ಜ್ಞಾನೋಕ್ತಿಗಳು 2:5 - ಪರಿಶುದ್ದ ಬೈಬಲ್5 ಆಗ ನೀನು ಯೆಹೋವನಲ್ಲಿ ಭಯಭಕ್ತಿಯಿಂದಿರಲು ಕಲಿತುಕೊಳ್ಳುವೆ; ದೈವಜ್ಞಾನವನ್ನು ಹೊಂದಿಕೊಳ್ಳುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆಗ ನೀನು ಯೆಹೋವನ ಭಯವನ್ನು ಅರಿತು, ದೈವಜ್ಞಾನವನ್ನು ಪಡೆದುಕೊಳ್ಳುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆಗ ಅರಿತುಕೊಳ್ಳುವೆ ದೈವಭಯವನ್ನು, ಪಡೆದುಕೊಳ್ಳುವೆ ದೈವಜ್ಞಾನವನ್ನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆಗ ನೀನು ಯೆಹೋವನ ಭಯವನ್ನು ಅರಿತು ದೈವಜ್ಞಾನವನ್ನು ಪಡೆದುಕೊಳ್ಳುವಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆಗ ನೀನು ಯೆಹೋವ ದೇವರ ಭಯಭಕ್ತಿಯನ್ನು ತಿಳಿದುಕೊಳ್ಳುವೆ; ದೇವರ ಅರಿವನ್ನು ಕಂಡುಕೊಳ್ಳುವೆ. ಅಧ್ಯಾಯವನ್ನು ನೋಡಿ |
ಯಾವನಾದರೂ ಜಂಬಕೊಚ್ಚಿಕೊಳ್ಳಬೇಕಾದರೆ, ಅವನು ನನ್ನನ್ನು ಅರಿತಿರುವುದಾಗಿಯೂ ನನ್ನನ್ನು ತಿಳಿದುಕೊಂಡಿರುವುದಾಗಿಯೂ ಜಂಬಪಡಲಿ. ನಾನೇ ಯೆಹೋವನೆಂದು ತಿಳಿದುಕೊಂಡಿರುವುದಕ್ಕಾಗಿ ಅವನು ಜಂಬಪಡಲಿ. ನಾನು ದಯಾವಂತನೂ ನ್ಯಾಯವಂತನೂ ಆಗಿರುವೆ, ನಾನು ಭೂಲೋಕದಲ್ಲಿ ಒಳ್ಳೆಯದನ್ನು ಮಾಡುತ್ತೇನೆ ಎಂದು ತಿಳಿದುಕೊಂಡಿರುವವನು ಹೆಮ್ಮೆಪಡಲಿ. ಆಗ ನನಗೆ ಸಂತೋಷವಾಗುವುದು.” ಇದು ಯೆಹೋವನ ನುಡಿ.