ಜ್ಞಾನೋಕ್ತಿಗಳು 23:6 - ಪರಿಶುದ್ದ ಬೈಬಲ್6 ಸ್ವಾರ್ಥಿಯೊಂದಿಗೆ ಊಟಮಾಡಬೇಡ. ಅವನು ಇಷ್ಟಪಡುವ ಮೃಷ್ಠಾನ್ನದಿಂದ ದೂರವಿರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಲೋಭಿಯ ಅನ್ನವನ್ನು ಉಣ್ಣದಿರು, ಅವನ ರುಚಿಪದಾರ್ಥಗಳನ್ನು ಬಯಸಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಜಿಪುಣ ದೃಷ್ಟಿಯವನು ಬಡಿಸುವ ಅನ್ನವನ್ನು ಉಣಬೇಡ; ಅವನ ರುಚಿಪದಾರ್ಥಗಳನ್ನು ಬಯಸಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಲೋಭಿಯ ಅನ್ನವನು ಉಣ್ಣದಿರು; ಅವನ ರುಚಿಪದಾರ್ಥಗಳನ್ನು ಬಯಸಬೇಡ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಜಿಪುಣನ ಆಹಾರವನ್ನು ತಿನ್ನಬೇಡ; ಅವನ ರುಚಿ ಪದಾರ್ಥಗಳನ್ನು ಆಶಿಸಬೇಡ. ಅಧ್ಯಾಯವನ್ನು ನೋಡಿ |
“ಸಾಲ ವಜಾಮಾಡುವ ಏಳನೆಯ ವರ್ಷ ಸಮೀಪವಾಯಿತೆಂದು ನೀವು ಯಾರಿಗೂ ಸಾಲ ಕೊಡದೇ ಸಹಾಯ ಮಾಡದೇ ಇರಬಾರದು. ಅಂಥಾ ದುಷ್ಟ ಆಲೋಚನೆ ನಿಮ್ಮ ಮನಸ್ಸಿನೊಳಗೆ ಹುಟ್ಟದಿರಲಿ. ಸಹಾಯದ ಅಗತ್ಯವಿರುವ ವ್ಯಕ್ತಿಯ ಬಗ್ಗೆ ನಿಮ್ಮಲ್ಲಿ ಯಾವ ಕೆಟ್ಟ ಆಲೋಚನೆಯೂ ಇರಬಾರದು. ನೀವು ಆ ಬಡ ವ್ಯಕ್ತಿಗೆ ಸಹಾಯ ಮಾಡದಿದ್ದರೆ ನಿಮ್ಮ ವಿರುದ್ಧವಾಗಿ ಅವನು ಯೆಹೋವನಿಗೆ ದೂರು ಹೇಳುವನು. ಆಗ ನೀವು ಯೆಹೋವನ ಮುಂದೆ ದೋಷಿಗಳಾಗಿ ಕಂಡುಬರುವಿರಿ.