Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 22:21 - ಪರಿಶುದ್ದ ಬೈಬಲ್‌

21 ಈ ನುಡಿಗಳು ನಿನಗೆ ಸತ್ಯವನ್ನೂ ಮುಖ್ಯವಾದವುಗಳನ್ನೂ ಉಪದೇಶಿಸುತ್ತವೆ. ಆಗ ನೀನು ನಿನ್ನನ್ನು ಕಳುಹಿಸಿದವನಿಗೆ ಒಳ್ಳೆಯ ಉತ್ತರಗಳನ್ನು ಕೊಡಬಲ್ಲವನಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಸತ್ಯ, ತಿಳಿವಳಿಕೆಯ ವಿಷಯವಾಗಿ ಇದಕ್ಕೆ ಮೊದಲೇ ನಿನಗಾಗಿ ಬರೆದಿರುವೆನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಸತ್ಯವಾದ ಆ ವಚನಗಳು ಎಷ್ಟೋ ಯಥಾರ್ಥವೆಂದು ತಿಳಿದು ನಿನ್ನನ್ನು ಪ್ರಶ್ನಿಸಿದವರಿಗೆ ಅವುಗಳನ್ನು ಅರಿಕೆಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಉಚಿತಾಲೋಚನೆ, ತಿಳುವಳಿಕೆ ಇವುಗಳ ವಿಷಯವಾಗಿ ಇದಕ್ಕೆ ಮುಂಚೆಯೇ ನಿನಗೋಸ್ಕರ ಬರೆದಿದ್ದೇನಲ್ಲವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಪ್ರಾಮಾಣಿಕವಾಗಿರಲು ಮತ್ತು ಸತ್ಯವನ್ನು ಮಾತನಾಡಲು ನಿಮಗೆ ಕಲಿಸುವುದು, ಆದ್ದರಿಂದ ನೀವು ಸೇವೆ ಸಲ್ಲಿಸುವವರಿಗೆ ಸತ್ಯವಾದ ವರದಿಗಳನ್ನು ಹಿಂತಿರುಗಿಸುವಂತೆ ನಾನು ನಿಮಗೆ ಬರೆದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 22:21
8 ತಿಳಿವುಗಳ ಹೋಲಿಕೆ  

ನಿಮ್ಮ ಹೃದಯಗಳಲ್ಲಿ ಕ್ರಿಸ್ತನೇ ಪ್ರಭುವಾಗಿರಲಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೇನೆಂದು ನಿಮ್ಮನ್ನು ಕೇಳುವ ಪ್ರತಿಯೊಬ್ಬರಿಗೂ ಉತ್ತರ ಹೇಳಲು ಯಾವಾಗಲೂ ಸಿದ್ಧವಾಗಿರಿ.


ದೇವರ ಮಗನಲ್ಲಿ ನಂಬಿಕೆಯಿಟ್ಟಿರುವ ನಿಮಗೆ ನಾನು ಈ ಪತ್ರವನ್ನು ಬರೆಯುತ್ತಿದ್ದೇನೆ. ಈಗ ನಿಮಗೆ ನಿತ್ಯಜೀವವಿದೆ ಎಂಬುದು ನಿಮಗೆ ಗೊತ್ತಾಗುವಂತೆ ನಾನು ಈ ಪತ್ರ ಬರೆಯುತ್ತಿದ್ದೇನೆ.


ಆದರೆ ಆತನೇ ಕ್ರಿಸ್ತನೆಂದೂ ದೇವರ ಮಗನೆಂದೂ ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕವಾಗಿ ಜೀವವನ್ನು ಪಡೆದುಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದದೆ.


ನಂಬಿಗಸ್ತನಾದ ಸಂದೇಶಕನಿಂದ ಯಜಮಾನನಿಗೆ ಉಲ್ಲಾಸ. ಅವನು ಸುಗ್ಗೀಕಾಲದ ಬಿಸಿಲಿನ ದಿನಗಳಲ್ಲಿರುವ ತಣ್ಣನೆಯ ಹಿಮದಂತಿರುವನು.


ಪ್ರಸಂಗಿಯು ಸರಿಯಾದ ಪದಗಳನ್ನು ಪ್ರಯಾಸದಿಂದ ಕಂಡುಹಿಡಿದು ಬಳಸಿದನು; ಸತ್ಯವೂ ಭರವಸೆಗೆ ಯೋಗ್ಯವೂ ಆದ ಉಪದೇಶಗಳನ್ನು ಬರೆದನು.


ದಾವೀದನ ಮಗನಾದ ಸೊಲೊಮೋನನ ಜ್ಞಾನೋಕ್ತಿಗಳು. ಸೊಲೊಮೋನನು ಇಸ್ರೇಲರ ರಾಜನಾಗಿದ್ದನು.


ಈ ಜ್ಞಾನೋಕ್ತಿಗಳು ಯೋಗ್ಯವಾರ್ಗದಲ್ಲಿ ಜೀವಿಸಲು ಅಂದರೆ ಯಥಾರ್ಥವಾಗಿಯೂ ನ್ಯಾಯವಾಗಿಯೂ ಮತ್ತು ಒಳ್ಳೆಯವರಾಗಿಯೂ ಇರಲು ಉಪದೇಶಿಸುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು