Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 2:6 - ಪರಿಶುದ್ದ ಬೈಬಲ್‌

6 ಜ್ಞಾನವನ್ನು ಕೊಡುವಾತನು ಯೆಹೋವನೇ. ವಿವೇಕ ಮತ್ತು ತಿಳುವಳಿಕೆ ಆತನ ಬಾಯಿಂದ ಬರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೋವನೇ ಜ್ಞಾನವನ್ನು ಕೊಡುವಾತನು, ಆತನ ಬಾಯಿಂದಲೇ ತಿಳಿವಳಿಕೆಯೂ, ವಿವೇಕವೂ ಹೊರಟು ಬರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಜ್ಞಾನವನ್ನು ನೀಡುವಾತ ಸರ್ವೇಶ್ವರನೇ; ತಿಳುವಳಿಕೆ, ವಿವೇಕ ಹೊರಡುವುದು ಆತನ ಬಾಯಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೆಹೋವನೇ ಜ್ಞಾನವನ್ನು ಕೊಡುವಾತನು, ಆತನ ಬಾಯಿಂದಲೇ ತಿಳುವಳಿಕೆಯೂ ವಿವೇಕವೂ ಹೊರಟು ಬರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಏಕೆಂದರೆ ಯೆಹೋವ ದೇವರೇ ಜ್ಞಾನವನ್ನು ಕೊಡುತ್ತಾರೆ; ಅವರ ಬಾಯಿಂದಲೇ ಅರಿವೂ ತಿಳುವಳಿಕೆಯೂ ಹೊರಟುಬರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 2:6
32 ತಿಳಿವುಗಳ ಹೋಲಿಕೆ  

ಆದರೆ ನಿಮ್ಮಲ್ಲಿ ಯಾರಿಗಾದರೂ ಜ್ಞಾನವು ಬೇಕಾಗಿದ್ದರೆ ಅಂಥವರು ದೇವರಲ್ಲಿ ಕೇಳಿಕೊಳ್ಳಲಿ. ದೇವರು ಉದಾರಿಯಾಗಿರುವುದರಿಂದ ಮತ್ತು ಎಲ್ಲಾ ಜನರಿಗೆ ಸಂತೋಷದಿಂದ ಕೊಡುವುದರಿಂದ ನಿಮಗೆ ಜ್ಞಾನವನ್ನು ದಯಪಾಲಿಸುತ್ತಾನೆ.


ನಿನ್ನ ಆಜ್ಞೆಗಳು ನನ್ನನ್ನು ನನ್ನ ಶತ್ರುಗಳಿಗಿಂತಲೂ ಹೆಚ್ಚು ಜ್ಞಾನಿಯನ್ನಾಗಿ ಮಾಡುತ್ತವೆ. ಅವು ಯಾವಾಗಲೂ ನನ್ನೊಂದಿಗಿವೆ.


ಆದರೆ ಮನುಷ್ಯರಲ್ಲಿರುವ ದೇವರಾತ್ಮನು ಅಂದರೆ ಸರ್ವಶಕ್ತನಾದ ದೇವರ ‘ಉಸಿರು’ ಮನುಷ್ಯರಿಗೆ ಜ್ಞಾನವನ್ನು ಕೊಡುತ್ತದೆ.


ಏಕೆಂದರೆ ನಾನೇ ನಿಮಗೆ ಜ್ಞಾನವನ್ನು ಕೊಡುತ್ತೇನೆ. ಆದ್ದರಿಂದ ನಿಮ್ಮ ವೈರಿಗಳಲ್ಲಿ ಯಾರೂ ನಿಮ್ಮ ಮಾತಿಗೆ ಪ್ರತ್ಯುತ್ತರವನ್ನು ಕೊಡಲು ಸಾಧ್ಯವಿಲ್ಲ.


ನಿನ್ನ ಮಕ್ಕಳು ದೇವರನ್ನು ಅನುಸರಿಸುವರು. ಆತನು ಅವರಿಗೆ ಬೋಧಿಸುವನು. ನಿನ್ನ ಮಕ್ಕಳಿಗೆ ನಿಜವಾದ ಶಾಂತಿ ಇರುವದು.


‘ದೇವರು ಎಲ್ಲಾ ಜನರಿಗೆ ಉಪದೇಶಿಸುವನು’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ಜನರು ತಂದೆಗೆ ಕಿವಿಗೊಟ್ಟು ಆತನಿಂದ ಕಲಿತುಕೊಳ್ಳುವರು. ಆ ಜನರು ನನ್ನ ಬಳಿಗೆ ಬರುವರು.


ನಿನ್ನ ಕೋರಿಕೆಯನ್ನು ಅನುಗ್ರಹಿಸುವೆನು; ನಿನ್ನನ್ನು ಜ್ಞಾನಿಯನ್ನಾಗಿಯೂ ವಿವೇಕಿಯನ್ನಾಗಿಯೂ ಮಾಡುವೆನು. ಪೂರ್ವಕಾಲದಲ್ಲಿ ನಿನ್ನಂತವರು ಯಾರೊಬ್ಬರೂ ಇರಲಿಲ್ಲ ಎನ್ನುವಷ್ಟು ಜ್ಞಾನಿಯನ್ನಾಗಿ ನಿನ್ನನ್ನು ಮಾಡುತ್ತೇನೆ. ಮುಂದೆ ನಿನ್ನಂತವರು ಯಾರೊಬ್ಬರೂ ಇರುವುದಿಲ್ಲ.


ಎಲ್ಲಾ ಒಳ್ಳೆಯ ದಾನಗಳೂ ಕುಂದಿಲ್ಲದ ವರಗಳೂ, ಎಲ್ಲಾ ಬೆಳಕುಗಳಿಗೆ (ಸೂರ್ಯ, ಚಂದ್ರ, ನಕ್ಷತ್ರಗಳು) ಮೂಲ ಕಾರಣನಾದ ಸೃಷ್ಟಿ ಕರ್ತನಿಂದ ಬರುತ್ತವೆ. ದೇವರು ಬದಲಾಗುವುದಿಲ್ಲ. ಆತನು ಎಲ್ಲಾ ಕಾಲದಲ್ಲಿಯೂ ಒಂದೇ ರೀತಿಯಲ್ಲಿರುತ್ತಾನೆ.


ನಿನ್ನ ಉಪದೇಶಗಳು ನನ್ನನ್ನು ಜ್ಞಾನಿಯನ್ನಾಗಿ ಮಾಡುತ್ತವೆ, ಆದ್ದರಿಂದ ನಾನು ದುರುಪದೇಶಗಳನ್ನು ದ್ವೇಷಿಸುವೆನು.


ನನ್ನ ಪೂರ್ವಿಕರ ದೇವರೇ, ನಿನ್ನನ್ನು ಕೊಂಡಾಡಿ ಸ್ತುತಿಸುತ್ತೇನೆ. ನೀನು ನನಗೆ ಜ್ಞಾನವನ್ನೂ ಸಾಮರ್ಥ್ಯವನ್ನೂ ದಯಪಾಲಿಸಿದೆ. ನಾನು ಕೇಳಿದ್ದನ್ನು ಅನುಗ್ರಹಿಸಿದೆ. ಅರಸನ ಕನಸಿನ ಬಗ್ಗೆ ತಿಳಿಸಿದೆ.”


ದೇವರು ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಇವರುಗಳಿಗೆ ಅನೇಕ ಶಾಸ್ತ್ರಗಳನ್ನೂ ವಿಜ್ಞಾನವನ್ನೂ ಕಲಿಯುವ ಬುದ್ಧಿಸಾಮರ್ಥ್ಯಗಳನ್ನು ದಯಪಾಲಿಸಿದನು. ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ ದಿವ್ಯದರ್ಶನಗಳನ್ನೂ ಗ್ರಹಿಸಬಲ್ಲವನಾಗಿದ್ದನು.


ನೀವು ಉಪದೇಶಗಳಿಗೂ ಒಡಂಬಡಿಕೆಗೂ ವಿಧೇಯರಾಗಿರಬೇಕು. ನೀವು ಈ ಆಜ್ಞೆಗಳನ್ನು ಅನುಸರಿಸದಿದ್ದರೆ, ತಪ್ಪು ಆಜ್ಞೆಗಳನ್ನು ಹಿಂಬಾಲಿಸುವಿರಿ. ಬೇತಾಳಿಕರಿಂದ, ಕಣಿಹೇಳುವವರಿಂದ ಬರುವ ಆಜ್ಞೆಗಳೇ ತಪ್ಪು ಆಜ್ಞೆಗಳು. ಅವುಗಳಿಗೆ ಯಾವ ಬೆಲೆಯೂ ಇಲ್ಲ. ಅವುಗಳನ್ನು ಅನುಸರಿಸುವುದರಿಂದ ನಿಮಗೆ ಯಾವ ಪ್ರಯೋಜನವೂ ಇಲ್ಲ.


ದೇವರು ಸೊಲೊಮೋನನಿಗೆ ಜ್ಞಾನವಿವೇಕಗಳನ್ನು ಅನುಗ್ರಹಿಸಿದನು. ಸೊಲೊಮೋನನು ಅನೇಕಾನೇಕ ಸಂಗತಿಗಳನ್ನು ಅರ್ಥಮಾಡಿಕೊಳ್ಳುತ್ತಿದ್ದನು. ಯಾರೂ ಊಹಿಸಿಕೊಳ್ಳಲಾರದಷ್ಟು ಜ್ಞಾನವನ್ನು ಅವನು ಹೊಂದಿದ್ದನು.


ಆತನು ಕಾಲಸಮಯಗಳನ್ನು ಮಾರ್ಪಡಿಸುತ್ತಾನೆ. ಆತನು ಅರಸರನ್ನು ಬದಲಾಯಿಸುತ್ತಾನೆ. ಆತನು ಅರಸರಿಗೆ ಪ್ರಭುತ್ವವನ್ನು ಕೊಡುವನು. ಆತನು ಅವರ ಪ್ರಭುತ್ವವನ್ನು ಕಿತ್ತುಕೊಳ್ಳುವನು! ಜನರಿಗೆ ಜ್ಞಾನವನ್ನು ಕೊಟ್ಟು ಜ್ಞಾನಿಗಳನ್ನಾಗಿ ಮಾಡುವವನು ಆತನೇ. ಜನರಿಗೆ ವಿವೇಕವನ್ನು ಕೊಟ್ಟು ವಿವೇಕಿಗಳನ್ನಾಗಿ ಮಾಡುವವನು ಆತನೇ.


ನಿನ್ನ ತಂದೆತಾಯಿಗಳ ಆಜ್ಞೆಗಳು ಮತ್ತು ಉಪದೇಶಗಳು ನಿನಗೆ ನೀತಿಮಾರ್ಗವನ್ನು ತೋರಿಸುವ ಬೆಳಕಿನಂತಿವೆ. ಅವು ನಿನ್ನನ್ನು ಸರಿಪಡಿಸಿ ಜೀವಮಾರ್ಗದಲ್ಲಿ ನಡೆಯಲು ಸಹಾಯಮಾಡುತ್ತವೆ.


ಯೆಹೋವನ ಉಪದೇಶಗಳು ನಿಷ್ಕಳಂಕವಾಗಿವೆ. ಅವು ದೇವಜನರಿಗೆ ಬಲವನ್ನು ಕೊಡುತ್ತವೆ. ಯೆಹೋವನ ಕಟ್ಟಳೆಯು ಭರವಸೆಗೆ ಯೋಗ್ಯವಾಗಿದೆ. ಅದು ಮೂಢರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ.


ಆದ್ದರಿಂದ ನಿನ್ನ ಜನರನ್ನು ಒಳ್ಳೆಯ ರೀತಿಯಲ್ಲಿ ಆಳಲು ಮತ್ತು ಅವರಿಗೆ ಸರಿಯಾದ ತೀರ್ಪುಗಳನ್ನು ನೀಡಲು ನನಗೆ ವಿವೇಕವನ್ನು ಕರುಣಿಸು. ಇದು ನನಗೆ ಸರಿ ಮತ್ತು ತಪ್ಪುಗಳ ನಡುವಿರುವ ಭೇದವನ್ನು ತಿಳಿಸಿಕೊಡುತ್ತದೆ. ನನಗೆ ಉತ್ತಮವಾದ ವಿವೇಕವಿಲ್ಲದಿದ್ದರೆ, ನಾನು ಈ ಮಹಾಜನಾಂಗವನ್ನು ಆಳುವುದು ಸಾಧ್ಯವಾಗುವುದಿಲ್ಲ” ಎಂದು ಉತ್ತರಿಸಿದನು.


ನಾನು ಬೆಚಲೇಲನನ್ನು ದೇವರಾತ್ಮಭರಿತನನ್ನಾಗಿ ಮಾಡಿದ್ದೇನೆ. ನಾನು ಅವನಿಗೆ ಎಲ್ಲಾ ಬಗೆಯ ಕೆಲಸಗಳನ್ನು ಮಾಡಲು ನಿಪುಣತೆಯನ್ನೂ ಜ್ಞಾನವನ್ನೂ ಅನುಗ್ರಹಿಸಿದ್ದೇನೆ.


ಯೆಹೋವನು ನಿನ್ನನ್ನು ಇಸ್ರೇಲರಿಗೆ ಅರಸನನ್ನಾಗಿ ಮಾಡುವನು. ನೀನು ಆತನ ಆಜ್ಞೆಗಳನ್ನು ಅನುಸರಿಸಿ, ದಕ್ಷತೆಯಿಂದ ರಾಜ್ಯಭಾರ ಮಾಡುವದಕ್ಕೆ ಬೇಕಾದ ಜ್ಞಾನವನ್ನು ನಿನಗೆ ದಯಪಾಲಿಸಲಿ.


ಆದ್ದರಿಂದ ನನ್ನ ದೇವರು ನಮ್ಮ ಜನರನ್ನು ಒಟ್ಟುಗೂಡಿಸುವಂತೆ ನನ್ನನ್ನು ಪ್ರೇರೇಪಿಸಿದನು. ಅಂತೆಯೇ ನಾನು ಎಲ್ಲಾ ಗಣ್ಯರನ್ನು, ಅಧಿಕಾರಿಗಳನ್ನು ಮತ್ತು ಸಾಮಾನ್ಯರನ್ನು ಒಟ್ಟಾಗಿ ಸೇರಿಬರಲು ಆಮಂತ್ರಿಸಿದೆನು. ಇವರ ಕುಟುಂಬಗಳ ಪಟ್ಟಿಯನ್ನು ನಾನು ಮಾಡಬೇಕಿತ್ತು. ಮೊಟ್ಟಮೊದಲನೆಯ ಸಾರಿ ಸೆರೆಯಿಂದ ಹಿಂತಿರುಗಿ ಬಂದ ಸಂಸಾರಗಳ ಪಟ್ಟಿಯು ನನಗೆ ದೊರೆಯಿತು. ಅದರ ವಿವರ ಹೀಗಿದೆ:


ಆತನ ಉಪದೇಶವನ್ನು ಸ್ವೀಕರಿಸಿಕೊ. ಆತನ ವಾಕ್ಯಗಳನ್ನು ನಿನ್ನ ಹೃದಯದಲ್ಲಿಟ್ಟುಕೊ.


ದೇವರೇ, ನಾನು ನಿನಗೆ ನಂಬಿಗಸ್ತನಾಗಿರಬೇಕೆಂಬುದೇ ನಿನ್ನ ಅಪೇಕ್ಷೆ. ಆದ್ದರಿಂದ ಸುಜ್ಞಾನದ ರಹಸ್ಯಗಳನ್ನು ನನಗೆ ಉಪದೇಶಿಸು.


ದೇವರು ತಾನು ಮೆಚ್ಚಿಕೊಂಡವನಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಆನಂದವನ್ನೂ ಕೊಡುವನು. ಪಾಪಿಗಾದರೋ ಪ್ರಯಾಸದಿಂದ ಸಂಪಾದಿಸುವ ಮತ್ತು ಕೂಡಿಸಿಡುವ ಕೆಲಸವನ್ನು ಕೊಡುವನು. ಅವನು ಕೂಡಿಸಿಟ್ಟವುಗಳನ್ನು ದೇವರು ತನ್ನ ಮೆಚ್ಚಿಕೆಗೆ ಪಾತ್ರನಾದವನಿಗೆ ಕೊಡುವನು. ಇದು ಸಹ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥ.


ಭೂಲೋಕದವರೆಲ್ಲರೂ ರಾಜನಾದ ಸೊಲೊಮೋನನನ್ನು ನೋಡುವುದಕ್ಕೂ ದೇವರು ಸೊಲೊಮೋನನಿಗೆ ದಯಪಾಲಿಸಿರುವ ಜ್ಞಾನವಾಕ್ಯಗಳನ್ನು ಕೇಳುವುದಕ್ಕೂ ಅಪೇಕ್ಷಿಸುತ್ತಿದ್ದರು.


ಎಜ್ರನೇ, ನಿನ್ನ ದೇವರು ನಿನಗೆ ಕೊಟ್ಟಿರುವ ಜ್ಞಾನಶಕ್ತಿಯನ್ನು ಉಪಯೋಗಿಸಿ ನ್ಯಾಯಾಧೀಶರನ್ನೂ ನ್ಯಾಯಶಾಸ್ತ್ರಿಗಳನ್ನೂ ಆರಿಸಿ ನೇಮಿಸಲು ನಿನಗೆ ಅಧಿಕಾರ ಕೊಟ್ಟಿದ್ದೇನೆ. ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯಗಳಲ್ಲಿ ವಾಸಮಾಡುವ ಜನರಿಗೆಲ್ಲಾ ಅವರು ನ್ಯಾಯತೀರಿಸುವರು. ನಿನ್ನ ದೇವರ ಕಟ್ಟಳೆಗಳನ್ನು ಅರಿತವರಿಗೆಲ್ಲಾ ಅವರು ನ್ಯಾಯತೀರಿಸುವರು. ಯಾರಿಗಾದರೂ ದೇವರ ಕಟ್ಟಳೆ ಗೊತ್ತಿಲ್ಲದಿದ್ದಲ್ಲಿ ಆ ನ್ಯಾಯಶಾಸ್ತ್ರಿಗಳು ಅವರಿಗೆ ಕಲಿಸಬೇಕು.


ಜ್ಞಾನವೂ ಶಕ್ತಿಯೂ ಆತನವೇ. ಆಲೋಚನೆಯೂ ವಿವೇಕವೂ ಆತನವೇ.


ದೇವರು ಬಲಿಷ್ಠನಾಗಿರುವುದರಿಂದ ಯಾವಾಗಲೂ ಜಯಗಳಿಸುತ್ತಾನೆ. ಗೆಲ್ಲುವವರೂ ಸೋಲುವವರೂ ಆತನವರೇ!


ಯೆಹೋವನ ನಿಯಮಗಳು ನೀತಿಯ ಕಟ್ಟಳೆಗಳಾಗಿವೆ. ಅವು ಮನುಸ್ಸನ್ನು ಸಂತೋಷಗೂಳಿಸುತ್ತವೆ. ಯೆಹೋವನ ಆಜ್ಞೆಗಳು ಒಳ್ಳೆಯ ಆಜ್ಞೆಗಳಾಗಿವೆ. ಅವು ಕಣ್ಣುಗಳಿಗೆ ಬೆಳಕನ್ನು ನೀಡುತ್ತವೆ.


ಜನಾಂಗಗಳನ್ನು ಶಿಕ್ಷಿಸುವಾತನು ದೇವರೇ. ಜನರಿಗೆ ಉಪದೇಶಿಸುವವನೂ ಆತನೇ.


ಅರ್ಥಮಾಡಿಕೊಳ್ಳಲು ನನಗೆ ಸಹಾಯಮಾಡು. ಆಗ ನಿನ್ನ ಉಪದೇಶಗಳಿಗೆ ಸಂಪೂರ್ಣವಾಗಿ ವಿಧೇಯನಾಗುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು