Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 21:19 - ಪರಿಶುದ್ದ ಬೈಬಲ್‌

19 ಮುಂಗೋಪಿಯೂ ವಾದಿಸುವವಳೂ ಆಗಿರುವ ಹೆಂಡತಿಯೊಡನೆ ಜೀವಿಸುವುದಕ್ಕಿಂತ ಮರಳುಗಾಡಿನಲ್ಲಿ ಜೀವಿಸುವುದೇ ಮೇಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಕಾಡುವ ಜಗಳಗಂಟಿಯ ಸಹವಾಸಕ್ಕಿಂತಲೂ, ಕಾಡಿನ ವಾಸವೇ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಕಾಡುವ ಜಗಳಗಂಟಿಯ ಸಹವಾಸಕ್ಕಿಂತಲು ಕಾಡಿನಲ್ಲಿ ಒಂಟಿಯಾಗಿ ವಾಸಿಸುವುದೇ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಕಾಡುವ ಜಗಳಗಂಟಿಯ ಸಹವಾಸಕ್ಕಿಂತಲೂ ಕಾಡಿನ ವಾಸವೇ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಕಾಡುವ ಜಗಳಗಂಟಿ ಹೆಂಡತಿಯೊಂದಿಗೆ ವಾಸಮಾಡುವುದಕ್ಕಿಂತ, ಮರಭೂಮಿಯಲ್ಲಿ ವಾಸಿಸುವುದು ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 21:19
7 ತಿಳಿವುಗಳ ಹೋಲಿಕೆ  

ಮನೆಯೊಳಗೆ ವಾದಿಸುವ ಹೆಂಡತಿಯ ಜೊತೆಯಲ್ಲಿ ವಾಸಿಸುವುದಕ್ಕಿಂತ ಮನೆಯ ಮೇಲ್ಛಾವಣಿಗೆಯ ಮೂಲೆಯಲ್ಲಿ ವಾಸಿಸುವುದೇ ಮೇಲು.


ಮರಳುಗಾಡಿನಲ್ಲಿ ನನಗೊಂದು ಸ್ಥಳವಿದ್ದಿದ್ದರೆ, ಪ್ರಯಾಣಿಕರು ರಾತ್ರಿಯಲ್ಲಿ ತಂಗುವ ಮನೆ ಇದ್ದಿದ್ದರೆ, ನಾನು ನನ್ನ ಜನರನ್ನು ಅಲ್ಲಿ ಬಿಟ್ಟು, ಅವರಿಂದ ದೂರ ಹೋಗಬಹುದಾಗಿತ್ತು. ಏಕೆಂದರೆ ಅವರೆಲ್ಲರೂ ದೇವರಿಗೆ ದ್ರೋಹ ಮಾಡುತ್ತಿದ್ದಾರೆ, ಅವರೆಲ್ಲರೂ ಆತನಿಗೆ ವಿರೋಧವಾಗಿ ತಿರುಗಿಬಿದ್ದಿದ್ದಾರೆ.


ಮೂಢನಾದ ಮಗನು ತಂದೆಗೆ ಹಾನಿ; ವಾದಿಸುವ ಹೆಂಡತಿಯು ಸೋರುವ ಮೇಲ್ಛಾವಣಿಯಂತಿದ್ದಾಳೆ.


ವಾದವನ್ನೇ ಇಚ್ಛಿಸುವ ಹೆಂಡತಿ ಮಳೆ ದಿನದಲ್ಲಿ ಸೋರುತ್ತಲೇ ಇರುವ ಮೇಲ್ಛಾವಣಿಯಂತಿರುವಳು.


ಪ್ರೀತಿಯನ್ನು ಕಂಡಿಲ್ಲದಿದ್ದರೂ ಮದುವೆಯಾಗುವ ಸ್ತ್ರೀ ಮತ್ತು ತನ್ನ ಯಜಮಾನಿಯ ಸ್ಥಾನವನ್ನು ಕಸಿದುಕೊಳ್ಳುವ ಸೇವಕಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು