Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 27:11 - ಪರಿಶುದ್ದ ಬೈಬಲ್‌

11 ನನ್ನ ಮಗನೇ, ನೀನು ಜ್ಞಾನಿಯಾಗಿದ್ದರೆ ನನಗೆ ಸಂತೋಷ ಆಗ, ನನ್ನನ್ನು ಟೀಕಿಸುವವನಿಗೆ ಉತ್ತರ ಕೊಡಲು ನಾನು ಶಕ್ತನಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮಗನೇ, ಜ್ಞಾನವನ್ನು ಪಡೆದುಕೊಂಡು ನನ್ನ ಹೃದಯವನ್ನು ಸಂತೋಷಪಡಿಸು, ಹಾಗಾದರೆ, ನನ್ನನ್ನು ದೂರುವವನಿಗೆ ನಾನು ಉತ್ತರ ಕೊಡಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಮಗನೇ, ಜ್ಞಾನಗಳಿಸಿ ನನ್ನ ಮನಸ್ಸನ್ನು ಸಂತೋಷಪಡಿಸು; ಆಗ ನನ್ನ ನಿಂದಕರಿಗೆ ಸರಿಯಾದ ಉತ್ತರ ಸಿಕ್ಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಮಗನೇ, ಜ್ಞಾನವನ್ನು ಪಡೆದುಕೊಂಡು ನನ್ನ ಮನಸ್ಸನ್ನು ಸಂತೋಷಪಡಿಸು; ಹಾಗಾದರೆ, ನನ್ನನ್ನು ದೂರುವವನಿಗೆ ನಾನು ಉತ್ತರ ಕೊಡಲಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನನ್ನನ್ನು ನಿಂದಿಸುವವರಿಗೆ ನಾನು ಉತ್ತರಿಸುವಂತೆಯೂ, ನನ್ನ ಹೃದಯವನ್ನು ಸಂತೋಷಪಡಿಸುವಂತೆಯೂ, ನನ್ನ ಮಗುವೇ, ಜ್ಞಾನಿಯಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 27:11
14 ತಿಳಿವುಗಳ ಹೋಲಿಕೆ  

ಇವು ಸೊಲೊಮೋನನ ಜ್ಞಾನೋಕ್ತಿಗಳು: ಜ್ಞಾನಿಯಾದ ಮಗನಿಂದ ತಂದೆಗೆ ಸಂತೋಷ. ಮೂಢನಾದ ಮಗನಿಂದ ತಾಯಿಗೆ ದುಃಖ.


ನನ್ನನ್ನು ಗೇಲಿಮಾಡುವ ಜನರಿಗೆ ಆಗ ನಾನು ಉತ್ತರ ಕೊಡುವೆನು. ಯೆಹೋವನೇ, ನಿನ್ನ ಮಾತುಗಳಲ್ಲೇ ನಾನು ಭರವಸವಿಟ್ಟಿದ್ದೇನೆ.


ನಿಮ್ಮ ಮಕ್ಕಳಲ್ಲಿ ಕೆಲವರ ಬಗ್ಗೆ ನಾನು ಕೇಳಿದಾಗ ತುಂಬಾ ಸಂತೋಷವಾಯಿತು. ತಂದೆಯಾದ ದೇವರು ನಮಗೆ ಆಜ್ಞಾಪಿಸಿದ ಸತ್ಯಮಾರ್ಗವನ್ನು ಅವರು ಅನುಸರಿಸುತ್ತಿರುವುದರಿಂದ ನನಗೆ ಸಂತೋಷವಾಯಿತು.


ನನ್ನ ಸಹೋದರನೇ, ದೇವಜನರಿಗೆ ನೀನು ಪ್ರೀತಿಯನ್ನು ತೋರಿಸಿ ಅವರ ಹೃದಯಗಳನ್ನು ಸಂತೈಸಿರುವೆ. ಇದು ನನಗೆ ಹೆಚ್ಚಿನ ಸಂತಸವನ್ನೂ ನೆಮ್ಮದಿಯನ್ನೂ ತಂದುಕೊಟ್ಟಿದೆ.


ಜ್ಞಾನವನ್ನು ಪ್ರೀತಿಸುವವನ ತಂದೆ ಬಹು ಸಂತೋಷವಾಗಿರುವನು. ಆದರೆ ಸೂಳೆಯರ ಸಹವಾಸ ಮಾಡುವವನು ತನ್ನ ಐಶ್ವರ್ಯವನ್ನು ಕಳೆದುಕೊಳ್ಳುವನು.


ಜ್ಞಾನಿಯಾದ ಮಗನಿಂದ ತಂದೆಗೆ ಸಂತೋಷ. ಮೂಢನಾದರೋ ತನ್ನ ತಾಯಿಯನ್ನು ಕಡೆಗಣಿಸುವನು.


ಆದ್ದರಿಂದ ರಾಜರುಗಳೇ, ವಿವೇಕಿಗಳಾಗಿರಿ. ಅಧಿಪತಿಗಳೇ, ಬುದ್ದಿಮಾತುಗಳಿಗೆ ಕಿವಿಗೊಡಿರಿ.


ತಮ್ಮ ಆಲೋಚನೆಗಳಿಗೆ ಒಳ್ಳೆಯ ಕಾರಣಗಳನ್ನು ಕೊಡುವ ಏಳು ಜನರಿಗಿಂತಲೂ ತಾನು ಜ್ಞಾನಿಯೆಂದು ಸೋಮಾರಿಯು ಭಾವಿಸುವನು.


ಜ್ಞಾನಿಯು ಕೇಡನ್ನು ಕಂಡು ಆ ದಾರಿಯನ್ನೇ ಬಿಟ್ಟುಹೋಗುವನು. ಮೂಢನಾದರೋ ಕೇಡಿಗೆ ನೇರವಾಗಿ ನಡೆದು ಕಷ್ಟಕ್ಕೆ ಗುರಿಯಾಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು