ಜ್ಞಾನೋಕ್ತಿಗಳು 22:23 - ಪರಿಶುದ್ದ ಬೈಬಲ್23 ಯಾಕೆಂದರೆ ಯೆಹೋವನು ಅವರ ಪರವಾಗಿ ವಾದಿಸುವನು; ಅವರನ್ನು ದರೋಡೆ ಮಾಡಬೇಕೆಂದಿರುವವರ ಪ್ರಾಣಗಳನ್ನು ತೆಗೆದುಹಾಕುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಯೆಹೋವನೇ ಅವರ ವ್ಯಾಜ್ಯವನ್ನು ನಡೆಸಿ, ಹಾಳುಮಾಡಿದವರ ಜೀವವನ್ನು ಹಾಳುಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಸರ್ವೇಶ್ವರನೇ ಅವರ ಪರವಾಗಿ ವಾದಿಸುವನು; ಸೂರೆಮಾಡಬಂದವರ ಪ್ರಾಣವನ್ನು ಆತನೆ ಸೂರೆ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಯೆಹೋವನೇ ಅವರ ವ್ಯಾಜ್ಯವನ್ನು ನಡಿಸಿ ಸೂರೆಮಾಡಿದವರ ಜೀವವನ್ನು ಸೂರೆ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಏಕೆಂದರೆ ಯೆಹೋವ ದೇವರು ಅವರ ವ್ಯಾಜ್ಯವನ್ನು ನಡೆಸಿ, ಸೂರೆ ಮಾಡಿದವರ ಪ್ರಾಣವನ್ನು ಸೂರೆ ಮಾಡುವರು. ಅಧ್ಯಾಯವನ್ನು ನೋಡಿ |
ನಾಬಾಲನು ಸತ್ತನೆಂಬುದು ದಾವೀದನಿಗೆ ತಿಳಿಯಿತು. ದಾವೀದನು, “ಯೆಹೋವನಿಗೆ ಸ್ತೋತ್ರವಾಗಲಿ! ನಾಬಾಲನು ನನ್ನ ಬಗ್ಗೆ ಕೆಟ್ಟಮಾತುಗಳನ್ನು ಆಡಿದನು, ಆದರೆ ಯೆಹೋವನು ನನಗೆ ಸಹಾಯ ಮಾಡಿದನು. ನಾನು ತಪ್ಪುಮಾಡದಂತೆ ಯೆಹೋವನು ನನ್ನನ್ನು ತಡೆದನು. ನಾಬಾಲನು ಕೆಟ್ಟದನ್ನು ಮಾಡಿದ್ದರಿಂದ ಯೆಹೋವನು ಅವನಿಗೆ ಸಾವನ್ನು ಬರಮಾಡಿದನು” ಎಂದು ಹೇಳಿದನು. ನಂತರ ದಾವೀದನು ಅಬೀಗೈಲಳಿಗೆ ಒಂದು ಸಂದೇಶವನ್ನು ಕಳುಹಿಸಿ ತನ್ನ ಹೆಂಡತಿಯಾಗಬೇಕೆಂದು ಕೇಳಿಕೊಂಡನು.
ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.
ನೀವು ಯುದ್ಧಮಾಡಿ ಇತರರಿಂದ ಸುಲಿದುಕೊಳ್ಳುತ್ತೀರಿ. ಆದರೆ ಅವರು ನಿಮ್ಮಿಂದ ಏನೂ ಕದ್ದುಕೊಳ್ಳಲಿಲ್ಲ. ನೀವು ಜನರಿಗೆ ವಿರುದ್ಧವಾಗಿ ತಿರುಗುತ್ತೀರಿ. ಆದರೆ ಅವರು ನಿಮಗೆ ವಿರುದ್ಧವಾಗಲಿಲ್ಲ. ಆದ್ದರಿಂದ ನೀವು ಕದ್ದುಕೊಳ್ಳುವದನ್ನು ಬಿಟ್ಟಾಗ ಇತರರು ನಿಮ್ಮದನ್ನು ಕದ್ದುಕೊಳ್ಳುತ್ತಾರೆ. ನೀವು ಇತರರಿಗೆ ಹಾನಿ ಮಾಡುವದನ್ನು ನಿಲ್ಲಿಸಿದಾಗ ಇತರರು ನಿಮಗೆ ಹಾನಿ ಮಾಡುವರು. ಆಗ ನೀವು ಹೀಗೆ ಹೇಳುವಿರಿ:
ಆ ಜನಾಂಗಗಳು ನಿಮ್ಮನ್ನು ನಾಶಗೊಳಿಸಿದವು. ಆದರೆ ಈಗ ಆ ಜನಾಂಗಗಳನ್ನು ನಾಶಪಡಿಸಲಾಗಿದೆ. ಇಸ್ರೇಲೇ, ಯೆಹೂದವೇ, ನಿಮ್ಮ ಶತ್ರುಗಳು ಬಂಧಿಗಳಾಗುತ್ತಾರೆ. ಅವರು ನಿಮ್ಮ ವಸ್ತುಗಳನ್ನು ಕದ್ದುಕೊಂಡಿದ್ದಾರೆ. ಆದರೆ ಬೇರೆಯವರು ಅವರ ವಸ್ತುಗಳನ್ನು ಕದಿಯುವರು. ಅವರು ಯುದ್ಧದಲ್ಲಿ ನಿಮ್ಮ ವಸ್ತುಗಳನ್ನು ತೆಗೆದುಕೊಂಡರು. ಆದರೆ ಬೇರೆಯವರು ಯುದ್ಧದಲ್ಲಿ ಅವರ ವಸ್ತುಗಳನ್ನು ತೆಗೆದುಕೊಳ್ಳುವರು.”