ಜ್ಞಾನೋಕ್ತಿಗಳು 25:21 - ಪರಿಶುದ್ದ ಬೈಬಲ್21 ನಿನ್ನ ವೈರಿ ಹಸಿವೆಗೊಂಡಿದ್ದರೆ, ಅವನಿಗೆ ಊಟಕೊಡು. ನಿನ್ನ ವೈರಿ ಬಾಯಾರಿದ್ದರೆ, ಅವನಿಗೆ ನೀರು ಕೊಡು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನಿನ್ನ ವೈರಿ ಹಸಿದಿದ್ದರೆ ಅನ್ನವಿಡು, ಬಾಯಾರಿದ್ದರೆ ನೀರುಕೊಡು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಹಗೆಯವನು ಹಸಿದಿದ್ದರೆ ಅನ್ನ ನೀಡು, ಬಾಯಾರಿದ್ದರೆ ಕುಡಿಯಲು ಕೊಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನಿನ್ನ ವೈರಿ ಹಸಿದಿದ್ದರೆ ಅನ್ನವಿಡು, ಬಾಯಾರಿದ್ದರೆ ನೀರುಕೊಡು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನಿನ್ನ ಶತ್ರು ಹಸಿದಿದ್ದರೆ ಉಣ್ಣುವುದಕ್ಕೆ ಅವನಿಗೆ ಊಟಕೊಡು; ಅವನು ಬಾಯಾರಿದ್ದರೆ ಕುಡಿಯುವುದಕ್ಕೆ ನೀರು ಕೊಡು. ಅಧ್ಯಾಯವನ್ನು ನೋಡಿ |
ಆ ನಾಯಕರುಗಳು ಎದ್ದು ಸೆರೆಯವರಿಗೆ ಸಹಾಯ ಮಾಡಿದರು. ಇಸ್ರೇಲ್ ಸೈನಿಕರು ಸೂರೆಮಾಡಿದ ಬಟ್ಟೆಬರೆಗಳನ್ನು ಈ ನಾಯಕರು ಪಡೆದುಕೊಂಡು ಬೆತ್ತಲೆಯಾಗಿದ್ದ ಸೆರೆಯವರಿಗೆ ಕೊಟ್ಟರು. ಅವರ ಕಾಲಿಗೆ ಕೆರಗಳನ್ನು ಕೊಟ್ಟು, ಊಟೋಪಚಾರಗಳಿಂದ ಸತ್ಕರಿಸಿದರು. ಗಾಯಗೊಂಡವರಿಗೆ ಎಣ್ಣೆ ಹಚ್ಚಿ ಅವರಲ್ಲಿದ್ದ ಬಲಹೀನರನ್ನು ಕತ್ತೆಯ ಮೇಲೆ ಕುಳ್ಳಿರಿಸಿ ಜೆರಿಕೊವಿನಲ್ಲಿದ್ದ ಅವರವರ ಮನೆಗಳಿಗೆ ಕರೆದುಕೊಂಡು ಹೋದರು. ಜೆರಿಕೊವಿಗೆ “ಖರ್ಜೂರ ಮರಗಳ ಊರು” ಎಂಬ ಹೆಸರಿದೆ. ಅನಂತರ ಆ ನಾಲ್ಕು ಮಂದಿ ನಾಯಕರು ಸಮಾರ್ಯದಲ್ಲಿದ್ದ ತಮ್ಮ ಮನೆಗೆ ಹೋದರು.