Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 22:4 - ಪರಿಶುದ್ದ ಬೈಬಲ್‌

4 ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿದ್ದು ದೀನತೆಯಿಂದಿರು; ಆಗ ನೀನು ಐಶ್ವರ್ಯ, ಸನ್ಮಾನ ಮತ್ತು ನಿಜಜೀವವನ್ನು ಹೊಂದಿಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಧನ, ಮಾನ ಮತ್ತು ಜೀವಗಳು ದೀನಭಾವಕ್ಕೂ, ಯೆಹೋವನ ಭಯಕ್ಕೂ ಫಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಸರ್ವೇಶ್ವರನಲ್ಲಿ ಭಯಭಕ್ತಿ ದೀನಮನೋಭಾವ, ಇವು ನೀಡುವ ಫಲ-ಸಂಪತ್ತು, ಸನ್ಮಾನ, ಆಯುಸ್ಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಧನ ಮಾನ ಜೀವಗಳು ದೀನಭಾವಕ್ಕೂ ಯೆಹೋವನ ಭಯಕ್ಕೂ ಫಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೆಹೋವ ದೇವರ ಭಯವೂ ದೀನತೆಯೂ ಕೊಡುವ ಪ್ರತಿಫಲ, ಐಶ್ವರ್ಯವೂ ಮಾನವೂ ಜೀವವೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 22:4
17 ತಿಳಿವುಗಳ ಹೋಲಿಕೆ  

ಆದ್ದರಿಂದ ನೀವು ದೇವರ ರಾಜ್ಯಕ್ಕಾಗಿ ಮತ್ತು ಆತನ ಚಿತ್ತಕ್ಕನುಸಾರವಾಗಿ ಕಾರ್ಯಗಳನ್ನು ಮಾಡಲು ಬಹಳ ತವಕಪಡಬೇಕು. ಆಗ ನಿಮಗೆ ಅಗತ್ಯವಾದ ಉಳಿದವುಗಳನ್ನು ಸಹ ಕೊಡಲಾಗುವುದು.


ಪ್ರಭುವಿನ ಎದುರಿನಲ್ಲಿ ದೀನರಾಗಿರಿ, ಆತನು ನಿಮ್ಮನ್ನು ಉನ್ನತ ಮಟ್ಟಕ್ಕೆ ತರುತ್ತಾನೆ.


ನ್ಯಾಯವನ್ನು ಮತ್ತು ಕರುಣೆಯನ್ನು ಹುಡುಕುವವನಿಗೆ ಒಳ್ಳೆಯ ಜೀವಿತವೂ ನ್ಯಾಯವೂ ಸನ್ಮಾನವೂ ದೊರೆಯುವುದು.


ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.


ಜ್ಞಾನವೆಂಬಾಕೆಯ ಬಲಗೈಯಿಂದ ದೀರ್ಘಾಯುಷ್ಯವೂ ಎಡಗೈಯಿಂದ ಐಶ್ವರ್ಯವೂ ಘನತೆಯೂ ಬರುವವು.


ಆದರೆ ದೇವರು ದಯಪಾಲಿಸಿದ ಕೃಪೆಯು ಅದಕ್ಕಿಂತಲೂ ಹೆಚ್ಚಿನದು. ಪವಿತ್ರ ಗ್ರಂಥವು ಹೇಳುವಂತೆ, “ದೇವರು ಅಹಂಕಾರಿಗಳಿಗೆ ವಿರುದ್ಧವಾಗಿರುತ್ತಾನೆ, ದೀನರಿಗಾದರೆ ಕೃಪೆಯನ್ನು ದಯಪಾಲಿಸುತ್ತಾನೆ.”


ಜೆರುಸಲೇಮೇ, ನೀನು ಐಶ್ವರ್ಯವಂತಳಾಗಿರುವೆ. ನೀನು ದೇವರ ವಿಷಯವಾದ ಜ್ಞಾನ, ತಿಳುವಳಿಕೆ ಮತ್ತು ರಕ್ಷಣೆಗಳಿಂದ ಐಶ್ವರ್ಯವಂತಳಾಗಿರುವೆ. ಯೆಹೋವನ ಮೇಲೆ ನಿನಗಿರುವ ಗೌರವವೇ ನಿನ್ನ ಭಂಡಾರವಾಗಿದೆ. ನೀನು ಹೀಗೆಯೇ ಮುಂದುವರಿಯುವೆ.


ನೀನು ದೇಹವನ್ನು ಪಳಗಿಸಿಕೊಂಡರೆ ನಿನಗೆ ಕೆಲವು ರೀತಿಯಲ್ಲಿ ಸಹಾಯಕವಾಗುವುದು. ಆದರೆ ದೇವರ ಸೇವೆಯು ನಿನಗೆ ಎಲ್ಲಾ ರೀತಿಯಲ್ಲಿಯೂ ಸಹಾಯಕವಾಗುವುದು. ದೇವರ ಸೇವೆಯು ಇಹಪರಗಳೆರಡರಲ್ಲೂ ನಿನಗೆ ಆಶೀರ್ವಾದವನ್ನು ಉಂಟು ಮಾಡುವುದು.


ಜ್ಞಾನಿಯ ಮನೆಯಲ್ಲಿ ಬೆಲೆಬಾಳುವ ಭಂಡಾರಗಳೂ ಪರಿಮಳದ್ರವ್ಯಗಳೂ ಇರುತ್ತವೆ. ಮೂಢನಾದರೋ ತನ್ನಲ್ಲಿರುವ ಪ್ರತಿಯೊಂದನ್ನೂ ಬೇಗನೆ ಹಾಳುಮಾಡಿಕೊಳ್ಳುವನು.


ಜ್ಞಾನಿಗಳು ಕೇಡನ್ನು ಕಂಡು ದೂರವಾಗುತ್ತಾರೆ. ಮೂಢರಾದರೋ ನೇರವಾಗಿ ಹೋಗಿ ಆಪತ್ತಿಗೀಡಾಗುವರು.


ವಕ್ರಬುದ್ಧಿಯುಳ್ಳವರು ಅನೇಕ ಆಪತ್ತುಗಳಿಗೆ ಸಿಕ್ಕಿಕ್ಕೊಂಡಿದ್ದಾರೆ. ಆದರೆ ತನ್ನ ಆತ್ಮದ ಬಗ್ಗೆ ಚಿಂತಿಸುವವನು ಆ ಆಪತ್ತುಗಳಿಂದ ದೂರವಿರುವನು.


ದುರಾಭಿಮಾನಿಯನ್ನು ಅವನ ದುರಾಭಿಮಾನವೇ ನಾಶಪಡಿಸುವುದು. ಆದರೆ ದೀನನನ್ನು ಬೇರೆ ಜನರು ಗೌರವಿಸುವರು.


ಲಾವಣ್ಯ ನಿನ್ನನ್ನು ಮೋಸಗೊಳಿಸಬಲ್ಲದು; ಸೌಂದರ್ಯ ತಾತ್ಕಾಲಿಕವಾದದ್ದು. ಆದರೆ ಯೆಹೋವನಲ್ಲಿ ಭಯಭಕ್ತಿಯುಳ್ಳ ಹೆಂಗಸೇ, ಹೊಗಳಿಕೆಗೆ ಪಾತ್ರಳು.


ಆಗ ದೇವರು ನನಗೆ ಸರಿಯಾದ ಬುದ್ಧಿಯನ್ನು ಕೊಟ್ಟನು. ನನಗೆ ರಾಜನ ಗೌರವ, ಪ್ರಭಾವ, ವೈಭವಗಳು ಮತ್ತೆ ಲಭಿಸಿದವು. ನನ್ನ ಮಂತ್ರಿಗಳೂ ಅಧಿಪತಿಗಳೂ ನನ್ನನ್ನು ಸ್ವೀಕರಿಸಿದರು. ನಾನು ಮತ್ತೆ ಅರಸನಾದೆನು. ನಾನು ಮೊದಲಿಗಿಂತಲೂ ಅಧಿಕ ಶಕ್ತಿಶಾಲಿಯಾದ ಮತ್ತು ಪ್ರಭಾವಶಾಲಿಯಾದ ಅರಸನಾದೆನು.


ಭಯಭಕ್ತಿಯು ಒಳ್ಳೆಯ ಜೀವನಕ್ಕೆ ನಡೆಸುತ್ತದೆ. ಅದು ಅವನಿಗೆ ತೃಪ್ತಿಯನ್ನೂ ಕೊಡುವುದು; ಕೇಡಿನಿಂದಲೂ ತಪ್ಪಿಸಿ ಕಾಪಾಡುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು