ಜ್ಞಾನೋಕ್ತಿಗಳು 26:25 - ಪರಿಶುದ್ದ ಬೈಬಲ್25 ಅವನು ಹೇಳುವ ಸಂಗತಿಗಳು ಒಳ್ಳೆಯದಾಗಿ ಕಂಡರೂ ಅವನನ್ನು ನಂಬಬೇಡಿ. ಅವನ ಹೃದಯವು ಕೆಟ್ಟ ಆಲೋಚನೆಗಳಿಂದ ತುಂಬಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಸವಿಮಾತನಾಡಿದರೂ ಅವನನ್ನು ನಂಬಬೇಡ, ಅವನ ಹೃದಯದಲ್ಲಿ ಎಷ್ಟೋ ಹೇಯ ಕೃತ್ಯಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಹಗೆಗಾರ ಸವಿನುಡಿದರೂ ನಂಬಬೇಡ; ಹೃದಯದಲ್ಲಿದೆ ಏಳ್ಮಡಿ ಹೇಯ ಕೃತ್ಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಸವಿಮಾತಾಡಿದರೂ ಅವನನ್ನು ನಂಬಬೇಡ, ಅವನ ಹೃದಯದಲ್ಲಿ ಎಷ್ಟೋ ಅಸಹ್ಯಗಳು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಸವಿಮಾತನ್ನಾಡಿದರೆ ಅವನನ್ನು ನಂಬಬೇಡ; ಏಕೆಂದರೆ ಅವನ ಹೃದಯದಲ್ಲಿ ಏಳು ಅಸಹ್ಯ ಕಾರ್ಯಗಳಿವೆ. ಅಧ್ಯಾಯವನ್ನು ನೋಡಿ |
ಆದರೆ ಸೌಲನು ದಾವೀದನನ್ನು ಕೊಲ್ಲಬೇಕೆಂದಿದ್ದನು. ದಾವೀದನಿಗೆ ಮೋಸಮಾಡಲು ಸೌಲನು ಒಂದು ಉಪಾಯವನ್ನು ಹೂಡಿ ಅವನಿಗೆ, “ನನ್ನ ಹಿರಿಯ ಮಗಳಾದ ಮೇರಬಳು ಇದ್ದಾಳೆ. ನಾನು ಅವಳನ್ನು ನಿನಗೆ ಮದುವೆ ಮಾಡಿಕೊಡುತ್ತೇನೆ. ಆಗ ನೀನೊಬ್ಬ ಬಲಶಾಲಿಯಾದ ಸೈನಿಕನಾಗುವೆ. ನೀನು ನನಗೆ ಮಗನಂತಿರುವೆ! ನಂತರ ನೀನು ಹೋಗಿ ಯೆಹೋವನ ಯುದ್ಧಗಳಲ್ಲಿ ಹೋರಾಡು” ಎಂದು ಹೇಳಿದನು. ಆದರೆ ಇದೊಂದು ಮೋಸವಾಗಿತ್ತು. “ಈಗ ನಾನು ದಾವೀದನನ್ನು ಕೊಲ್ಲುವ ಅಗತ್ಯವಿಲ್ಲ. ನನಗೋಸ್ಕರ ಫಿಲಿಷ್ಟಿಯರೇ ಅವನನ್ನು ಕೊಲ್ಲುವಂತೆ ಮಾಡುತ್ತೇನೆ” ಎಂಬದು ಸೌಲನ ನಿಜವಾದ ಆಲೋಚನೆಯಾಗಿತ್ತು.