಉಂಟಾಗುವುದು.


ಕೆಡುಕರನ್ನು ನನ್ನ ಬಳಿಗೆ ಬರಗೊಡಿಸಬೇಡ. ಆಗ ನಾನು ನಿನ್ನ ಆಜ್ಞೆಗಳಿಗೆ ವಿಧೇಯನಾಗುವೆನು.


ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ನಾನು ಸ್ನೇಹಿತನಾಗಿದ್ದೇನೆ. ನಿನ್ನ ನಿಯಮಗಳಿಗೆ ವಿಧೇಯರಾಗುವ ಪ್ರತಿಯೊಬ್ಬರಿಗೂ ನಾನು ಸ್ನೇಹಿತನಾಗಿದ್ದೇನೆ.


ನೀತಿವಂತರ ಜೀವಿತವು ಮಧ್ಯಾಹ್ನದವರೆಗೂ ಹೆಚ್ಚುತ್ತಾ ಬರುವ ಮುಂಜಾನೆಯ ಬೆಳಕಿನಂತಿರುವುದು.


ನಾನು ನಿನಗೆ ಜ್ಞಾನದ ಕುರಿತು ಉಪದೇಶಿಸುತ್ತಿರುವೆನು. ನಾನು ನಿನ್ನನ್ನು ಧರ್ಮದ ಮಾರ್ಗದಲ್ಲಿ ನಡೆಸುತ್ತಿರುವೆನು.


ನಾನು ನೀತಿಮಾರ್ಗದಲ್ಲಿಯೂ ನ್ಯಾಯಮಾರ್ಗದಲ್ಲಿಯೂ ನಡೆಯುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು