ಜ್ಞಾನೋಕ್ತಿಗಳು 21:24 - ಪರಿಶುದ್ದ ಬೈಬಲ್24 ಗರ್ವಿಷ್ಠನೂ ದುರಾಭಿಮಾನಿಯೂ ಆಗಿರುವವನಿಗೆ ಗೇಲಿಗಾರನೆಂದು ಹೆಸರು. ಅವನ ನಡತೆಯು ಗರ್ವದ ಮದದಿಂದ ಕೂಡಿರುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 “ಧರ್ಮನಿಂದಕ” ಎನ್ನಿಸಿಕೊಳ್ಳುವವನು ಸೊಕ್ಕೇರಿದ ಅಹಂಕಾರಿಯಾಗಿ, ಗರ್ವ ಮತ್ತು ಮದದಿಂದ ಪ್ರವರ್ತಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಸೊಕ್ಕೇರಿದ ಗರ್ವಿ ಕುಚೋದ್ಯನೆನಿಸಿಕೊಳ್ಳುವನು; ಅಹಂಕಾರ, ಮದಮತ್ಸರಗಳಿಂದ ಅವನು ವರ್ತಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಧರ್ಮನಿಂದಕನೆನಿಸಿಕೊಳ್ಳುವ ಸೊಕ್ಕೇರಿದ ಅಹಂಕಾರಿಯು ಗರ್ವಮದದಿಂದ ಪ್ರವರ್ತಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಸೊಕ್ಕೇರಿ ಗರ್ವದಲ್ಲಿ ವರ್ತಿಸುವವನ ಹೆಸರು ಅಹಂಕಾರಿ ಮತ್ತು ಪರಿಹಾಸ್ಯಕ. ಅಧ್ಯಾಯವನ್ನು ನೋಡಿ |
ಜ್ಞಾನಿಗಳು ತನಗೆ ಮೋಸಮಾಡಿದರೆಂಬುದು ತಿಳಿದಾಗ ಹೆರೋದನು ಬಹಳ ಕೋಪಗೊಂಡನು. ಆ ಮಗು ಹುಟ್ಟಿದ ಸಮಯವನ್ನು ಹೆರೋದನು ಜ್ಞಾನಿಗಳಿಂದ ತಿಳಿದುಕೊಂಡಿದ್ದನು. ಆ ಮಗು ಹುಟ್ಟಿ ಎರಡು ವರ್ಷಗಳಾಗಿದ್ದವು. ಆದ್ದರಿಂದ ಹೆರೋದನು ಬೆತ್ಲೆಹೇಮಿನಲ್ಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿದ್ದ ಎರಡು ವರ್ಷದ ಮತ್ತು ಅವರಿಗಿಂತ ಚಿಕ್ಕವರಾದ ಗಂಡುಮಕ್ಕಳನ್ನೆಲ್ಲಾ ಕೊಲ್ಲಬೇಕೆಂದು ಆಜ್ಞಾಪಿಸಿದನು.
ಯೆಹೋವನು ಹೇಳಿದ್ದು: “ಒಬ್ಬನನ್ನು ದ್ರಾಕ್ಷಾರಸವು ಮೋಸಪಡಿಸಬಹುದು. ಅದೇ ರೀತಿಯಲ್ಲಿ ಬಲಿಷ್ಠನ ಗರ್ವವು ಅವನನ್ನು ಮೋಸಪಡಿಸಬಹುದು. ಆದರೆ ಅವನಿಗೆ ಸಮಾಧಾನ ಸಿಕ್ಕುವುದಿಲ್ಲ. ಅವನು ಮರಣದಂತಿರುವನು. ಅವನಿಗೆ ಯಾವಾಗಲೂ ಹೆಚ್ಚೆಚ್ಚು ಬೇಕು. ಮರಣದಂತೆ ಅವನಿಗೆ ತೃಪ್ತಿಯೇ ಇರದು. ಅವನು ಜನಾಂಗಗಳನ್ನು ಸೋಲಿಸುತ್ತಲೇ ಇರುವನು. ಆ ಜನರನ್ನು ತನ್ನ ಕೈದಿಗಳನ್ನಾಗಿ ಮಾಡುತ್ತಲೇ ಇರುವನು.