Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 23:13 - ಪರಿಶುದ್ದ ಬೈಬಲ್‌

13 ಅಗತ್ಯವೆನಿಸಿದರೆ ಮಗನನ್ನು ಬಾಲ್ಯದಲ್ಲಿಯೇ ದಂಡಿಸು. ನಿನ್ನ ಹೊಡೆತದಿಂದ ಅವನೇನೂ ಸಾಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಹುಡುಗನ ಶಿಕ್ಷೆಗೆ ಹಿಂತೆಗೆಯಬೇಡ, ಅವನು ಬೆತ್ತದ ಏಟಿಗೆ ಸಾಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಮಕ್ಕಳನ್ನು ದಂಡಿಸಿ ತಿದ್ದಲು ಹಿಂಜರಿಯಬೇಕಾಗಿಲ್ಲ; ಬೆತ್ತದ ಏಟಿಗೆ ಅವರು ಸತ್ತುಹೋಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಹುಡುಗನ ಶಿಕ್ಷೆಗೆ ಹಿಂತೆಗೆಯಬೇಡ; ಬೆತ್ತದ ಏಟಿಗೆ ಸಾಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಮಕ್ಕಳನ್ನು ಶಿಕ್ಷಿಸಲು ಹಿಂದೆಗೆಯಬೇಡ; ಬೆತ್ತದಿಂದ ಹೊಡೆದರೆ, ಅವರು ಸಾಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 23:13
7 ತಿಳಿವುಗಳ ಹೋಲಿಕೆ  

ಮಕ್ಕಳು ತಪ್ಪು ಮಾಡಿದಾಗ ಶಿಕ್ಷಿಸದ ತಂದೆಯು ಅವರಿಗೆ ಶತ್ರುವಿನಂತಿದ್ದಾನೆ. ಮಕ್ಕಳು ತಪ್ಪು ಮಾಡಿದಾಗ ಶಿಕ್ಷಿಸುವ ತಂದೆಯು ಅವರಿಗೆ ಮಿತ್ರನಂತಿದ್ದಾನೆ.


ನಿನ್ನ ಮಗನನ್ನು ತಿದ್ದಿ ಸರಿಪಡಿಸು; ಆಗ ನೀನು ಅವನ ಬಗ್ಗೆ ಹೆಮ್ಮೆಯಿಂದಿರುವೆ. ಅವನು ನಿನ್ನನ್ನು ತೃಪ್ತಿಪಡಿಸುವನು.


ಶಿಕ್ಷೆಯು ಮತ್ತು ತಿದ್ದುಪಡಿಯು ಮಕ್ಕಳನ್ನು ಜ್ಞಾನಿಗಳನ್ನಾಗಿ ಮಾಡುತ್ತವೆ. ಶಿಸ್ತುಪಡಿಸಿಲ್ಲದ ಯೌವನಸ್ಥನು ತನ್ನ ತಾಯಿಯನ್ನು ನಾಚಿಕೆಗೆ ಗುರಿಪಡಿಸುತ್ತಾನೆ.


ನಿನ್ನ ಮಗನು ತನ್ನ ಮಾರ್ಗಗಳನ್ನು ಸರಿಪಡಿಸಿಕೊಳ್ಳುತ್ತಾನೆ ಎಂಬ ನಿರೀಕ್ಷೆ ಇನ್ನೂ ಇರುವಾಗಲೇ ಅವನನ್ನು ಶಿಸ್ತುಗೊಳಿಸು. ಅವನನ್ನು ಶಿಸ್ತುಗೊಳಿಸದಿದ್ದರೆ ಮರಣಕ್ಕೆ ಈಡು ಮಾಡಿದಂತಾಗುವುದು.


ಆದ್ದರಿಂದ ತಂದೆಯು ನೀಡುವ ದಂಡನೆ ಎಂಬುದಾಗಿ ಅವುಗಳನ್ನು ಸಹಿಸಿಕೊಳ್ಳಿ. ತಂದೆಯು ತನ್ನ ಮಕ್ಕಳನ್ನು ದಂಡಿಸುವಂತೆ ದೇವರು ನಿಮ್ಮನ್ನು ಈ ರೀತಿ ಶಿಕ್ಷಿಸುತ್ತಾನೆ. ಎಲ್ಲಾ ಮಕ್ಕಳು ತಮ್ಮ ತಂದೆಗಳಿಂದ ಶಿಕ್ಷಿಸಲ್ಪಡುತ್ತಾರೆ.


ನಿನ್ನ ಉಪದೇಶಕರಿಗೆ ಕಿವಿಗೊಟ್ಟು ನಿನ್ನಿಂದ ಸಾಧ್ಯವಾದಷ್ಟು ಕಲಿತುಕೊ.


ಮಕ್ಕಳು ಮೂಢಕಾರ್ಯಗಳನ್ನು ಮಾಡುವರು. ನೀವು ಅವರನ್ನು ಶಿಕ್ಷಿಸಿದರೆ, ಅವುಗಳನ್ನು ಮಾಡಬಾರದೆಂದು ಅವರಿಗೆ ಗೊತ್ತಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು