ಜ್ಞಾನೋಕ್ತಿಗಳು 25:2 - ಪರಿಶುದ್ದ ಬೈಬಲ್2 ವಿಷಯಗಳನ್ನು ರಹಸ್ಯಗೊಳಿಸಿದ್ದರಿಂದ ದೇವರಿಗೆ ಸನ್ಮಾನ; ವಿಷಯಗಳನ್ನು ಕಂಡುಹಿಡಿಯುವುದರಿಂದ ರಾಜನಿಗೆ ಸನ್ಮಾನ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ವಿಷಯವನ್ನು ರಹಸ್ಯವಾಗಿಡುವುದು ದೇವರ ಮಹಿಮೆ, ವಿಷಯವನ್ನು ವಿಮರ್ಶೆಮಾಡುವುದು ರಾಜರ ಹಿರಿಮೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ವಿಷಯಗಳನ್ನು ರಹಸ್ಯವಾಗಿಡುವ ದೇವರಿಗೆ ಮಹಿಮೆ; ವಿಷಯಗಳನ್ನು ವಿಮರ್ಶಿಸುವ ರಾಜರಿಗೆ ಹಿರಿಮೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ವಿಷಯವನ್ನು ರಹಸ್ಯಮಾಡುವದು ದೇವರ ಪ್ರಭಾವ; ವಿಷಯವನ್ನು ವಿಮರ್ಶೆಮಾಡುವದು ರಾಜರ ಪ್ರಭಾವ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ವಿಷಯವನ್ನು ರಹಸ್ಯ ಮಾಡುವುದು ದೇವರ ಮಹಿಮೆ. ಒಂದು ವಿಷಯವನ್ನು ಹುಡುಕುವುದು ರಾಜರ ಮಹಿಮೆ. ಅಧ್ಯಾಯವನ್ನು ನೋಡಿ |
ರಾಜನಾದ ಅರ್ತಷಸ್ತನೇ, ನಿಮಗಿಂತ ಮೊದಲು ಆಳಿದ ರಾಜರ ಬಗ್ಗೆ ಬರೆದ ವೃತ್ತಾಂತವನ್ನು ಓದಿರಿ ಎಂದು ನಿಮ್ಮನ್ನು ವಿನಂತಿಸುತ್ತೇವೆ. ಜೆರುಸಲೇಮ್ ಯಾವಾಗಲೂ ಇತರ ರಾಜರುಗಳಿಗೆ ಎದುರುಬೀಳುವುದನ್ನು ನೀವು ಅದರಲ್ಲಿ ಕಂಡುಕೊಳ್ಳುವಿರಿ. ಬೇರೆ ರಾಜರನ್ನು ಮತ್ತು ದೇಶಗಳವರನ್ನು ತುಂಬಾ ಕಷ್ಟಕ್ಕೆ ಒಳಪಡಿಸಿದ್ದು ಮಾತ್ರವಲ್ಲ, ಪೂರ್ವಕಾಲದಿಂದಲೂ ಈ ನಗರದಿಂದ ಎಷ್ಟೋ ದಂಗೆಗಳು ಎದ್ದಿವೆ. ಆ ಕಾರಣಕ್ಕಾಗಿಯೇ ಜೆರುಸಲೇಮ್ ನಾಶಮಾಡಲ್ಪಟ್ಟಿತ್ತು.