Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 25:11 - ಪರಿಶುದ್ದ ಬೈಬಲ್‌

11 ನೀನು ಸರಿಸಮಯದಲ್ಲಿ ಒಳ್ಳೆಯದನ್ನು ಹೇಳಿದರೆ, ಅದು ಬೆಳ್ಳಿಯ ತಟ್ಟೆಯಲ್ಲಿರುವ ಚಿನ್ನದ ಸೇಬಿನಂತಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಸಮಯೋಚಿತವಾದ ಮಾತುಗಳು ಬೆಳ್ಳಿಯ ಕಟ್ಟಿನಲ್ಲಿ ಖಚಿತವಾದ ಬಂಗಾರದ ಹಣ್ಣುಗಳಿಗೆ ಸಮಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸಮಯೋಚಿತ ಮಾತು ಬೆಳ್ಳಿ ತಟ್ಟೆಯಲ್ಲಿ ಖಚಿತವಾದ ಬಂಗಾರದ ಹಣ್ಣು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಸಮಯೋಚಿತವಾದ ಮಾತುಗಳು ಬೆಳ್ಳಿಯ ನಕಾಸಿಯಲ್ಲಿ ಖಚಿತವಾದ ಬಂಗಾರದ ಹಣ್ಣುಗಳಿಗೆ ಸಮಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಸಮಯೋಚಿತವಾದ ಮಾತು ಬೆಳ್ಳಿಯ ಚಿತ್ರಗಳಲ್ಲಿ ಬಂಗಾರದ ಸೇಬಿನಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 25:11
8 ತಿಳಿವುಗಳ ಹೋಲಿಕೆ  

ಸಮರ್ಪಕವಾದ ಉತ್ತರ ಸಂತೋಷವನ್ನು ಉಂಟುಮಾಡುವುದು; ತಕ್ಕ ಸಮಯದಲ್ಲಿ ಸಮಯೋಚಿತವಾದ ಮಾತು ಅತ್ಯುತ್ತಮ.


ನನ್ನ ಒಡೆಯನಾದ ಯೆಹೋವನು ನನಗೆ ಬೋಧಿಸುವ ಸಾಮರ್ಥ್ಯವನ್ನು ಅನುಗ್ರಹಿಸಿದ್ದಾನೆ. ಈಗ ನಾನು ದುಃಖದಲ್ಲಿರುವ ಈ ಜನರಿಗೆ ಬೋಧಿಸುತ್ತಿದ್ದೇನೆ. ಪ್ರತೀ ಮುಂಜಾನೆ ವಿದ್ಯಾರ್ಥಿಯೋ ಎಂಬಂತೆ ಆತನು ನನ್ನನ್ನು ಎಬ್ಬಿಸಿ ನನಗೆ ಬೋಧಿಸುತ್ತಾನೆ.


ಪ್ರಸಂಗಿಯು ಸರಿಯಾದ ಪದಗಳನ್ನು ಪ್ರಯಾಸದಿಂದ ಕಂಡುಹಿಡಿದು ಬಳಸಿದನು; ಸತ್ಯವೂ ಭರವಸೆಗೆ ಯೋಗ್ಯವೂ ಆದ ಉಪದೇಶಗಳನ್ನು ಬರೆದನು.


ಯಥಾರ್ಥವಾದ ಉತ್ತರ ಜನರೆಲ್ಲರನ್ನು ಸಂತೋಷಗೊಳಿಸುವುದು; ಅದು ತುಟಿಯ ಮೇಲಿನ ಮುದ್ದಿನಂತಿದೆ.


ಒಳ್ಳೆಯವನು ತನ್ನ ಹೃದಯದಲ್ಲಿ ಒಳ್ಳೆಯವುಗಳನ್ನು ಇಟ್ಟುಕೊಂಡಿರುತ್ತಾನೆ. ಆದ್ದರಿಂದ ಅವನು ತನ್ನ ಹೃದಯದಿಂದ ಬರುವ ಒಳ್ಳೆಯವುಗಳನ್ನೇ ಮಾತಾಡುತ್ತಾನೆ. ಆದರೆ ದುಷ್ಟನು ತನ್ನ ಹೃದಯದಲ್ಲಿ ಕೆಟ್ಟವುಗಳನ್ನು ಶೇಖರಿಸಿಕೊಂಡಿರುತ್ತಾನೆ. ಆದ್ದರಿಂದ ಅವನು ತನ್ನ ಹೃದಯದಿಂದ ಬರುವ ಕೆಟ್ಟವುಗಳನ್ನೇ ಮಾತಾಡುತ್ತಾನೆ.


ಇಲ್ಲವಾದರೆ ಅದನ್ನು ಕೇಳಿದವರೆಲ್ಲರೂ ನಿನ್ನನ್ನು ಖಂಡಿಸುವರು; ಆ ಕೆಟ್ಟ ಹೆಸರು ನಿನ್ನನ್ನೆಂದಿಗೂ ಬಿಟ್ಟುಹೋಗದು.


ನಂತರ ದಾವೀದನು ಅಬೀಗೈಲಳ ಕೊಡುಗೆಗಳನ್ನು ಸ್ವೀಕರಿಸಿ ಆಕೆಗೆ, “ಶಾಂತಿಯಿಂದ ಮನೆಗೆ ಹಿಂದಿರುಗು. ನಾನು ನಿನ್ನ ಮಾತುಗಳನ್ನು ಆಲಿಸಿದ್ದೇನೆ ಮತ್ತು ನೀನು ಕೇಳಿಕೊಂಡಿರುವುದನ್ನು ನೆರವೇರಿಸುತ್ತೇನೆ” ಎಂದು ಹೇಳಿದನು.


ಎಡವಿಬಿದ್ದವರನ್ನು ನಿನ್ನ ಮಾತುಗಳಿಂದ ಉದ್ಧರಿಸಿರುವೆ; ಬಲಹೀನವಾದ ಮೊಣಕಾಲುಗಳನ್ನು ಪ್ರೋತ್ಸಾಹದಿಂದ ಬಲಗೊಳಿಸಿರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು