Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 27:19 - ಪರಿಶುದ್ದ ಬೈಬಲ್‌

19 ನೀರನ್ನು ನೋಡುವವನಿಗೆ ಅವನ ಮುಖವು ಕಾಣುವುದು. ಅಂತೆಯೇ ಹೃದಯವು ವ್ಯಕ್ತಿಯ ನಿಜರೂಪವನ್ನು ತೋರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನೀರು ಮುಖಕ್ಕೆ ಮುಖವನ್ನು ಹೇಗೆ ಪ್ರತಿಬಿಂಬಿಸುತ್ತದೋ, ಹಾಗೆಯೇ ಮನುಷ್ಯನಿಗೆ ಮನುಷ್ಯನ ಹೃದಯವು ತೋರ್ಪಡಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನೀರು ಮುಖಕ್ಕೆ ಮುಖವನ್ನು ಪ್ರತಿಬಿಂಬಿಸುತ್ತದೆ; ಹೃದಯ ಮನುಷ್ಯನಿಗೆ ಮನುಷ್ಯನನ್ನು ತೋರ್ಪಡಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನೀರು ಮುಖಕ್ಕೆ ಮುಖವನ್ನು ಹೇಗೆ ಪ್ರತಿಬಿಂಬಗೊಳಿಸುತ್ತದೋ ಮನುಷ್ಯನಿಗೆ ಮನುಷ್ಯನನ್ನು ಹೃದಯವು ಹಾಗೆ ತೋರ್ಪಡಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನೀರಿನಲ್ಲಿ ಮುಖವು ಪ್ರತಿಬಿಂಬಿಸುವಂತೆ ಮನುಷ್ಯನ ಜೀವನವು ಅವನ ಹೃದಯವನ್ನು ಪ್ರತಿಬಿಂಬಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 27:19
6 ತಿಳಿವುಗಳ ಹೋಲಿಕೆ  

ಅವರೆಲ್ಲರ ಮನುಸ್ಸುಗಳನ್ನು ಸೃಷ್ಟಿಸಿದವನು ಆತನೇ. ಅವರೆಲ್ಲರ ಆಲೋಚನೆಗಳು ಆತನಿಗೆ ತಿಳಿದಿವೆ.


ಒಬ್ಬ ವ್ಯಕ್ತಿಯ ಅಂತರಂಗದಲ್ಲಿ ಈ ಕೆಟ್ಟ ಆಲೋಚನೆಗಳೆಲ್ಲವೂ ಆರಂಭವಾಗುತ್ತವೆ: ದುರಾಲೋಚನೆ, ಲೈಂಗಿಕಪಾಪ, ಕಳ್ಳತನ, ಕೊಲೆ,


ಭೂಮಿಯ ಮೇಲಿರುವ ಜನರು ತುಂಬ ದುಷ್ಟರಾಗಿದ್ದು ಯಾವಾಗಲೂ ಕೆಟ್ಟವಿಷಯಗಳ ಬಗ್ಗೆ ಆಲೋಚಿಸುತ್ತಿರುವುದನ್ನು ಯೆಹೋವನು ನೋಡಿದನು.


ಅಂಜೂರದ ಮರಗಳನ್ನು ನೋಡಿಕೊಳ್ಳುವವನು ಅವುಗಳ ಹಣ್ಣನ್ನು ತಿನ್ನುವನು; ಯಜಮಾನನನ್ನು ನೋಡಿಕೊಳ್ಳುವವನು ಪ್ರತಿಫಲವನ್ನು ಹೊಂದುವನು.


ಮರಣಕ್ಕಾಗಲಿ ಸಮಾಧಿಗಾಗಲಿ ತೃಪ್ತಿಯೇ ಇಲ್ಲ. ಅಂತೆಯೇ ಮನುಷ್ಯನ ಬಯಕೆಗಳಿಗೂ ಕೊನೆಯಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು