ಜ್ಞಾನೋಕ್ತಿಗಳು 27:20 - ಪರಿಶುದ್ದ ಬೈಬಲ್20 ಮರಣಕ್ಕಾಗಲಿ ಸಮಾಧಿಗಾಗಲಿ ತೃಪ್ತಿಯೇ ಇಲ್ಲ. ಅಂತೆಯೇ ಮನುಷ್ಯನ ಬಯಕೆಗಳಿಗೂ ಕೊನೆಯಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಪಾತಾಳಕ್ಕೂ, ನಾಶಲೋಕಕ್ಕೂ ಹೇಗೆ ತೃಪ್ತಿಯಿಲ್ಲವೋ, ಹಾಗೆಯೇ ಮನುಷ್ಯನ ಕಣ್ಣುಗಳಿಗೆ ತೃಪ್ತಿಯಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ನರಕ ಪಾತಾಳಗಳಿಗೆ ತೃಪ್ತಿಯೇ ಇಲ್ಲ; ಮನುಷ್ಯನ ಕಣ್ಣುಗಳಿಗೂ ತೃಪ್ತಿಯಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಪಾತಾಳಕ್ಕೂ ನಾಶಲೋಕಕ್ಕೂ ಹೇಗೆ ತೃಪ್ತಿಯಿಲ್ಲವೋ ಹಾಗೆ ಮನುಷ್ಯನ ಕಣ್ಣುಗಳಿಗೆ ತೃಪ್ತಿಯಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಪಾತಾಳಕ್ಕೂ ವಿನಾಶಕ್ಕೂ ತೃಪ್ತಿ ಇಲ್ಲವೇ ಇಲ್ಲ; ಹಾಗೆಯೇ, ಮನುಷ್ಯನ ಕಣ್ಣುಗಳು ಎಂದಿಗೂ ತೃಪ್ತಿಹೊಂದುವುದಿಲ್ಲ. ಅಧ್ಯಾಯವನ್ನು ನೋಡಿ |
ಯೆಹೋವನು ಹೇಳಿದ್ದು: “ಒಬ್ಬನನ್ನು ದ್ರಾಕ್ಷಾರಸವು ಮೋಸಪಡಿಸಬಹುದು. ಅದೇ ರೀತಿಯಲ್ಲಿ ಬಲಿಷ್ಠನ ಗರ್ವವು ಅವನನ್ನು ಮೋಸಪಡಿಸಬಹುದು. ಆದರೆ ಅವನಿಗೆ ಸಮಾಧಾನ ಸಿಕ್ಕುವುದಿಲ್ಲ. ಅವನು ಮರಣದಂತಿರುವನು. ಅವನಿಗೆ ಯಾವಾಗಲೂ ಹೆಚ್ಚೆಚ್ಚು ಬೇಕು. ಮರಣದಂತೆ ಅವನಿಗೆ ತೃಪ್ತಿಯೇ ಇರದು. ಅವನು ಜನಾಂಗಗಳನ್ನು ಸೋಲಿಸುತ್ತಲೇ ಇರುವನು. ಆ ಜನರನ್ನು ತನ್ನ ಕೈದಿಗಳನ್ನಾಗಿ ಮಾಡುತ್ತಲೇ ಇರುವನು.
ಸ್ವಂತ ಕುಟುಂಬವನ್ನು ಹೊಂದಿಲ್ಲದವನು ಅಂದರೆ ಅಣ್ಣತಮ್ಮಂದಿರಾಗಲಿ ಮಕ್ಕಳಾಗಲಿ ಇಲ್ಲದವನು ಸಹ ಪ್ರಯಾಸಪಟ್ಟು ದುಡಿಯುವನು. ಅವನಿಗೂ ತನ್ನ ಆಸ್ತಿಯಲ್ಲಿ ತೃಪ್ತಿಯಿಲ್ಲ. ಅವನು ಬಿಡುವಿಲ್ಲದೆ ಪ್ರಯಾಸಪಟ್ಟು ದುಡಿಯುವನು. “ನಾನೇಕೆ ಪ್ರಯಾಸಪಟ್ಟು ದುಡಿಯುತ್ತಿರುವೆ? ನಾನೇಕೆ ಜೀವನದ ಸುಖವನ್ನು ಅನುಭವಿಸುತ್ತಿಲ್ಲ?” ಎಂದು ಅವನು ಆಲೋಚಿಸುವುದೇ ಇಲ್ಲ. ಇದು ಸಹ ಕೆಟ್ಟದ್ದೂ ವ್ಯರ್ಥವಾದದ್ದೂ ಆಗಿದೆ.
ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನೀವು ದೊಡ್ಡ ಸುಗ್ಗಿಯನ್ನು ಎದುರು ನೋಡುತ್ತಿದ್ದೀರಿ. ಆದರೆ ನೀವು ಪೈರು ಕೊಯ್ಯಲು ಹೋಗುವಾಗ ಸ್ಪಲ್ಪವೇ ಕಾಳು ಇರುವುದು. ಅದನ್ನು ನೀವು ಮನೆಗೆ ತಂದಾಗ ನಾನು ಗಾಳಿಯನ್ನು ಕಳುಹಿಸಿ ಅವುಗಳನ್ನು ಹಾರಿಸಿಬಿಡುವೆನು. ಹೀಗೆಲ್ಲಾ ಯಾಕೆ ಆಗುತ್ತಿದೆ? ಯಾಕೆಂದರೆ, ನನ್ನ ಆಲಯವು ಇನ್ನೂ ಹಾಳುಬಿದ್ದಿದ್ದರೂ ನೀವೆಲ್ಲರೂ ನಿಮ್ಮ ನಿಮ್ಮ ಮನೆಗಳನ್ನು ನೋಡಿಕೊಳ್ಳುವುದಕ್ಕಾಗಿ ಓಡಿಹೋಗುತ್ತೀರಿ.