Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 23:30 - ಪರಿಶುದ್ದ ಬೈಬಲ್‌

30 ಮದ್ಯವನ್ನು ಅತಿಯಾಗಿ ಕುಡಿಯುವವರಿಗೆ ಮತ್ತು ಮಿಶ್ರಣಗೊಂಡ ನಾನಾಬಗೆಯ ಮದ್ಯಗಳನ್ನು ಕುಡಿಯುವವರಿಗೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಅವರು ಮಿಶ್ರಮದ್ಯಪಾನಾಸಕ್ತರಾಗಿ, ದ್ರಾಕ್ಷಾರಸವನ್ನು ಕುಡಿಯುತ್ತಾ, ಕಾಲಹರಣಮಾಡುವವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಮಿಶ್ರಮದ್ಯಪಾನಗಳಲ್ಲಿ ಆಸಕ್ತನಾಗಿರುವವನೇ, ದ್ರಾಕ್ಷಾರಸ ಕುಡಿಯುತ್ತ ಕಾಲಹರಣ ಮಾಡುವವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ವಿುಶ್ರಮದ್ಯಪಾನಾಸಕ್ತರಾಗಿ ದ್ರಾಕ್ಷಾರಸವನ್ನು ಕುಡಿಯುತ್ತಾ ಕಾಲಹರಣಮಾಡುವವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಮದ್ಯಪಾನದಲ್ಲಿ ಆಸಕ್ತರಾಗಿ, ಮಿಶ್ರ ಮದ್ಯಪಾನವನ್ನು ಕುಡಿಯ ಬಯಸುವವರೇ ಅಲ್ಲವೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 23:30
10 ತಿಳಿವುಗಳ ಹೋಲಿಕೆ  

ಮದ್ಯಪಾನಮಾಡಿ ಮತ್ತರಾಗಬೇಡಿ, ಅದು ಪಾಪಕೃತ್ಯಗಳಿಗೆ ನಡೆಸುತ್ತದೆ, ಆದರೆ ಯಾವಾಗಲೂ ಪವಿತ್ರಾತ್ಮಭರಿತರಾಗಿರಿ.


ನೀವು ಮುಂಜಾನೆ ಎದ್ದು ಮದ್ಯಕ್ಕಾಗಿ ಹುಡುಕಾಡುವಿರಿ. ಮಧ್ಯರಾತ್ರಿಯವರೆಗೆ ಎಚ್ಚರವಿದ್ದು ಕುಡಿದು ಮತ್ತರಾಗುವಿರಿ.


ದ್ರಾಕ್ಷಾರಸವು ಪರಿಹಾಸ್ಯಕ್ಕೂ ಮದ್ಯವು ಕೂಗಾಟಕ್ಕೂ ನಡೆಸುತ್ತವೆ. ಅಮಲೇರಿಸಿಕೊಳ್ಳುವುದು ಮೂರ್ಖತನ.


ಜ್ಞಾನವೆಂಬಾಕೆ ಮಾಂಸದ ಅಡಿಗೆಯನ್ನೂ ದ್ರಾಕ್ಷಾರಸವನ್ನೂ ತಯಾರಿಸಿದ್ದಾಳೆ. ಆಕೆ ತನ್ನ ಮೇಜಿನ ಮೇಲೆ ಆಹಾರವನ್ನು ಇಟ್ಟಿದ್ದಾಳೆ.


ಯೆಹೋವನ ಕೈಯಲ್ಲಿ ಪಾತ್ರೆಯಿದೆ. ಆ ಪಾತ್ರೆಯು ವಿಷ ದ್ರಾಕ್ಷಾರಸದಿಂದ ತುಂಬಿದೆ. ಆತನು ದಂಡನೆಯೆಂಬ ಆ ವಿಷ ದ್ರಾಕ್ಷಾರಸವನ್ನು ಸುರಿಯುವನು; ದುಷ್ಟರು ಕೊನೆಯ ತೊಟ್ಟಿನವರೆಗೂ ಅದನ್ನು ಕುಡಿಯುವರು!


ಅಂದವಾದ ಪಾತ್ರೆಗಳಲ್ಲಿ ದ್ರಾಕ್ಷಾರಸ ಕುಡಿಯುವಿರಿ. ಉತ್ತಮವಾದ ಸುಗಂಧತೈಲವನ್ನು ಉಪಯೋಗಿಸುವಿರಿ. ಯೋಸೇಫನ ಕುಟುಂಬದ ನಾಶನದ ಬಗ್ಗೆಯೂ ನೀವು ಬೇಸರಗೊಳ್ಳಲಿಲ್ಲ.


ಒಮ್ಮೆ ಅವನು ದ್ರಾಕ್ಷಾರಸವನ್ನು ಕುಡಿದು ಮತ್ತೇರಿದ್ದರಿಂದ ತನ್ನ ಗುಡಾರದಲ್ಲಿ ಬೆತ್ತಲೆಯಾಗಿ ಮಲಗಿಕೊಂಡನು.


ಅಬೀಗೈಲಳು ನಾಬಾಲನ ಬಳಿಗೆ ಹಿಂದಿರುಗಿ ಹೋದಳು. ನಾಬಾಲನು ಮನೆಯಲ್ಲಿಯೇ ಇದ್ದನು. ನಾಬಾಲನು ರಾಜನಂತೆ ತಿನ್ನುತ್ತಾ ಕುಡಿದು ಮತ್ತನಾಗಿದ್ದನು. ಆದ್ದರಿಂದ ಅಬೀಗೈಲಳು ಮಾರನೆಯ ದಿನದ ಹೊತ್ತಾರೆಯವರೆಗೆ ನಾಬಾಲನಿಗೆ ಏನನ್ನೂ ಹೇಳಲಿಲ್ಲ.


ಕುಡುಕರ ಮತ್ತು ಹೊಟ್ಟೆಬಾಕರ ಸ್ನೇಹಿತನಾಗಿರಬೇಡ.


ಆದರೆ ಈಗ ಆ ನಾಯಕರುಗಳು ಮತ್ತರಾಗಿದ್ದಾರೆ. ಯಾಜಕರೂ ಪ್ರವಾದಿಗಳೂ ಮದ್ಯಸೇವನೆಯಿಂದ ಮತ್ತರಾಗಿದ್ದಾರೆ. ಅವರು ಎಡವಿಬೀಳುತ್ತಾರೆ. ಪ್ರವಾದಿಗಳು ದರ್ಶನಗಳನ್ನು ಕಾಣುವಾಗ ಅಮಲೇರಿದವರಾಗಿರುತ್ತಾರೆ; ನ್ಯಾಯಾಧೀಶರು ತೀರ್ಪುಕೊಡುವಾಗ ಅಮಲೇರಿದವರಾಗಿರುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು