ಜ್ಞಾನೋಕ್ತಿಗಳು 23:23 - ಪರಿಶುದ್ದ ಬೈಬಲ್23 ಸತ್ಯವನ್ನು ಕೊಂಡುಕೊ; ಅದನ್ನು ಮಾರಬೇಡ. ಜ್ಞಾನ, ಸುಶಿಕ್ಷೆ ಮತ್ತು ವಿವೇಕವನ್ನು ಕೊಂಡುಕೊ. ಇವು ಖರೀದಿಗೆ ಯೋಗ್ಯವಾದವುಗಳೂ ಮಾರಲಾಗದಷ್ಟು ಅಮೂಲ್ಯವಾದವುಗಳೂ ಆಗಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಸತ್ಯವನ್ನು ಎಂದರೆ ಜ್ಞಾನ, ಸುಶಿಕ್ಷೆ, ವಿವೇಕಗಳನ್ನು ಕೊಂಡುಕೋ, ಮಾರಿ ಬಿಡಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಸತ್ಯವನ್ನು, ಅಂದರೆ ಜ್ಞಾನ, ಸುಶಿಕ್ಷೆ, ವಿವೇಕ ಇವನ್ನು ಬೆಲೆಕೊಟ್ಟಾದರೂ ಕೊಂಡುಕೊ, ಮಾರಿಬಿಡಬೇಡ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಸತ್ಯವನ್ನು ಎಂದರೆ ಜ್ಞಾನ ಸುಶಿಕ್ಷೆ ವಿವೇಕಗಳನ್ನು ಕೊಂಡುಕೋ; ಮಾರಿ ಬಿಡಬೇಡ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಸತ್ಯವನ್ನೂ ಜ್ಞಾನವನ್ನೂ ಶಿಕ್ಷಣವನ್ನೂ ವಿವೇಕವನ್ನೂ ಕೊಂಡುಕೋ; ಆದರೆ ಅವುಗಳನ್ನು ಮಾರಬೇಡ. ಅಧ್ಯಾಯವನ್ನು ನೋಡಿ |
ಬೆಂಕಿಯಲ್ಲಿ ಪುಟಹಾಕಿದ ಅಪ್ಪಟ ಚಿನ್ನವನ್ನು ನೀನು ನನ್ನಿಂದ ಕೊಂಡುಕೊಳ್ಳಬೇಕೆಂದು ನಾನು ಸಲಹೆ ನೀಡುತ್ತೇನೆ. ಆಗ ನೀನು ನಿಜವಾಗಿಯೂ ಶ್ರೀಮಂತನಾಗಲು ಸಾಧ್ಯ. ನಾನು ನಿನಗೆ ಹೇಳುವುದೇನೆಂದರೆ: ಬಿಳಿವಸ್ತ್ರಗಳನ್ನು ಕೊಂಡುಕೊ. ಆಗ ನೀನು ನಾಚಿಕೆಕರವಾದ ನಿನ್ನ ಬೆತ್ತಲೆಯನ್ನು ಮುಚ್ಚಿಕೊಳ್ಳಲು ಸಾಧ್ಯವಾಗುವುದು. ನೀನು ನಿನ್ನ ಕಣ್ಣುಗಳಿಗೆ ಹಚ್ಚಲು ಔಷಧಿಯನ್ನು ಕೊಂಡುಕೊಳ್ಳಬೇಕೆಂತಲೂ ನಾನು ನಿನಗೆ ಹೇಳುತ್ತೇನೆ. ಆಗ ನಿನಗೆ ನಿಜವಾಗಿಯೂ ದೃಷ್ಟಿ ಬರುವುದು.