ಜ್ಞಾನೋಕ್ತಿಗಳು 21:1 - ಪರಿಶುದ್ದ ಬೈಬಲ್1 ಯೆಹೋವನು ರಾಜನ ಮನಸ್ಸನ್ನು ನೀರಿನ ಕಾಲುವೆಯಂತೆ ಹತೋಟಿಯಲ್ಲಿಡುವನು. ಆತನು ತನ್ನ ಇಷ್ಟಾನುಸಾರ ಅದಕ್ಕೆ ಮಾರ್ಗದರ್ಶನ ನೀಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ರಾಜನ ಸಂಕಲ್ಪಗಳು ಯೆಹೋವನ ಕೈಯಲ್ಲಿ ಇರುವ ನೀರಿನ ಕಾಲುವೆಗಳಂತೆ ಇವೆ, ಆತನು ತನಗೆ ಬೇಕಾದ ಕಡೆಗೆ ಅದನ್ನು ತಿರುಗಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ರಾಜನ ಹೃದಯ ಸರ್ವೇಶ್ವರನ ಕೈಯಲ್ಲಿ; ತಿರುಗಿಸಬಲ್ಲ ಆತ ಅದನ್ನು ನೀರಿನ ಕಾಲುವೆಯ ಪರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ರಾಜನ ಸಂಕಲ್ಪಗಳು ಯೆಹೋವನ ಕೈಯಲ್ಲಿ ನೀರಿನ ಕಾಲುವೆಗಳಂತೆ ಇವೆ; ತನಗೆ ಬೇಕಾದ ಕಡೆಗೆ ತಿರುಗಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಅರಸನ ಹೃದಯವು ಯೆಹೋವ ದೇವರ ಕೈಯಲ್ಲಿ ನೀರಿನ ಕಾಲುವೆಗಳಂತೆ; ತನಗೆ ಇಷ್ಟವಾದ ಕಡೆಗೆ ಆತನು ಅದನ್ನು ತಿರುಗಿಸುತ್ತಾನೆ. ಅಧ್ಯಾಯವನ್ನು ನೋಡಿ |
ಯೋಸೇಫನಿಗೆ ಅಲ್ಲಿ ಅನೇಕ ತೊಂದರೆಗಳು ಬಂದವು. ಆದರೆ ದೇವರು ಆ ಎಲ್ಲಾ ತೊಂದರೆಗಳಿಂದ ಅವನನ್ನು ರಕ್ಷಿಸಿದನು. ಆಗ ಫರೋಹನು ಈಜಿಪ್ಟಿನ ರಾಜನಾಗಿದ್ದನು. ದೇವರು ಯೋಸೇಫನಿಗೆ ಕೊಟ್ಟ ಜ್ಞಾನದ ದೆಸೆಯಿಂದ ಫರೋಹನು ಯೋಸೇಫನನ್ನು ಇಷ್ಟಪಟ್ಟನು ಮತ್ತು ಗೌರವಿಸಿದನು. ಫರೋಹನು ಯೋಸೇಫನನ್ನು ಈಜಿಪ್ಟಿನ ರಾಜ್ಯಪಾಲನನ್ನಾಗಿಯೂ ತನ್ನ ಮನೆಯಲ್ಲಿದ್ದ ಎಲ್ಲಾ ಜನರ ಮೇಲೆ ಅಧಿಪತಿಯನ್ನಾಗಿಯೂ ಮಾಡಿದನು.
ಆದ್ದರಿಂದ ಯೆಹೋವನೇ, ನನ್ನ ಪ್ರಾರ್ಥನೆಯನ್ನು ಆಲೈಸು. ನಾನು ನಿನ್ನ ಸೇವಕ. ನಿನ್ನ ಹೆಸರನ್ನು ಗೌರವಿಸುವ ನಿನ್ನ ಸೇವಕರ ಪ್ರಾರ್ಥನೆಗೆ ಕಿವಿಗೊಡು. ನಾನು ಅರಸನ ಪಾನದಾಯಕನಾಗಿದ್ದೇನೆಂದು ನೀನು ತಿಳಿದಿರುವೆ. ಆದ್ದರಿಂದ ಈ ಹೊತ್ತು ನನಗೆ ಸಹಾಯ ಮಾಡು. ಅರಸನಲ್ಲಿ ಸಹಾಯಕ್ಕಾಗಿ ಕೇಳಿಕೊಳ್ಳುವಾಗ ನನಗೆ ನೆರವು ನೀಡು; ನನಗೆ ಯಶಸ್ಸನ್ನು ದಯಪಾಲಿಸು; ರಾಜನಿಗೆ ನಾನು ಮೆಚ್ಚಿಕೆಯುಳ್ಳವನಾಗಿ ಕಂಡುಬರುವಂತೆ ಸಹಾಯಮಾಡು.”