ಜ್ಞಾನೋಕ್ತಿಗಳು 20:1 - ಪರಿಶುದ್ದ ಬೈಬಲ್1 ದ್ರಾಕ್ಷಾರಸವು ಪರಿಹಾಸ್ಯಕ್ಕೂ ಮದ್ಯವು ಕೂಗಾಟಕ್ಕೂ ನಡೆಸುತ್ತವೆ. ಅಮಲೇರಿಸಿಕೊಳ್ಳುವುದು ಮೂರ್ಖತನ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ದ್ರಾಕ್ಷಾರಸವು ಪರಿಹಾಸ್ಯ, ಮದ್ಯವು ಕೂಗಾಟ, ಇವುಗಳಿಂದ ದಾರಿತಪ್ಪಿ ಹೋಗುವವನು ಜ್ಞಾನಿಯಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ದ್ರಾಕ್ಷಾರಸದಿಂದ ನಗೆಯಾಟ, ಮಧ್ಯದಿಂದ ಕೂಗಾಟ; ಇವುಗಳಿಂದ ತೂರಾಟಕ್ಕೆ ತುತ್ತಾಗುವವನು ಜ್ಞಾನಿಯಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ದ್ರಾಕ್ಷಾರಸವು ಪರಿಹಾಸ್ಯ, ಮದ್ಯವು ಕೂಗಾಟ; ಇವುಗಳಿಂದ ಓಲಾಡುವವನು ಜ್ಞಾನಿಯಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ದ್ರಾಕ್ಷಾರಸವು ಪರಿಹಾಸ್ಯಕರವಾಗಿದೆ; ಮಾದಕ ಮದ್ಯವು ಉದ್ರೇಕಿಸುತ್ತದೆ; ಇವುಗಳಿಂದ ಮೋಸ ಹೋದವನು ಜ್ಞಾನಿಯಲ್ಲ. ಅಧ್ಯಾಯವನ್ನು ನೋಡಿ |
ಆಗ ಅಬ್ಷಾಲೋಮನು ತನ್ನ ಸೇವಕರಿಗೆ ಈ ರೀತಿ ಆಜ್ಞೆ ಮಾಡಿದನು: “ಅಮ್ನೋನನನ್ನು ಗಮನಿಸುತ್ತಿರಿ. ಅವನು ಮತ್ತನಾಗಿ ಆನಂದಿಸುತ್ತಿರುವಾಗ ನಾನು ಆಜ್ಞೆಯನ್ನು ಕೊಡುತ್ತೇನೆ. ಆಗ ನೀವು ಅವನ ಮೇಲೆ ಆಕ್ರಮಣಮಾಡಿ ಕೊಲ್ಲಬೇಕು. ನಿಮಗೆ ಶಿಕ್ಷೆಯಾಗುತ್ತದೆ ಎಂಬ ಭಯವಿಲ್ಲದಿರಲಿ, ಯಾಕೆಂದರೆ ನೀವು ನನ್ನ ಆಜ್ಞೆಯನ್ನು ಪಾಲಿಸಿದಿರಷ್ಟೇ, ಆದ್ದರಿಂದ ಶಕ್ತರಾಗಿಯೂ ಧೈರ್ಯವಂತರಾಗಿಯೂ ಇರಿ” ಎಂದನು.
ಯೆಹೋವನು ಹೇಳಿದ್ದು: “ಒಬ್ಬನನ್ನು ದ್ರಾಕ್ಷಾರಸವು ಮೋಸಪಡಿಸಬಹುದು. ಅದೇ ರೀತಿಯಲ್ಲಿ ಬಲಿಷ್ಠನ ಗರ್ವವು ಅವನನ್ನು ಮೋಸಪಡಿಸಬಹುದು. ಆದರೆ ಅವನಿಗೆ ಸಮಾಧಾನ ಸಿಕ್ಕುವುದಿಲ್ಲ. ಅವನು ಮರಣದಂತಿರುವನು. ಅವನಿಗೆ ಯಾವಾಗಲೂ ಹೆಚ್ಚೆಚ್ಚು ಬೇಕು. ಮರಣದಂತೆ ಅವನಿಗೆ ತೃಪ್ತಿಯೇ ಇರದು. ಅವನು ಜನಾಂಗಗಳನ್ನು ಸೋಲಿಸುತ್ತಲೇ ಇರುವನು. ಆ ಜನರನ್ನು ತನ್ನ ಕೈದಿಗಳನ್ನಾಗಿ ಮಾಡುತ್ತಲೇ ಇರುವನು.