Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 23:31 - ಪರಿಶುದ್ದ ಬೈಬಲ್‌

31 ಆದ್ದರಿಂದ ಮದ್ಯದ ಬಗ್ಗೆ ಎಚ್ಚರಿಕೆಯಾಗಿರು. ಅದು ಅಂದವಾಗಿದ್ದು ಕೆಂಪಗೆ ಥಳಥಳಿಸುತ್ತದೆ. ನೀನು ಅದನ್ನು ಕುಡಿದಾಗ, ನಯವಾಗಿ ಇಳಿದುಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಪಾತ್ರೆಯಲ್ಲಿ ಕೆಂಪಗೆ ಥಳಥಳಿಸುವ ದ್ರಾಕ್ಷಾರಸದ ಮೇಲೆ ಕಣ್ಣಿಡಬೇಡ. ಅದು ಗಂಟಲಿನೊಳಗೆ ಮೆಲ್ಲಗೆ ಇಳಿದುಹೋಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಪಾತ್ರೆಯಲ್ಲಿ ಕೆಂಪಗೆ ಥಳಥಳಿಸುವ, ಗಂಟಲಿನೊಳಗೆ, ಸುಲಭವಾಗಿ, ಇಳಿಯುವ, ದ್ರಾಕ್ಷಾರಸದ ಮೇಲೆ ಕಣ್ಣಿಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಪಾತ್ರೆಯಲ್ಲಿ ಕೆಂಪಗೆ ಥಳಥಳಿಸುವ ದ್ರಾಕ್ಷಾರಸದ ಮೇಲೆ ಕಣ್ಣಿಡಬೇಡ. ಅದು [ಗಂಟಲಿನೊಳಗೆ] ಮೆಲ್ಲಗೆ ಇಳಿದು ಹೋಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ದ್ರಾಕ್ಷಾರಸವು ಕೆಂಪಾಗಿದ್ದು, ಪಾತ್ರೆಯಲ್ಲಿ ಥಳಥಳಿಸುತ್ತಾ ಚಲಿಸಿದರೆ, ಅದನ್ನು ನೋಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 23:31
9 ತಿಳಿವುಗಳ ಹೋಲಿಕೆ  

ಈ ಲೋಕದಲ್ಲಿರುವ ಕೆಟ್ಟವುಗಳು ಇಂತಿವೆ: ನಮ್ಮ ಪಾಪಸ್ವಭಾವವನ್ನು ತಣಿಸಲು ಮಾಡಲಿಚ್ಛಿಸುವ ಕಾರ್ಯಗಳು, ನಾವು ನೋಡುವ ಪಾಪಪೂರಿತವಾದದ್ದನ್ನು ಪಡೆಯಲಿಚ್ಛಿಸುವುದು, ಮತ್ತು ನಮ್ಮಲ್ಲಿರುವ ವಸ್ತುಗಳಲ್ಲಿಯೇ ದುರಹಂಕಾರಪಡುವುದು. ಆದರೆ ಇವುಗಳಲ್ಲಿ ಯಾವುದೂ ತಂದೆಯಿಂದ ಬರುವುದಿಲ್ಲ. ಇವುಗಳೆಲ್ಲ ಈ ಲೋಕದಿಂದ ಬರುತ್ತವೆ.


ನಿಷ್ಪ್ರಯೋಜಕವಾದವುಗಳ ಮೇಲೆ ದೃಷ್ಟಿಸದಂತೆ ನನ್ನನ್ನು ಕಾಪಾಡು. ನಿನ್ನ ಮಾರ್ಗದಲ್ಲಿ ಜೀವಿಸಲು ನನಗೆ ಸಹಾಯಮಾಡು.


ಅವನು ಸಾಯಂಕಾಲ ತನ್ನ ಹಾಸಿಗೆಯಿಂದ ಮೇಲೆದ್ದು ಅರಮನೆಯ ಮಾಳಿಗೆಯ ಮೇಲಕ್ಕೆ ಹೋಗಿ ತಿರುಗಾಡುತ್ತಿದ್ದನು. ದಾವೀದನು ಮಾಳಿಗೆಯ ಮೇಲಿರುವಾಗ, ಒಬ್ಬ ಹೆಂಗಸು ಸ್ನಾನ ಮಾಡುತ್ತಿರುವುದನ್ನು ನೋಡಿದನು. ಅವಳು ಅತ್ಯಂತ ಸುಂದರಳಾಗಿದ್ದಳು.


ನಿನ್ನ ಕಣ್ಣು ನಿನ್ನನ್ನು ಪಾಪದಲ್ಲಿ ಸಿಲುಕಿಸುವುದಾದರೆ, ಅದನ್ನು ಕಿತ್ತುಬಿಡು. ಎರಡು ಕಣ್ಣುಗಳನ್ನಿಟ್ಟುಕೊಂಡು ನರಕದೊಳಗೆ ಎಸೆಯಲ್ಪಡುವುದಕ್ಕಿಂತ ಒಂದೇ ಕಣ್ಣುಳ್ಳವನಾಗಿದ್ದು ನಿತ್ಯಜೀವವನ್ನು ಹೊಂದಿಕೊಳ್ಳುವುದೇ ಮೇಲು.


ಆಕೆಯ ಸೌಂದರ್ಯವನ್ನು ಕಂಡು ಹೃದಯದಲ್ಲಿ ಆಸೆಪಡಬೇಡ. ಆಕೆಯ ಕಣ್ಣುಗಳು ನಿನ್ನನ್ನು ವಶಮಾಡಿಕೊಳ್ಳಲು ಬಿಡಬೇಡ.


“ಈಗಲಾದರೋ ಯೋಬನೇ, ನನ್ನ ಸಂದೇಶಕ್ಕೆ ಕಿವಿಗೊಡು. ನನ್ನ ಮಾತುಗಳಿಗೆ ಗಮನ ಕೊಡು.


ಮದ್ಯಪಾನಮಾಡಿ ಮತ್ತರಾಗಬೇಡಿ, ಅದು ಪಾಪಕೃತ್ಯಗಳಿಗೆ ನಡೆಸುತ್ತದೆ, ಆದರೆ ಯಾವಾಗಲೂ ಪವಿತ್ರಾತ್ಮಭರಿತರಾಗಿರಿ.


ನಿನ್ನ ಬಾಯಿ ಉತ್ತಮವಾದ ದ್ರಾಕ್ಷಾರಸದಂತಿರಲಿ. ನನ್ನ ಪ್ರಿಯೆಗಾಗಿ ಈ ದ್ರಾಕ್ಷಾರಸವು ಮೆಲ್ಲನೆ ಇಳಿದುಹೋಗುವುದು. ನಿದ್ರಿಸುವವರ ತುಟಿಗಳಲ್ಲಿ ಅದು ಸರಾಗವಾಗಿ ಹರಿದುಹೋಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು