Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 21:20 - ಪರಿಶುದ್ದ ಬೈಬಲ್‌

20 ಜ್ಞಾನಿಯ ಮನೆಯಲ್ಲಿ ಬೆಲೆಬಾಳುವ ಭಂಡಾರಗಳೂ ಪರಿಮಳದ್ರವ್ಯಗಳೂ ಇರುತ್ತವೆ. ಮೂಢನಾದರೋ ತನ್ನಲ್ಲಿರುವ ಪ್ರತಿಯೊಂದನ್ನೂ ಬೇಗನೆ ಹಾಳುಮಾಡಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಜ್ಞಾನಿಯ ನಿವಾಸದಲ್ಲಿ ಎಣ್ಣೆಯು ಮತ್ತು ಶ್ರೇಷ್ಠ ಸಂಪತ್ತು ಇರುವವು, ಜ್ಞಾನಹೀನನು ಇದ್ದದ್ದನ್ನೆಲ್ಲಾ ನುಂಗಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಬುದ್ಧಿವಂತನ ಮನೆಯ ಸಿರಿ, ಎಣ್ಣೆ ಬೆಣ್ಣೆ; ಬುದ್ಧಿಹೀನನು ನುಂಗಿಬಿಡುವನು ಸರ್ವಸ್ವವನ್ನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಜ್ಞಾನಿಯ ನಿವಾಸದಲ್ಲಿ ಎಣ್ಣೆಯೂ ಶ್ರೇಷ್ಠ ಸಂಪತ್ತೂ ಇರುವವು, ಜ್ಞಾನಹೀನನು ಇದ್ದದ್ದನ್ನೆಲ್ಲಾ ನುಂಗಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಜ್ಞಾನವಂತರ ನಿವಾಸದಲ್ಲಿ ಆಯ್ದ ಐಶ್ವರ್ಯವೂ, ಎಣ್ಣೆಯೂ ಇರುತ್ತವೆ; ಆದರೆ ಬುದ್ಧಿಹೀನನು ಇದ್ದದ್ದೆಲ್ಲವನ್ನು ನುಂಗಿಬಿಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 21:20
20 ತಿಳಿವುಗಳ ಹೋಲಿಕೆ  

ಅವನ ಕುಟುಂಬದವರು ಐಶ್ವರ್ಯವಂತರಾಗುವರು. ಅವನ ನೀತಿಯು ಶಾಶ್ವತವಾಗಿರುವುದು.


ದೇವರು ಒಬ್ಬನಿಗೆ ಐಶ್ವರ್ಯವನ್ನೂ ಆಸ್ತಿಯನ್ನೂ ಮತ್ತು ಅವುಗಳನ್ನು ಅನುಭವಿಸುವ ಭಾಗ್ಯವನ್ನೂ ಕೊಟ್ಟಿದ್ದರೆ ಅವನು ಅವುಗಳನ್ನು ಅನುಭವಿಸಲಿ. ಅವನು ತನಗಿರುವಂಥವುಗಳನ್ನು ಹೊಂದಿಕೊಂಡು ತನ್ನ ದುಡಿಮೆಯಲ್ಲಿ ಸಂತೋಷಿಸಲಿ. ಅದು ದೇವರ ಅನುಗ್ರಹವಷ್ಟೇ.


ನಿನಗೆ ಆಸ್ತಿಯಿದ್ದರೆ ಜ್ಞಾನವು ಮತ್ತಷ್ಟು ಉಪಯುಕ್ತವಾಗಿದೆ. ನಿಜವಾಗಿಯೂ ಜ್ಞಾನಿಗಳು ಐಶ್ವರ್ಯವನ್ನು ಹೇರಳವಾಗಿ ಪಡೆದುಕೊಳ್ಳುವರು.


ಒಳ್ಳೆಯವರ ಮನೆಗಳಲ್ಲಿ ಬಹಳ ಐಶ್ವರ್ಯವಿರುತ್ತದೆ. ಕೆಡುಕರ ಸಂಪಾದನೆಯಾದರೋ ಆಪತ್ತನ್ನು ಬರಮಾಡುತ್ತದೆ.


ಐಶ್ವರ್ಯವು ಯೆಹೋವನ ಆಶೀರ್ವಾದವೇ. ಶ್ರಮದ ಕೆಲಸವು ಅದನ್ನು ಹೆಚ್ಚಿಸಲಾರದು.


ಯೇಸು ತನ್ನ ಶಿಷ್ಯರಿಗೆ ಹೀಗೆಂದನು: “ಒಂದಾನೊಂದು ಕಾಲದಲ್ಲಿ ಒಬ್ಬ ಐಶ್ವರ್ಯವಂತನಿದ್ದನು. ಈ ಐಶ್ವರ್ಯವಂತನು ತನ್ನ ವ್ಯಾಪಾರವನ್ನು ನೋಡಿಕೊಳ್ಳಲು ಒಬ್ಬ ಮೇಲ್ವಿಚಾರಕನನ್ನು ನೇಮಿಸಿದನು. ಸ್ವಲ್ಪಕಾಲದ ನಂತರ, ಆ ಮೇಲ್ವಿಚಾರಕನು ತನಗೆ ಮೋಸಮಾಡುತ್ತಿದ್ದಾನೆಂಬುದು ಐಶ್ವರ್ಯವಂತನಿಗೆ ತಿಳಿಯಿತು.


ಸ್ವಲ್ಪಕಾಲದ ನಂತರ, ಆ ದೇಶದಲ್ಲಿ ಕ್ಷಾಮ ಉಂಟಾಯಿತು. ಆ ದೇಶದ ಯಾವ ಭಾಗದಲ್ಲಿಯೂ ಸಾಕಷ್ಟು ಆಹಾರವಿರಲಿಲ್ಲ. ಅವನು ಬಹಳ ಹಸಿವೆಗೊಂಡಿದ್ದನು. ಅವನಿಗೆ ಹಣದ ಅಗತ್ಯತೆಯಿತ್ತು.


ವೈರಿಗಳ ಎದುರಿನಲ್ಲಿ ನೀನು ನನಗೆ ಔತಣವನ್ನು ಸಿದ್ಧಪಡಿಸಿರುವೆ; ನನ್ನ ತಲೆಗೆ ಎಣ್ಣೆಯನ್ನು ಹಚ್ಚಿರುವೆ. ನನ್ನ ಪಾತ್ರೆಯು ತುಂಬಿ ಹೊರಸೂಸುತ್ತಿದೆ.


ಒಳ್ಳೆಯವನ ಹೃದಯದಲ್ಲಿ ಒಳ್ಳೆಯವು ಇರುತ್ತವೆ. ಆದ್ದರಿಂದ ಅವನ ಹೃದಯದೊಳಗಿಂದ ಒಳ್ಳೆಯವು ಹೊರಬರುತ್ತವೆ. ಆದರೆ ಕೆಟ್ಟವನ ಹೃದಯದಲ್ಲಿ ಕೆಟ್ಟವು ಇರುತ್ತವೆ. ಆದ್ದರಿಂದ ಅವನ ಹೃದಯದೊಳಗಿಂದ ಕೆಟ್ಟವು ಹೊರಬರುತ್ತವೆ. ಹೃದಯದಲ್ಲಿ ತುಂಬಿರುವುದೇ ಬಾಯಲ್ಲಿ ಬರುವುದು.


ಬುದ್ಧಿಹೀನ ಕನ್ನಿಕೆಯರು ಬುದ್ಧಿವಂತ ಕನ್ನಿಕೆಯರಿಗೆ, ‘ನಿಮ್ಮ ಎಣ್ಣೆಯಲ್ಲಿ ನಮಗೆ ಸ್ವಲ್ಪ ಕೊಡಿ. ನಮ್ಮ ದೀಪಾರತಿಗಳಲ್ಲಿದ್ದ ಎಣ್ಣೆಯೆಲ್ಲಾ ಮುಗಿಯಿತು’ ಎಂದರು.


ಆದರೆ ಉಳಿದ ಹತ್ತು ಜನರು ಇಷ್ಮಾಯೇಲನಿಗೆ, “ನಮ್ಮನ್ನು ಕೊಲ್ಲಬೇಡ, ನಮ್ಮಲ್ಲಿ ಗೋಧಿ, ಜವೆಗೋಧಿ, ಎಣ್ಣೆ ಮತ್ತು ಜೇನುತುಪ್ಪ ಇವೆ. ನಾವು ಆ ವಸ್ತುಗಳನ್ನು ಒಂದು ಹೊಲದಲ್ಲಿ ಬಚ್ಚಿಟ್ಟಿದ್ದೇವೆ” ಎಂದು ಹೇಳಿದರು. ಆದ್ದರಿಂದ ಇಷ್ಮಾಯೇಲನು ಆ ಹತ್ತು ಮಂದಿಯನ್ನು ಬಿಟ್ಟುಬಿಟ್ಟನು. ಅವನು ಬೇರೆಯವರೊಂದಿಗೆ ಅವರನ್ನು ಕೊಲ್ಲಲಿಲ್ಲ.


ಊಟವು ಸಂತೋಷಗೊಳಿಸುವುದು; ದ್ರಾಕ್ಷಾರಸವು ಉಲ್ಲಾಸಗೊಳಿಸುವುದು; ಹಣವು ಅನೇಕ ಸಮಸ್ಯೆಗಳನ್ನು ಬಗೆಹರಿಸುವುದು.


ದುಷ್ಟನು ಗಳಿಸಿದ ಲಾಭಗಳು ಬೇರೆಯವರ ಪಾಲಾಗುವುದು. ತನ್ನ ಲಾಭವನ್ನು ಅನುಭವಿಸಲು ಅವನಿಗೆ ಸಾಧ್ಯವಾಗದು.


ದುಷ್ಟನು ಐಶ್ವರ್ಯವನ್ನು ನುಂಗಿಕೊಂಡಿದ್ದರೂ ಅದನ್ನು ಕಕ್ಕಿಬಿಡುವನು. ಹೌದು, ದೇವರು ಅದನ್ನು ದುಷ್ಟನ ಹೊಟ್ಟೆಯೊಳಗಿಂದ ಕಕ್ಕಿಸಿಬಿಡುವನು.


ನನ್ನನ್ನು ಪ್ರೀತಿಸುವವರಿಗೆ ನಾನು ಐಶ್ವರ್ಯವನ್ನು ಕೊಡುವೆನು. ಹೌದು, ಅವರ ಉಗ್ರಾಣಗಳನ್ನು ತುಂಬಿಸುವೆನು.


ಜ್ಞಾನಿಗಳಿಗೆ ದೊರೆಯುವ ಪ್ರತಿಫಲ ಐಶ್ವರ್ಯ. ಜ್ಞಾನಹೀನರಿಗೆ ದೊರೆಯುವ ಪ್ರತಿಫಲ ಮೂಢತನ.


ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿದ್ದು ದೀನತೆಯಿಂದಿರು; ಆಗ ನೀನು ಐಶ್ವರ್ಯ, ಸನ್ಮಾನ ಮತ್ತು ನಿಜಜೀವವನ್ನು ಹೊಂದಿಕೊಳ್ಳುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು