Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 24:30 - ಪರಿಶುದ್ದ ಬೈಬಲ್‌

30 ಸೋಮಾರಿಯ ಹೊಲದ ಸಮೀಪದಲ್ಲೂ ಅಜ್ಞಾನಿಯ ದ್ರಾಕ್ಷಿತೋಟದ ಬಳಿಯಲ್ಲೂ ನಡೆದುಹೋದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಸೋಮಾರಿಯ ಹೊಲದ ಮೇಲೆಯೂ, ಬುದ್ಧಿಹೀನನ ದ್ರಾಕ್ಷಿಯ ತೋಟದ ಮೇಲೆಯೂ ಹಾದು ಹೋದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಸೋಮಾರಿಯ ಹೊಲದ ಮೇಲೆ ನಡೆದುಹೋದೆ; ಮತಿಗೆಟ್ಟವನ ತೋಟದ ಮೇಲೆ ಹಾದುಹೋದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಸೋಮಾರಿಯ ಹೊಲದ ಮೇಲೆಯೂ ಬುದ್ಧಿಹೀನನ ತೋಟದ ಮೇಲೆಯೂ ಹಾದು ಹೋದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ನಾನು ಸೋಮಾರಿಯ ಹೊಲದ ಪಕ್ಕದಲ್ಲಿ ಬುದ್ಧಿಹೀನನ ದ್ರಾಕ್ಷಿತೋಟದ ಕಡೆಯಲ್ಲಿ ಹಾದು ಹೋದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 24:30
14 ತಿಳಿವುಗಳ ಹೋಲಿಕೆ  

ತನ್ನ ಜಮೀನಿನಲ್ಲಿ ದುಡಿಯುವ ರೈತನಿಗೆ ಸಾಕಷ್ಟು ಆಹಾರವಿರುವುದು. ಆದರೆ ಮೂಢನು ಪ್ರಯೋಜನವಿಲ್ಲದ ಸಂಗತಿಗಳಲ್ಲಿ ತನ್ನ ಸಮಯವನ್ನು ಹಾಳುಮಾಡುವನು.


ನಾನು ನೋಡಿರುವಂತೆ, ಅಧರ್ಮವನ್ನು ಮತ್ತು ಕೇಡನ್ನು ಬಿತ್ತುವವರು ಅದನ್ನೇ ಕೊಯ್ಯುವರು.


ಬುದ್ಧಿವಂತನು ವಿವೇಕದಿಂದ ಮಾತಾಡುತ್ತಾನೆ. ಆದರೆ ಬುದ್ಧಿಹೀನನಿಗೆ ಹೊಡೆತ ಬೀಳುವುದು.


ಆದರೆ ವ್ಯಭಿಚಾರ ಮಾಡುವವನು ಮೂರ್ಖನಾಗಿದ್ದಾನೆ. ಅದನ್ನು ಮಾಡುವವನು ತನ್ನನ್ನೇ ನಾಶಮಾಡಿಕೊಳ್ಳುತ್ತಾನೆ.


ನಾನು ಬಾಲಕನಾಗಿದ್ದೆನು, ಈಗ ವೃದ್ಧನಾಗಿದ್ದೇನೆ. ನೀತಿವಂತರನ್ನು ದೇವರು ತೊರೆದುಬಿಟ್ಟದ್ದನ್ನಾಗಲಿ ಅವನ ಮಕ್ಕಳು ಆಹಾರಕ್ಕಾಗಿ ಬೇಡುವುದನ್ನಾಗಲಿ ನಾನೆಂದೂ ಕಾಣಲಿಲ್ಲ.


“ಯೋಬನೇ, ನನಗೆ ಕಿವಿಗೊಡು, ಆಗ ನಾನು ನಿನಗೆ ಅದನ್ನು ವಿವರಿಸುವೆನು. ನಾನು ನೋಡಿರುವುದನ್ನೇ ನಿನಗೆ ತಿಳಿಸುವೆನು.


“ಯೋಬನೇ, ನಾವು ಈ ಸಂಗತಿಗಳನ್ನು ವಿಚಾರಿಸಿದ್ದೇವೆ; ಅವು ಸತ್ಯವೆಂದು ನಮಗೆ ತಿಳಿದಿದೆ. ಆದ್ದರಿಂದ ನೀನು ಸಹ ಕಿವಿಗೊಟ್ಟು ಅವುಗಳನ್ನು ತಿಳಿದುಕೊ.”


ನನ್ನ ಅಲ್ಪಕಾಲದ ಜೀವನದಲ್ಲಿ ನಾನು ಪ್ರತಿಯೊಂದನ್ನೂ ನೋಡಿದ್ದೇನೆ. ನೀತಿವಂತರು ಯೌವನ ಪ್ರಾಯದಲ್ಲಿ ಸಾಯುವುದನ್ನೂ ನೋಡಿದ್ದೇನೆ. ದುಷ್ಟರು ಬಹುಕಾಲ ಬದುಕುವುದನ್ನೂ ನೋಡಿದ್ದೇನೆ.


ಒಳ್ಳೆಯವರು ಇದನ್ನು ಕಂಡು ಸಂತೋಷಪಡುವರು. ದುಷ್ಟರು ಇದನ್ನು ಕಂಡು ತಮ್ಮ ಬಾಯಿಗಳನ್ನು ಮುಚ್ಚಿಕೊಳ್ಳುವರು.


ಒಬ್ಬನು ಕೆಲಸಮಾಡಲಾರದಷ್ಟು ತುಂಬ ಸೋಮಾರಿಯಾಗಿದ್ದರೆ, ಅವನ ಮನೆಯು ಸೋರಲಾರಂಭಿಸುವುದು; ಅದರ ಮೇಲ್ಛಾವಣಿಗೆಯು ಬೀಳತೊಡಗುವುದು.


ಸೋಮಾರಿಯ ಆಸೆಗಳೆಲ್ಲಾ ವ್ಯರ್ಥ. ಅವನೆಂದಿಗೂ ಅವುಗಳನ್ನು ಪಡೆಯಲಾರ. ಕಷ್ಟಪಟ್ಟು ದುಡಿಯುವವನು ತನ್ನ ಆಸೆಗಳನ್ನು ಈಡೇರಿಸಿಕೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು