ಜ್ಞಾನೋಕ್ತಿಗಳು 21:7 - ಪರಿಶುದ್ದ ಬೈಬಲ್7 ಕೆಡುಕರು ಕೊಡುವ ಹಿಂಸೆಯು ಅವರನ್ನೇ ನಾಶಮಾಡುತ್ತದೆ; ಯಾಕೆಂದರೆ ಒಳ್ಳೆಯದನ್ನು ಮಾಡಲು ಅವರು ಒಪ್ಪುವುದೇ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ದುಷ್ಟರು ನ್ಯಾಯವನ್ನು ನಿರಾಕರಿಸುವ ಕಾರಣ, ಅವರ ಬಲಾತ್ಕಾರವು ಅವರನ್ನೇ ಎಳೆದುಕೊಂಡು ಹೋಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ದುಷ್ಟರು ನ್ಯಾಯವನ್ನು ನಿರಾಕರಿಸುವ ಕಾರಣ, ಅವರನ್ನೇ ಎಳೆದೊಯ್ಯುವುದು ಅವರ ಹಿಂಸಾಚಾರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ದುಷ್ಟರು ನ್ಯಾಯವನ್ನು ನಿರಾಕರಿಸುವ ಕಾರಣ ಅವರ ಬಲಾತ್ಕಾರವು ಅವರನ್ನೇ ಎಳೆದುಕೊಂಡು ಹೋಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ದುಷ್ಟರ ಹಿಂಸೆಯು ಅವರನ್ನು ನಾಶಪಡಿಸುವುದು; ಏಕೆಂದರೆ ನ್ಯಾಯವಾದದ್ದನ್ನು ಮಾಡುವುದನ್ನು ಅವರು ನಿರಾಕರಿಸುತ್ತಾರೆ. ಅಧ್ಯಾಯವನ್ನು ನೋಡಿ |
ನೀನು ಯೆಹೋವನ ಬಳಿಗೆ ಸಹಾಯಕ್ಕಾಗಿ ಹೋಗಬೇಕು. ದೇವರು ನಕ್ಷತ್ರಪುಂಜಗಳನ್ನು ನಿರ್ಮಿಸಿದ್ದಾನೆ. ಆತನು ಕತ್ತಲೆಯನ್ನು ಮುಂಜಾನೆಯ ಬೆಳಕನ್ನಾಗಿ ಮಾಡುತ್ತಾನೆ. ಹಗಲನ್ನು ಕಾರ್ಗತ್ತಲೆಯನ್ನಾಗಿ ಮಾರ್ಪಡಿಸುತ್ತಾನೆ. ಆತನು ಸಮುದ್ರದ ನೀರನ್ನು ಕರೆದು ಭೂಮಿಯ ಮೇಲೆ ಹೊಯ್ಯುತ್ತಾನೆ. ಆತನ ಹೆಸರು ಯೆಹೋವನು. ಆತನು ಒಂದು ಬಲವಾದ ನಗರವನ್ನು ರಕ್ಷಿಸಿ ಇನ್ನೊಂದನ್ನು ನಾಶನಕ್ಕೆ ಒಪ್ಪಿಸುತ್ತಾನೆ.” ನೀನು ಒಳ್ಳೆಯತನವನ್ನು ವಿಷಕಾರಿಯನ್ನಾಗಿ ಮಾಡಿದಿ. ನ್ಯಾಯವನ್ನು ಕೊಲೆಮಾಡಿದಿ. ಅದು ನೆಲದ ಮೇಲೆ ಬೀಳುವಂತೆ ಮಾಡಿದಿ.