Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 20:22 - ಪರಿಶುದ್ದ ಬೈಬಲ್‌

22 “ಕೇಡಿಗೆ ಪ್ರತಿಯಾಗಿ ಕೇಡನ್ನು ಮಾಡುತ್ತೇನೆ” ಎಂದು ಹೇಳಬೇಡ. ಯೆಹೋವನಿಗಾಗಿ ಕಾದುಕೊಂಡಿರು! ಆತನು ನಿನ್ನನ್ನು ಜಯಶಾಲಿಯನ್ನಾಗಿ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಕೇಡಿಗೆ ಮುಯ್ಯಿತೀರಿಸುವೆನು ಅನ್ನಬೇಡ, ಯೆಹೋವನನ್ನು ನಿರೀಕ್ಷಿಸಿಕೊಂಡಿರು, ಆತನೇ ನಿನ್ನನ್ನು ಉದ್ಧರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 “ಕೇಡಿಗೆ ಕೇಡು” ಎಂದು ಮುಯ್ಯಿತೀರಿಸುವುದು ಬೇಡ; ಸರ್ವೇಶ್ವರನಲ್ಲಿ ಭರವಸೆಯಿಡು, ಆತ ನಿನ್ನ ಕೈಬಿಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಕೇಡಿಗೆ ಮುಯ್ಯಿ ತೀರಿಸುವೆನು ಅನ್ನಬೇಡ; ಯೆಹೋವನನ್ನು ನಿರೀಕ್ಷಿಸಿಕೊಂಡಿರು, ಆತನೇ ನಿನ್ನನ್ನುದ್ಧರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನೀನು, “ಕೇಡಿಗೆ ಮುಯ್ಯಿತೀರಿಸುವೆನು,” ಎಂದು ಹೇಳಬೇಡ; ಯೆಹೋವ ದೇವರನ್ನು ನಿರೀಕ್ಷಿಸು; ಆಗ ಅವರೇ ನಿಮ್ಮನ್ನು ರಕ್ಷಿಸಿ ಉದ್ಧರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 20:22
19 ತಿಳಿವುಗಳ ಹೋಲಿಕೆ  

ಯಾರೂ ಅಪಕಾರಕ್ಕೆ ಅಪಕಾರ ಮಾಡದಂತೆ ನೋಡಿಕೊಳ್ಳಿರಿ; ಒಬ್ಬರಿಗೊಬ್ಬರಿಗೆ ಮತ್ತು ಎಲ್ಲರಿಗೆ ಯಾವಾಗಲೂ ಒಳ್ಳೆಯದನ್ನು ಮಾಡಲು ಪ್ರಯತ್ನಿಸಿರಿ.


“ಅವನು ನನಗೆ ಕೇಡುಮಾಡಿದನು. ಆದ್ದರಿಂದ ನಾನೂ ಅವನಿಗೆ ಕೇಡುಮಾಡುವೆ. ಅವನು ಮಾಡಿದ ಕೇಡುಗಳಿಗಾಗಿ ಸೇಡು ತೀರಿಸಿಕೊಳ್ಳುವೆ” ಎಂದು ಹೇಳಬೇಡ.


ನಿನಗೆ ಉಪಕಾರ ಮಾಡುವವರಿಗೆ ಅಪಕಾರ ಮಾಡಬೇಡ. ಇಲ್ಲವಾದರೆ ನಿನ್ನ ಜೀವಮಾನವೆಲ್ಲಾ ಕಷ್ಟಪಡುವೆ.


ಅಪಕಾರ ಮಾಡಿದವನಿಗೆ ಅಪಕಾರ ಮಾಡದೆ, ನಿಂದಿಸಿದವನನ್ನು ನಿಂದಿಸದೆ, ಅವನನ್ನು ಆಶೀರ್ವದಿಸುವಂತೆ ದೇವರಲ್ಲಿ ಬೇಡಿಕೊಳ್ಳಿರಿ. ಏಕೆಂದರೆ ಆಶೀರ್ವಾದವನ್ನು ಹೊಂದಿಕೊಳ್ಳಲು ನೀವು ಕರೆಯಲ್ಪಟ್ಟವರಾಗಿದ್ದೀರಿ.


ಅವರ ದುಷ್ಕೃತ್ಯಗಳಿಗಾಗಿ ನಾನು ಅವರನ್ನು ಶಿಕ್ಷಿಸುವೆನು. ಅವರು ಜಾರಿ ಕೆಟ್ಟಕಾರ್ಯಗಳನ್ನು ಮಾಡಿದಾಗ ನಾನು ಅವರನ್ನು ಶಿಕ್ಷಿಸುವೆನು. ಅವರ ಮಹಾಸಂಕಟ ಕಾಲವು ಹತ್ತಿರವೇ ಇದೆ. ಅವರಿಗೋಸ್ಕರ ಸಿದ್ಧವಾಗಿರುವ ಶಿಕ್ಷೆಯು ಬೇಗನೆ ಬರುತ್ತದೆ.’


ಜನರು ಕ್ರಿಸ್ತನನ್ನು ಬಯ್ದರೂ ಆತನು ಅವರನ್ನು ಬಯ್ಯಲಿಲ್ಲ. ಆತನು ಸಂಕಟವನ್ನು ಅನುಭವಿಸಿದರೂ ಜನರನ್ನು ಹೆದರಿಸಲಿಲ್ಲ. ಆತನು ತನ್ನ ಕಾರ್ಯವನ್ನು ದೇವರಿಗೆ ವಹಿಸಿದನು. ಸರಿಯಾದ ನ್ಯಾಯತೀರ್ಪು ನೀಡುವಾತನು ದೇವರೊಬ್ಬನೇ.


ಆದರೆ ನಾನು ನಿಮಗೆ ಹೇಳುವುದೇನೆಂದರೆ, ದುಷ್ಟನಿಗೆ ವಿರೋಧವಾಗಿ ನಿಂತುಕೊಳ್ಳಬೇಡಿ. ಯಾವನಾದರೂ ನಿಮ್ಮ ಬಲಗೆನ್ನೆಗೆ ಹೊಡೆದರೆ, ಅವನಿಗೆ ಮತ್ತೊಂದು ಕೆನ್ನೆಯನ್ನೂ ಒಡ್ಡಿರಿ.


ಆದ್ದರಿಂದ ದೇವರ ಅಪೇಕ್ಷೆಯಂತೆ ಸಂಕಟಪಡುವವರು ತಮ್ಮ ಜೀವಾತ್ಮಗಳನ್ನು ಆತನಿಗೆ ಒಪ್ಪಿಸಿಕೊಡಬೇಕು. ಅವರನ್ನು ಸೃಷ್ಟಿಸಿದಾತನು ದೇವರೇ. ಆದ್ದರಿಂದ ಅವರು ಆತನಲ್ಲಿ ಭರವಸವಿಡತಕ್ಕದ್ದು. ಹೀಗಿರಲಾಗಿ ಅವರು ಒಳ್ಳೆಯದನ್ನು ಮಾಡುತ್ತಲೇ ಇರಬೇಕು.


ಯೆಹೋವನ ಸಹಾಯಕ್ಕಾಗಿ ಕಾದುಕೊಂಡಿರಿ! ಬಲವಾಗಿಯೂ ಧೈರ್ಯವಾಗಿಯೂ ಇರಿ! ಯೆಹೋವನ ಸಹಾಯಕ್ಕಾಗಿ ಕಾದುಕೊಂಡಿರಿ!


ಯೆಹೋವನು ನನಗುಂಟಾಗುತ್ತಿರುವ ಕೇಡುಗಳನ್ನು ನೋಡಿ ಶಿಮ್ಮಿಯ ಶಾಪಕ್ಕೆ ಬದಲಾಗಿ ಶುಭವನ್ನು ಅನುಗ್ರಹಿಸಬಹುದೇನೋ” ಎಂದನು.


ಆದರೆ ಯೆಹೋವನಲ್ಲಿ ಭರವಸೆಯಿಟ್ಟವರು ಮತ್ತೆ ಬಲಹೊಂದುವರು. ಹದ್ದು ಹೊಸಗರಿಗಳನ್ನು ಹೊಂದುವಂತೆ ಅವರು ಹೊಸ ಬಲವನ್ನು ಹೊಂದುವರು. ಅವರು ಓಡಾಡಿದರೂ ಆಯಾಸಗೊಳ್ಳುವದಿಲ್ಲ. ನಡೆದಾಡಿದರೂ ಬಳಲಿಹೋಗುವುದಿಲ್ಲ.


ಯೆಹೋವನನ್ನೇ ನಿರೀಕ್ಷಿಸಿಕೊಂಡು ಆತನ ಮಾರ್ಗವನ್ನು ಅನುಸರಿಸಿರಿ. ಆಗ ಆತನು ನಿಮ್ಮನ್ನು ಜಯಶಾಲಿಗಳನ್ನಾಗಿ ಮಾಡುವನು; ದೇವರು ವಾಗ್ದಾನ ಮಾಡಿದ ಭೂಮಿಯನ್ನು ನೀವು ಪಡೆದುಕೊಳ್ಳುವಿರಿ.


ಸುಲಭವಾಗಿ ಬಾಚಿಕೊಂಡ ಸ್ವಾಸ್ತ್ಯವು ಕೊನೆಯಲ್ಲಿ ಆರ್ಶೀವಾದದಾಯಕವಾಗಿರುವುದಿಲ್ಲ.


ಜನರು ನಿಮಗೆ ಮಾಡುವ ಕೆಟ್ಟಕಾರ್ಯಗಳನ್ನು ಮರೆತುಬಿಡಿರಿ. ನಿಮ್ಮ ಜನರಲ್ಲಿ ಒಬ್ಬನಾಗಿರುವವನ ಮೇಲೆ ಸೇಡನ್ನು ತೀರಿಸಿಕೊಳ್ಳಲು ಪ್ರಯತ್ನಿಸಬೇಡಿರಿ; ದ್ವೇಷವನ್ನೂ ಇಟ್ಟುಕೊಳ್ಳಬೇಡಿ. ನಿಮ್ಮ ನೆರೆಯವನನ್ನು ನಿಮ್ಮಂತೆಯೇ ಪ್ರೀತಿಸಿರಿ. ನಾನೇ ಯೆಹೋವನು!


ಆಗ ದಾವೀದನು ತನ್ನ ಜನರಿಗೆ, “ನಿಮ್ಮ ಆಯುಧಗಳನ್ನು ಸೊಂಟಕ್ಕೆ ಕಟ್ಟಿಕೊಳ್ಳಿರಿ!” ಎಂದು ಹೇಳಿದನು. ದಾವೀದನು ಮತ್ತು ಅವನ ಜನರು ಆಯುಧಗಳನ್ನು ಕಟ್ಟಿಕೊಂಡರು. ದಾವೀದನ ಸಂಗಡ ಸುಮಾರು ನಾನೂರು ಜನರು ಹೋದರು; ಇನ್ನೂರು ಜನರು ಸರಕುಗಳ ಬಳಿಯಲ್ಲಿ ಉಳಿದುಕೊಂಡರು.


ಯೆಹೋವನು ನೀತಿವಂತರಿಗೆ ಸಹಾಯಕನಾಗಿ ಅವರನ್ನು ರಕ್ಷಿಸುತ್ತಾನೆ. ನೀತಿವಂತರು ಆತನನ್ನು ಆಶ್ರಯಿಸಿಕೊಂಡಾಗ ಆತನು ಅವರನ್ನು ದುಷ್ಟರಿಂದ ತಪ್ಪಿಸಿ ಕಾಪಾಡುವನು.


ಜ್ಞಾನಿಗೆ ಅವನ ಜ್ಞಾನವೇ ಸನ್ಮಾನವನ್ನು ತರುತ್ತದೆ. ತನಗೆ ತಪ್ಪು ಮಾಡಿದವರನ್ನು ಕ್ಷಮಿಸುವುದು ಅವನ ಸದ್ಗುಣವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು