Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 22:2 - ಪರಿಶುದ್ದ ಬೈಬಲ್‌

2 ಐಶ್ವರ್ಯವಂತರಿಗೂ ಬಡವರಿಗೂ ಯಾವ ವ್ಯತ್ಯಾಸವಿಲ್ಲ. ಯಾಕೆಂದರೆ ಎಲ್ಲರನ್ನು ನಿರ್ಮಿಸಿದಾತನು ಯೆಹೋವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಬಡವರು ಮತ್ತು ಸಿರಿವಂತರು ಸ್ಥಿತಿಯಲ್ಲಿ ಎದುರುಬದುರಾಗಿದ್ದಾರೆ, ಯೆಹೋವನೇ ಅವರನ್ನೆಲ್ಲಾ ಸೃಷ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಬಡವರು ಬಲ್ಲಿದರು ಸ್ಥಿತಿಯಲ್ಲಿ ಎದುರುಬದುರು; ಅವರೆಲ್ಲರನ್ನು ಸೃಷ್ಟಿಸಿದಾತ ಸರ್ವೇಶ್ವರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಬಡವರು ಬಲ್ಲಿದರು ಸ್ಥಿತಿಯಲ್ಲಿ ಎದುರುಬದುರಾಗಿದ್ದಾರೆ, ಯೆಹೋವನೇ ಅವರನ್ನೆಲ್ಲಾ ಸೃಷ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಧನಿಕರು, ಬಡವರು ಇದನ್ನು ಸಾಮಾನ್ಯವಾಗಿ ಹೊಂದಿರುವರು: ಇವರೆಲ್ಲರನ್ನು ಸೃಷ್ಟಿಸಿದಾತ ಯೆಹೋವ ದೇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 22:2
9 ತಿಳಿವುಗಳ ಹೋಲಿಕೆ  

ದೇವರು ನನ್ನನ್ನು ನನ್ನ ತಾಯಿಯ ಗರ್ಭದಲ್ಲಿ ನಿರ್ಮಿಸಿದನು. ದೇವರು ನನ್ನ ಸೇವಕಸೇವಕಿಯರನ್ನೂ ನಿರ್ಮಿಸಿದನು. ದೇವರು ನಮ್ಮೆಲ್ಲರನ್ನು ನಮ್ಮ ತಾಯಂದಿರ ಗರ್ಭಗಳಲ್ಲಿ ರೂಪಿಸಿದನು.


ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನಿಗೇ ಅವಮಾನ ಮಾಡುತ್ತಾನೆ. ಬಡವರಿಗೆ ಕರುಣೆ ತೋರುವವನು ತನ್ನ ಸೃಷ್ಟಿಕರ್ತನನ್ನೇ ಸನ್ಮಾನಿಸುತ್ತಾನೆ.


ಯೆಹೋವನು ಜನರನ್ನು ಬಡವರನ್ನಾಗಿಸುತ್ತಾನೆ. ಆತನು ಜನರನ್ನು ಹಣವಂತರನ್ನಾಗಿಸುತ್ತಾನೆ. ಯೆಹೋವನು ಜನರನ್ನು ದೀನರನ್ನಾಗಿಸುತ್ತಾನೆ. ಆತನು ಜನರನ್ನು ದೊಡ್ಡವರನ್ನಾಗಿಸುತ್ತಾನೆ.


ಒಂದು ರೀತಿಯಲ್ಲಿ ಬಡವನಿಗೂ ಅವನನ್ನು ಕುಗ್ಗಿಸುವವನಿಗೂ ವ್ಯತ್ಯಾಸವಿಲ್ಲ; ಅವರಿಬ್ಬರಿಗೂ ಜೀವಕೊಟ್ಟಾತನು ಯೆಹೋವನೇ; ಅವರಿಬ್ಬರನ್ನು ಸೃಷ್ಟಿಮಾಡಿದವನು ಯೆಹೋವನೇ.


ದೇವರಲ್ಲಿ ಸಾಮಾನ್ಯರು ಮತ್ತು ಪ್ರಮುಖರು ಎಂದಾಗಲಿ ಬಡವರು ಮತ್ತು ಶ್ರೀಮಂತರು ಎಂದಾಗಲಿ ಭೇದಭಾವವಿಲ್ಲ. ಯಾಕೆಂದರೆ ಎಲ್ಲರನ್ನೂ ಸೃಷ್ಟಿಮಾಡಿದವನು ದೇವರೇ.


ಕಣ್ಣು, “ನೀನು ನನಗೆ ಅವಶ್ಯವಿಲ್ಲ” ಎಂದು ಕೈಗೆ ಹೇಳಲಾರದು ಮತ್ತು ತಲೆಯು, “ನೀನು ನನಗೆ ಅವಶ್ಯವಿಲ್ಲ” ಎಂದು ಪಾದಕ್ಕೆ ಹೇಳಲಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು