Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 23:22 - ಪರಿಶುದ್ದ ಬೈಬಲ್‌

22 ನಿನ್ನ ತಂದೆಗೆ ಕಿವಿಗೊಡು. ಯಾಕೆಂದರೆ ನೀನು ಅವನ ಮಗನು. ಅವನು ನಿನ್ನ ತಂದೆ. ನಿನ್ನ ತಾಯಿ ವೃದ್ಧಳಾಗಿರುವಾಗಲೂ ಆಕೆಯನ್ನು ಗೌರವಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಹೆತ್ತ ತಂದೆಯ ಮಾತಿಗೆ ಕಿವಿಗೊಡು, ಮುಪ್ಪಿನಲ್ಲಿಯೂ ತಾಯಿಯನ್ನು ಅಸಡ್ಡೆಮಾಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಹೆತ್ತ ತಂದೆಯ ಮಾತಿಗೆ ಕಿವಿಗೊಡು; ಮುಪ್ಪಿನ ತಾಯಿಯನ್ನು ಅಸಡ್ಡೆಮಾಡದಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಹೆತ್ತ ತಂದೆಯ ಮಾತಿಗೆ ಕಿವಿಗೊಡು; ಮುಪ್ಪಿನಲ್ಲಿಯೂ ತಾಯಿಯನ್ನು ಅಸಡ್ಡೆಮಾಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನಿನ್ನನ್ನು ಹೆತ್ತ ತಂದೆಯ ಮಾತಿಗೆ ಕಿವಿಗೊಡು, ನಿನ್ನ ತಾಯಿ ಮುಪ್ಪಿನವಳಾದಾಗ ಆಕೆಯನ್ನು ಅಸಡ್ಡೆ ಮಾಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 23:22
13 ತಿಳಿವುಗಳ ಹೋಲಿಕೆ  

ತನ್ನ ತಂದೆಯನ್ನು ಗೇಲಿಮಾಡುವವನಾಗಲಿ ವೃದ್ಧ ತಾಯಿಯನ್ನು ಕಡೆಗಣಿಸುವವನಾಗಲಿ ದಂಡನೆ ಹೊಂದುವನು. ಕಾಗೆಗಳೂ ಕ್ರೂರಪಕ್ಷಿಗಳೂ ಅವನ ಕಣ್ಣುಗಳನ್ನು ತಿನ್ನುವಂತಿರುವುದು ಆ ದಂಡನೆ.


ನನ್ನ ಮಗನೇ, ನಿನ್ನ ತಂದೆಯ ಬುದ್ಧಿಮಾತಿಗೆ ಕಿವಿಗೊಡು; ನಿನ್ನ ತಾಯಿಯ ಉಪದೇಶವನ್ನು ಅಲಕ್ಷಿಸಬೇಡ.


ನನ್ನ ಮಗನೇ, ನಿನ್ನ ತಂದೆಯ ಆಜ್ಞೆಗಳನ್ನು ಜ್ಞಾಪಕಮಾಡಿಕೋ. ನಿನ್ನ ತಾಯಿಯ ಉಪದೇಶಗಳನ್ನು ಮರೆಯಬೇಡ.


“ಲೇವಿಯರು, ‘ತಂದೆತಾಯಿಗಳನ್ನು ಸನ್ಮಾನಿಸದವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.


“ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು; ನನ್ನ ವಿಶ್ರಾಂತಿಯ ವಿಶೇಷ ದಿನಗಳನ್ನು ಆಚರಿಸಬೇಕು. ನಾನೇ ನಿಮ್ಮ ದೇವರಾದ ಯೆಹೋವನು!


‘ನಿಮ್ಮ ತಂದೆತಾಯಿಗಳನ್ನು ಗೌರವಿಸಿರಿ’ ಎಂತಲೂ ‘ಯಾವ ವ್ಯಕ್ತಿಯಾದರೂ ತನ್ನ ತಂದೆತಾಯಿಗಳಿಗೆ ಕೆಟ್ಟದ್ದನ್ನು ನುಡಿದರೆ ಅವನಿಗೆ ಮರಣದಂಡನೆ ಆಗಬೇಕು’ ಎಂತಲೂ ಮೋಶೆಯು ಹೇಳಿದ್ದಾನೆ.


ಕೆಲವರು ತಮ್ಮ ತಂದೆಗಳನ್ನು ಶಪಿಸುವರು. ತಮ್ಮ ತಾಯಂದಿರನ್ನು ಆಶೀರ್ವದಿಸುವುದಿಲ್ಲ.


“ವೃದ್ಧರ ಮುಂದೆ ಎದ್ದು ನಿಂತುಕೊಳ್ಳಿರಿ. ಹಿರಿಯರಿಗೆ ಗೌರವಕೊಡಿರಿ. ನಿಮ್ಮ ದೇವರನ್ನು ಸನ್ಮಾನಿಸಿರಿ. ನಾನೇ ಯೆಹೋವನು!


ಜ್ಞಾನಿಯಾದ ಮಗನಿಂದ ತಂದೆಗೆ ಸಂತೋಷ. ಮೂಢನಾದರೋ ತನ್ನ ತಾಯಿಯನ್ನು ಕಡೆಗಣಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು