ಜ್ಞಾನೋಕ್ತಿಗಳು 27:21 - ಪರಿಶುದ್ದ ಬೈಬಲ್21 ಚಿನ್ನವಾಗಲಿ ಬೆಳ್ಳಿಯಾಗಲಿ ಬೆಂಕಿಯಿಂದ ಶುದ್ಧೀಕರಿಸಲ್ಪಡುವಂತೆಯೇ ಮನುಷ್ಯನು ಜನರಿಂದ ಬರುವ ಹೊಗಳಿಕೆಯಿಂದ ಪರೀಕ್ಷಿತನಾಗುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಪುಟಕುಲುಮೆಗಳಿಂದ ಬೆಳ್ಳಿಬಂಗಾರಗಳಿಗೆ ಶೋಧನೆಯು ಹೇಗೋ, ಹೊಗಳಿಕೆಯಿಂದ ಮನುಷ್ಯನಿಗೆ ಶೋಧನೆಯು ಹಾಗೆಯೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಬೆಳ್ಳಿಬಂಗಾರಗಳಿಗೆ ಪುಟಕುಲುಮೆಗಳಿಂದ ಶೋಧನೆ; ಮನುಷ್ಯನಿಗೆ ತನ್ನ ಸ್ತುತಿಕೀರ್ತಿಯಿಂದ ಪರಿಶೋಧನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಪುಟಕುಲುಮೆಗಳಿಂದ ಬೆಳ್ಳಿಬಂಗಾರಗಳಿಗೆ ಶೋಧನೆಯು ಹೇಗೋ ಹೊಗಳಿಕೆಯಿಂದ ಮನುಷ್ಯನಿಗೆ ಶೋಧನೆಯು ಹಾಗೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಬೆಳ್ಳಿ, ಬಂಗಾರಗಳ ಪುಟಕ್ಕೆ ಕುಲುಮೆ ಹೇಗೆಯೋ, ಹಾಗೆಯೇ ಹೊಗಳಿಕೆಯು ಮನುಷ್ಯನನ್ನು ಪರೀಕ್ಷಿಸುತ್ತದೆ. ಅಧ್ಯಾಯವನ್ನು ನೋಡಿ |
ಆ ಬಳಿಕ ನಾನು ಉಳಿದವರನ್ನು ಪರೀಕ್ಷಿಸುವೆನು. ಅವರಿಗೆ ಅನೇಕ ಸಂಕಟ ಬರಮಾಡುವೆನು. ಅದು ಬೆಳ್ಳಿಯನ್ನು ಬೆಂಕಿಯಲ್ಲಿ ಪರೀಕ್ಷಿಸಿದಂತಿರುವುದು. ಒಬ್ಬನು ಬಂಗಾರವನ್ನು ಪರೀಕ್ಷಿಸುವಂತೆ ನಾನು ಅವರನ್ನು ಪರೀಕ್ಷಿಸುವೆನು. ಆಗ ಅವರು ಸಹಾಯ ಮಾಡುವಂತೆ ನನಗೆ ಮೊರೆಯಿಡುವರು ಮತ್ತು ನಾನು ಅವರಿಗೆ ಉತ್ತರಕೊಡುವೆನು. ಆಗ ನಾನು, ‘ನೀವು ನನ್ನ ಜನರು’ ಎಂದು ಹೇಳುವೆನು. ಅದಕ್ಕವರು, ‘ಯೆಹೋವನು ನಮ್ಮ ದೇವರು’ ಎಂದು ಹೇಳುವರು.”
ನಿಮ್ಮ ನಂಬಿಕೆಯು ಪರಿಶುದ್ಧವಾಗಿದೆ ಎಂಬುದನ್ನು ಪ್ರಕಟಿಸಲು ಈ ತೊಂದರೆಗಳು ಸಂಭವಿಸುತ್ತವೆ. ನಿಮ್ಮ ನಂಬಿಕೆಯ ಪರಿಶುದ್ಧತೆಯು ಬಂಗಾರದ ಮೌಲ್ಯಕ್ಕಿಂತಲೂ ಹೆಚ್ಚಿನದಾಗಿದೆ. ಬಂಗಾರವು ನಶಿಸಿಹೋಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಲ್ಲಿ ಪುಟ ಹಾಕಿ ಅದರ ಪರಿಶುದ್ಧತೆಯನ್ನು ಶೋಧಿಸುವರು. ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ, ನಿಮ್ಮ ನಂಬಿಕೆಯ ಪರಿಶುದ್ಧತೆಯು ನಿಮಗೆ ಕೀರ್ತಿ, ಪ್ರಭಾವ ಮತ್ತು ಗೌರವಗಳನ್ನು ತರುತ್ತದೆ.