Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 21:12 - ಪರಿಶುದ್ದ ಬೈಬಲ್‌

12 ದೇವರು ನೀತಿಸ್ವರೂಪನು. ಆತನು ದುಷ್ಟರ ದುಷ್ಕೃತ್ಯಗಳನ್ನು ಬಲ್ಲವನಾಗಿದ್ದು ಅವರನ್ನು ದಂಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನೀತಿಸ್ವರೂಪನು ಅಧರ್ಮಿಯ ಮನೆಯನ್ನು ಲಕ್ಷ್ಯಕ್ಕೆ ತಂದು, ಅಧರ್ಮಿಗಳನ್ನು ಕೆಡವಿ ಅವರನ್ನು ಕೇಡಿಗೆ ತಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಸತ್ಯಸ್ವರೂಪನ ದೃಷ್ಟಿ ದುಷ್ಟರ ಮನೆಯ ಮೇಲೆ; ಆ ದುರುಳರನ್ನು ದಬ್ಬಿಬಿಡುವನು ಕೇಡಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಧರ್ಮಸ್ವರೂಪನು ಅಧರ್ಮಿಯ ಮನೆಯನ್ನು ಲಕ್ಷ್ಯಕ್ಕೆತಂದು ಅಧರ್ಮಿಗಳನ್ನು ಕೆಡವಿ ಕೇಡಿಗೆ ದೊಬ್ಬುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನೀತಿವಂತನು ದುಷ್ಟರ ಮನೆಯನ್ನು ಗಮನಿಸುತ್ತಾನೆ; ದುಷ್ಟರನ್ನು ಕೇಡಿಗೆ ತಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 21:12
20 ತಿಳಿವುಗಳ ಹೋಲಿಕೆ  

ದುಷ್ಟನ ಮನೆ ನಾಶಕರ; ಶಿಷ್ಟನ ಮನೆ ಅಭಿವೃದ್ಧಿಕರ.


ಆದರೂ ಅವರಲ್ಲಿ ಅನೇಕರು ದೇವರ ಮೆಚ್ಚುಗೆಗೆ ಪಾತ್ರರಾಗಲಿಲ್ಲ. ಅವರು ಮರುಭೂಮಿಯಲ್ಲಿ ಕೊಲ್ಲಲ್ಪಟ್ಟರು.


“ಸೊದೋಮ್ ಗೊಮೋರವನ್ನು ನಾಶಮಾಡಿದಂತೆ ನಾನು ನಿಮ್ಮನ್ನು ನಾಶಮಾಡಿದೆನು. ಆ ನಗರಗಳು ಸಂಪೂರ್ಣವಾಗಿ ನಾಶವಾದವು. ನೀವು ಬೆಂಕಿಯಿಂದ ಎಳೆದ ಕೊಳ್ಳಿಯಂತಿದ್ದೀರಿ. ಆದರೂ ನೀವು ಸಹಾಯಕ್ಕಾಗಿ ನನ್ನ ಬಳಿಗೆ ಬರಲಿಲ್ಲ.” ಇದು ಯೆಹೋವನ ನುಡಿ.


ದುಷ್ಟನು ತನ್ನ ಕೆಡುಕಿನಿಂದಲೇ ಸೋತುಹೋಗುವನು; ಆದರೆ ಒಳ್ಳೆಯವನು ಮರಣದ ಸಮಯದಲ್ಲೂ ಜಯಶಾಲಿಯಾಗುವನು.


ಜ್ಞಾನಿಯು ಇವುಗಳನ್ನು ನೆನಪು ಮಾಡಿಕೊಂಡು ದೇವರ ನಿಜಪ್ರೀತಿಯನ್ನು ಅರ್ಥಮಾಡಿಕೊಳ್ಳುವನು.


ದೇವರು ನಿನ್ನನ್ನು ಶಾಶ್ವತವಾಗಿ ನಾಶಮಾಡುವನು, ಗಿಡವನ್ನು ಬೇರು ಸಹಿತ ಕಿತ್ತುಹಾಕುವಂತೆ ಆತನು ನಿನ್ನನ್ನು ಹಿಡಿದು ನಿನ್ನ ಮನೆಯೊಳಗಿಂದ ಕಿತ್ತು ಬೀಸಾಡುವನು.


ಅವನು ಜೇಡರಬಲೆಯನ್ನು ಒರಗಿಕೊಳ್ಳುವನು, ಆದರೆ ಬಲೆಯು ಕಿತ್ತುಹೋಗುವುದು. ಅವನು ಜೇಡರಬಲೆಯನ್ನು ಹಿಡಿದುಕೊಳ್ಳುವನು, ಆದರೆ ಅದು ಅವನಿಗೆ ಆಧಾರ ನೀಡುವುದಿಲ್ಲ.


ಅಭಿವೃದ್ಧಿಯಾಗುತ್ತಿರುವ ಮೂರ್ಖನನ್ನು ನಾನು ನೋಡಿದ್ದೇನೆ. ಇದ್ದಕ್ಕಿದ್ದಂತೆ ಅವನ ಮನೆಯು ಶಾಪಗ್ರಸ್ತವಾಯಿತು.


ಬುದ್ಧಿವಂತ ಮನುಷ್ಯನು ಇವುಗಳನ್ನು ಅರ್ಥಮಾಡಿಕೊಳ್ಳುತ್ತಾನೆ. ಜಾಣನು ಇದನ್ನು ಕಲಿತುಕೊಳ್ಳುತ್ತಾನೆ. ಯೆಹೋವನ ಮಾರ್ಗವು ಸರಿಯಾದದ್ದು. ಒಳ್ಳೆಯ ಜನರು ಅವರೊಂದಿಗೆ ಜೀವಿಸುವರು. ಪಾಪಿಗಳು ಅವುಗಳಿಂದ ಸಾಯುವರು.


ನೀತಿಯು ಯಥಾರ್ಥವಂತನನ್ನು ಕಾಪಾಡುವುದು. ಕೆಡುಕತನವು ಪಾಪವನ್ನು ಪ್ರೀತಿಸುವವನನ್ನು ಸೋಲಿಸುವುದು.


ದೇವರು ಆ ಸೀಮೆಯ ನಗರಗಳನ್ನು ನಾಶಮಾಡಿದರೂ ಅಬ್ರಹಾಮನನ್ನು ಜ್ಞಾಪಿಸಿಕೊಂಡು ಲೋಟನ ಪ್ರಾಣವನ್ನು ಉಳಿಸಿದನು; ಆದರೆ ಲೋಟನು ವಾಸಿಸುತ್ತಿದ್ದ ನಗರವನ್ನು ನಾಶಮಾಡಿದನು.


ಕೆಡುಕರು ದೇಶವನ್ನು ಆಳುತ್ತಿದ್ದರೆ, ಎಲ್ಲೆಲ್ಲೂ ಪಾಪವಿರುವುದು. ಆದರೆ ಒಳ್ಳೆಯವರಿಗೆ ಕೊನೆಯಲ್ಲಿ ಜಯವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು