ಜ್ಞಾನೋಕ್ತಿಗಳು 22:11 - ಪರಿಶುದ್ದ ಬೈಬಲ್11 ನೀನು ಶುದ್ಧಹೃದಯವನ್ನೂ ಸವಿಮಾತುಗಳನ್ನೂ ಪ್ರೀತಿಸಿದರೆ ರಾಜನು ನಿನಗೆ ಸ್ನೇಹಿತನಾಗುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಹೃದಯಶುದ್ಧಿಯನ್ನು ಅಪೇಕ್ಷಿಸುವ ಮತ್ತು ಸವಿಮಾತನಾಡುವ ಮನುಷ್ಯನಿಗೆ ರಾಜನ ಸ್ನೇಹವು ದೊರೆಯುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಸವಿಮಾತಿನಿಂದ ಅರಸನ ಗೆಳೆತನ ಪಡೆಯಬಹುದು; ಸರ್ವೇಶ್ವರ ಬಯಸುವುದು ಅಂತರಂಗ ಶುದ್ಧಿಯನ್ನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಹೃದಯಶುದ್ಧಿಯನ್ನಪೇಕ್ಷಿಸುವ ಸವಿಮಾತಾಡುವ ಮನುಷ್ಯನಿಗೆ ರಾಜನ ಸ್ನೇಹವು ದೊರೆಯುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಶುದ್ಧ ಹೃದಯವನ್ನು ಪ್ರೀತಿಸಿ, ಕೃಪೆಯಿಂದ ಮಾತನಾಡುವವನಿಗೆ ಅರಸನು ಸ್ನೇಹಿತನಾಗಿರುವನು. ಅಧ್ಯಾಯವನ್ನು ನೋಡಿ |
ಅರಸನ ನಂತರ ರಾಜ್ಯದಲ್ಲಿ ಯೆಹೂದಿಯಾದ ಮೊರ್ದೆಕೈಯೇ ಮುಖ್ಯ ವ್ಯಕ್ತಿಯಾಗಿದ್ದನು. ರಾಜ್ಯದಲ್ಲಿ ಅವನಿಗೆ ಎರಡನೇ ಸ್ಥಾನವಿತ್ತು. ಯೆಹೂದ್ಯರೊಳಗೆ ಅವನು ಪ್ರಮುಖ ವ್ಯಕ್ತಿಯಾಗಿದ್ದನು. ಯೆಹೂದ್ಯರೆಲ್ಲರೂ ಅವನನ್ನು ಬಹಳವಾಗಿ ಗೌರವಿಸುತ್ತಿದ್ದರು. ತನ್ನ ಜನರ ಒಳಿತಿಗಾಗಿ (ಜನರಿಗೋಸ್ಕರವಾಗಿ) ಮೊರ್ದೆಕೈ ಬಹಳವಾಗಿ ಪ್ರಯಾಸಪಟ್ಟಿದ್ದರಿಂದ ಜನರು ಅವನನ್ನು ಸನ್ಮಾನಿಸಿದರು; ಮೊರ್ದೆಕೈ ಯೆಹೂದ್ಯರೆಲ್ಲರಿಗೆ ಸಮಾಧಾನವನ್ನು ತಂದನು.