Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 24:22 - ಪರಿಶುದ್ದ ಬೈಬಲ್‌

22 ಯಾಕೆಂದರೆ ಅವರು ಬೇಗನೆ ನಾಶವಾಗುವರು. ದೇವರು ಮತ್ತು ರಾಜನು ತಮ್ಮ ವೈರಿಗಳಿಗೆ ಎಷ್ಟು ಕೇಡುಮಾಡಬಲ್ಲರೆಂಬುದು ನಿನಗೆ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅವರಿಬ್ಬರು ವಿಧಿಸುವ ವಿಪತ್ತು ಫಕ್ಕನೆ ಸಂಭವಿಸುವುದು, ಅವರಿಂದಾಗುವ ನಾಶವು ಯಾರಿಗೆ ತಿಳಿದೀತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅವರಿಬ್ಬರು ವಿಧಿಸುವ ವಿಪತ್ತು ಫಕ್ಕನೆ ಸಂಭವಿಸೀತು, ಅವರಿಂದಾಗುವ ನಾಶವು ಯಾರಿಗೆ ತಿಳಿದೀತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅವರಿಬ್ಬರು ವಿಧಿಸುವ ವಿಪತ್ತು ಫಕ್ಕನೆ ಸಂಭವಿಸುವದು; ಅವರಿಂದಾಗುವ ನಾಶವು ಯಾರಿಗೆ ತಿಳಿದೀತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಏಕೆಂದರೆ ಅವರಿಬ್ಬರು ವಿಧಿಸುವ ವಿಪತ್ತು ಫಕ್ಕನೆ ಸಂಭವಿಸುವದು; ಅವರು ಯಾವ ವಿಪತ್ತುಗಳನ್ನು ತರಬಹುದು ಎಂದು ಯಾರಿಗೆ ತಿಳಿದಿದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 24:22
13 ತಿಳಿವುಗಳ ಹೋಲಿಕೆ  

ಎಫ್ರಾಯೀಮ್ ಶಿಕ್ಷಿಸಲ್ಪಡುವನು. ಅವನು ದ್ರಾಕ್ಷಿಹಣ್ಣಿನಂತೆ ನಜ್ಜುಗುಜ್ಜಾಗುವನು. ಕಾರಣವೇನೆಂದರೆ, ಅವನು ಹೊಲಸನ್ನು ಹಿಂಬಾಲಿಸಲು ತೀರ್ಮಾನಿಸಿದ್ದಾನೆ.


ದೇವರೇ, ನಿನ್ನ ಕೋಪದ ಪೂರ್ಣ ಬಲವನ್ನು ಯಾರೂ ತಿಳಿಯರು. ನಿನ್ನಲ್ಲಿ ನಮಗಿರುವ ಭಯಭಕ್ತಿಯು ನಿನ್ನ ಕೋಪದಷ್ಟೇ ದೊಡ್ಡದಾಗಿವೆ.


ರಾಜನ ಕೋಪವು ಸಿಂಹದ ಘರ್ಜನೆಯಂತಿದೆ. ರಾಜನನ್ನು ಕೋಪಗೊಳಿಸಿದರೆ ಪ್ರಾಣಕ್ಕೆ ಹಾನಿ.


ರಾಜನು ಕೋಪದಿಂದಿರುವಾಗ ಯಾರನ್ನಾದರೂ ಕೊಂದರೂ ಕೊಲ್ಲಬಹುದು. ಆದರೆ ಜ್ಞಾನಿಯು ಆತನ ಕೋಪವನ್ನು ಶಮನಗೊಳಿಸಬಲ್ಲನು.


ಆದರೆ ಅವನಿಗೆ ಆಪತ್ತು ಇದ್ದಕ್ಕಿದ್ದಂತೆ ಬರುವುದು. ಅವನು ನಾಶವಾಗುವನು! ಅವನಿಗೆ ಸಹಾಯಮಾಡಲು ಯಾರೂ ಇರುವುದಿಲ್ಲ!


ಒಳ್ಳೆಯವನು ಏಳುಸಲ ಬಿದ್ದರೂ ಅವನು ಮತ್ತೆ ಎದ್ದುನಿಲ್ಲುವನು. ಆದರೆ ಕೆಡುಕರು ಒಂದೇ ಆಪತ್ತಿನಿಂದ ಶಾಶ್ವತವಾಗಿ ಸೋತುಹೋಗುವರು.


ಆಗ ಅದೋನೀಯನ ಅತಿಥಿಗಳೆಲ್ಲರೂ ಭಯಗೊಂಡು ಓಡಿಹೋದರು.


ಮನುಷ್ಯನಿಗೆ ಮುಂದೆ ಏನಾಗುವುದೋ ತಿಳಿಯದು. ಬಲೆಯಲ್ಲಿ ಸಿಕ್ಕಿಕೊಂಡಿರುವ ಮೀನಿನಂತೆಯೂ ಬೋನಿನಲ್ಲಿ ಸಿಕ್ಕಿಕೊಂಡ ಪಕ್ಷಿಯಂತೆಯೂ ಮನುಷ್ಯನು ತನಗೆ ಸಂಭವಿಸುವ ಕೇಡುಗಳಿಗೆ ಗುರಿಯಾಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು