Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 27:1 - ಪರಿಶುದ್ದ ಬೈಬಲ್‌

1 ಭವಿಷ್ಯತ್ತಿನ ಕುರಿತು ಜಂಬಪಡಬೇಡ. ನಾಳೆ ಏನಾಗುವುದೋ ನಿನಗೆ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಾಳೆ ಎಂದು ಕೊಚ್ಚಿಕೊಳ್ಳಬೇಡ, ಒಂದು ದಿನದೊಳಗೆ ಏನಾಗುವುದೋ ನಿನಗೆ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನಾಳೆ ಕುರಿತು ಕೊಚ್ಚಿಕೊಳ್ಳಬೇಡ; ಇಂದು ಒದಗಲಿರುವುದೇ ನಿನಗೆ ತಿಳಿದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನಾಳೆ ಎಂದು ಕೊಚ್ಚಿಕೊಳ್ಳಬೇಡ; ಒಂದು ದಿನದೊಳಗೇ ಏನಾಗುವದೋ ನಿನಗೆ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನಾಳೆಯ ವಿಷಯವಾಗಿ ಕೊಚ್ಚಿಕೊಳ್ಳಬೇಡ; ಏಕೆಂದರೆ ಒಂದು ದಿನದೊಳಗೆ ಏನಾಗುವುದೋ ನಿನಗೆ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 27:1
9 ತಿಳಿವುಗಳ ಹೋಲಿಕೆ  

ದೇವರು ಹೀಗೆನ್ನುತ್ತಾನೆ: “ಸುಪ್ರಸನ್ನತೆಯ ಕಾಲದಲ್ಲಿ ನಾನು ನಿನಗೆ ಕಿವಿಗೊಟ್ಟೆನು, ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯ ಮಾಡಿದೆನು.” ಇದೇ ಆ “ಸುಪ್ರಸನ್ನತೆಯ ಕಾಲ.” ಇದೇ ಆ “ರಕ್ಷಣೆಯ ದಿನ.”


ಯೆಹೋವನು ನಿನ್ನನ್ನು ಮತ್ತು ಇಸ್ರೇಲರನ್ನು ಫಿಲಿಷ್ಟಿಯರ ವಶಕ್ಕೆ ಒಪ್ಪಿಸುತ್ತಾನೆ. ಫಿಲಿಷ್ಟಿಯರು ಇಸ್ರೇಲ್ ಸೈನ್ಯವನ್ನು ಸೋಲಿಸುವಂತೆ ಯೆಹೋವನು ಮಾಡುತ್ತಾನೆ. ಮಾರನೆಯ ದಿನ, ನೀನು ಮತ್ತು ನಿನ್ನ ಮಕ್ಕಳು ನನ್ನೊಡನೆ ಇಲ್ಲಿರುತ್ತೀರಿ!” ಎಂದು ಹೇಳಿದನು.


ಅವರು ಬಂದು, “ನಾನು ಸ್ವಲ್ಪ ದ್ರಾಕ್ಷಾರಸ ಕುಡಿಯುತ್ತೇನೆ. ಅಥವಾ ನಾನು ಸ್ವಲ್ಪ ಮದ್ಯವನ್ನು ಕುಡಿಯುತ್ತೇನೆ. ನಾನು ನಾಳೆಯೂ ಹೀಗೆ ಮಾಡುವೆನು. ನಾನು ಇನ್ನೂ ಹೆಚ್ಚಾಗಿ ಕುಡಿಯುವೆನು” ಎಂದು ಹೇಳುವರು.


ನಮ್ಮ ದೇವರು ಆತನೇ, ನಾವು ಆತನವರೇ. ಆತನ ಸ್ವರಕ್ಕೆ ಕಿವಿಗೊಡುವುದಾದರೆ ಇಂದೇ ನಾವು ಆತನ ಮಂದೆಯಾಗುತ್ತೇವೆ.


ರಾಜನಾದ ಅಹಾಬನು, “ಯುದ್ಧಕ್ಕೆ ಹೋಗುವ ಸೈನಿಕನು ತನ್ನ ಆಯುಧಗಳನ್ನು ಧರಿಸಿಕೊಳ್ಳುವಾಗ ಹೆಚ್ಚಳಪಡದೆ, ಯುದ್ಧವಾದ ಮೇಲೆ ತನ್ನ ಆಯುಧಗಳನ್ನು ಬಿಚ್ಚಿಡುವಾಗ ಹೆಚ್ಚಳಪಡುತ್ತಾನೆಂಬುದನ್ನು ಬೆನ್ಹದದನಿಗೆ ಹೇಳಿ” ಎಂದು ಉತ್ತರಿಸಿದನು.


“ಅಷ್ಟೇ ಅಲ್ಲ” ಹಾಮಾನನು ಮುಂದುವರಿಸುತ್ತಾ, “ಎಸ್ತೇರ್ ರಾಣಿಯು ಅರಸನೊಡನೆ ನನ್ನೊಬ್ಬನನ್ನೇ ಕರೆದು ಔತಣ ಮಾಡಿಸಿದಳು. ನಾಳೆಯ ಔತಣ ಸಮಾರಂಭಕ್ಕೂ ಅರಸನೊಡನೆ ನನ್ನನ್ನು ತಿರಿಗಿ ಬರಲು ಆಮಂತ್ರಿಸಿರುತ್ತಾಳೆ.


ಯಾಕೆಂದರೆ ಮುಂದೆ ಏನಾಗುವುದೋ ಅವನಿಗೆ ತಿಳಿಯದು. ಮುಂದೆ ಅದು ಹೇಗೆ ಆಗುವುದೋ ಎಂದು ಅವನಿಗೆ ತಿಳಿಸುವವರು ಯಾರು ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು