Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 26:1 - ಪರಿಶುದ್ದ ಬೈಬಲ್‌

1 ಮೂಢನನ್ನು ಗೌರವಿಸುವುದು ಸರಿಯಲ್ಲ. ಅದು ಬೇಸಿಗೆಕಾಲದಲ್ಲಿ ಬೀಳುವ ಹಿಮದಂತೆಯೂ ಸುಗ್ಗೀಕಾಲದಲ್ಲಿ ಬೀಳುವ ಮಳೆಯಂತೆಯೂ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಬೇಸಿಗೆಯಲ್ಲಿ ಹಿಮ, ಸುಗ್ಗಿಯಲ್ಲಿ ಮಳೆ ಹೇಗೋ, ಮೂಢನಿಗೆ ಮಾನವು ಹಾಗೆ ಸರಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಬೇಸಿಗೆಯಲ್ಲಿ ಮಂಜು ಬೀಳುತ್ತದೆಯೇ? ಸುಗ್ಗಿಯಲ್ಲಿ ಮಳೆ ಬರುತ್ತದೆಯೇ? ಹಾಗೆಯೆ ಬುದ್ಧಿಹೀನನಿಗೆ ತೋರುವ ಮಾನಮರ್ಯಾದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಬೇಸಿಗೆಯಲ್ಲಿ ಹಿಮ, ಸುಗ್ಗಿಯಲ್ಲಿ ಮಳೆ ಹೇಗೋ ಮೂಢನಿಗೆ ಮಾನ ಹಾಗೆ ಸರಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಬೇಸಿಗೆಯಲ್ಲಿ ಹಿಮದಂತೆಯೂ, ಸುಗ್ಗಿಯಲ್ಲಿ ಮಳೆಯಂತೆಯೂ ಬುದ್ಧಿಹೀನನಿಗೆ ಮಾನವು ಸರಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 26:1
16 ತಿಳಿವುಗಳ ಹೋಲಿಕೆ  

ಮೂಢನಿಗೆ ಐಶ್ವರ್ಯವು ಸೂಕ್ತವಲ್ಲ; ರಾಜಕುಮಾರರ ಮೇಲೆ ದೊರೆತನ ಮಾಡುವುದು ಗುಲಾಮನಿಗೆ ಮತ್ತಷ್ಟು ಸೂಕ್ತವಲ್ಲ.


ವಿವೇಕವಿಲ್ಲದ ಅಧಿಪತಿ ತನ್ನ ಅಧೀನದಲ್ಲಿರುವವರಿಗೆ ಕೇಡುಮಾಡುವನು. ಅನ್ಯಾಯದ ಹಣವನ್ನು ತೆಗೆದುಕೊಳ್ಳದ ಅಧಿಪತಿ ಬಹುಕಾಲ ಆಳುವನು.


ಆ ದುಷ್ಟರು ಪ್ರಮುಖರಂತೆ ವರ್ತಿಸಿದರೂ ಅವರು ಕೇವಲ ನಕಲಿ ಆಭರಣಗಳಂತಿದ್ದಾರೆ.


ಮೂಢನಿಗೆ ತೋರುವ ಗೌರವ, ಕವಣೆಯಲ್ಲಿರುವ ಕಲ್ಲಿನಷ್ಟೇ ಕೆಟ್ಟದ್ದು.


ವಾಕ್ಚಾತುರ್ಯವು ಮೂಢನಿಗೆ ವಿರುದ್ಧ; ಸುಳ್ಳು ಮಾತು ಗಣ್ಯನಿಗೆ ಇನ್ನೂ ವಿರುದ್ಧ.


ದುಷ್ಟಾಧಿಕಾರಿಯೇ, ನಿನ್ನ ದುಷ್ಕೃತ್ಯಗಳ ಕುರಿತು ಜಂಬಪಡುವುದೇಕೇ? ದೇವರ ದೃಷ್ಟಿಗೆ ನೀನು ಅಸಹ್ಯಕರವಾಗಿರುವೆ.


ಅವನು ದೇವದೂಷಕರನ್ನು ತಿರಸ್ಕರಿಸುವವನೂ ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಗೌರವಿಸುವವನೂ ತನಗೆ ತೊಂದರೆಯಾದರೂ ಕೊಟ್ಟ ಮಾತಿಗೆ ತಪ್ಪದವನೂ ಆಗಿರಬೇಕು.


ಹತಾಕನು ಹಿಂತಿರುಗಿ ಹೋಗಿ ಎಸ್ತೇರಳಿಗೆ ಮೊರ್ದೆಕೈ ಹೇಳಿದ್ದೆಲ್ಲವನ್ನು ತಿಳಿಸಿದನು.


ಅರಮನೆಯ ಹೆಬ್ಬಾಗಿಲು ಎದುರಿನಲ್ಲಿದ್ದ ಬಯಲಿನಲ್ಲಿ ಮೊರ್ದೆಕೈಯನ್ನು ಹತಾಕನು ಸಂಧಿಸಿದಾಗ


ಆದರೆ ನೀವು ಮಾಡಿದ್ದು ಸರಿಯಾಗಿರದ ಪಕ್ಷದಲ್ಲಿ ಶೆಕೆಮಿನ ಹಿರಿಯರಾದ ನಿಮ್ಮನ್ನೂ ಮಿಲ್ಲೋ ಕೋಟೆಯವರನ್ನೂ ಅಬೀಮೆಲೆಕನು ನಾಶಮಾಡಲಿ. ಅಬೀಮೆಲೆಕನು ಕೂಡ ನಾಶಹೊಂದಲಿ” ಎಂದನು.


ಶೆಕೆಮಿನ ಹಿರಿಯರು ಅಬೀಮೆಲೆಕನನ್ನು ಅರಸನನ್ನಾಗಿ ಮಾಡಿದ ಸಮಾಚಾರವನ್ನು ಯೋತಾಮನು ಕೇಳಿದನು. ಕೂಡಲೇ ಅವನು ಹೋಗಿ ಗೆರಿಜ್ಜೀಮ್ ಬೆಟ್ಟದ ತುದಿಯಲ್ಲಿ ನಿಂತುಕೊಂಡನು. ಯೋತಾಮನು ಜನರಿಗೆ ಈ ಕಥೆಯನ್ನು ಕೂಗಿಕೂಗಿ ಹೇಳಿದನು: “ಶೆಕೆಮಿನ ಹಿರಿಯರೇ, ನನ್ನ ಮಾತನ್ನು ಕೇಳಿರಿ; ಆಗ ಯೆಹೋವನು ನಿಮ್ಮ ಮಾತನ್ನು ಕೇಳುವನು.


ಕುದುರೆಗೆ ಚಬುಕಬೇಕು. ಹೇಸರಕತ್ತೆಗೆ ಕಡಿವಾಣಬೇಕು. ಮೂಢನಿಗೆ ಹೊಡೆತಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು