Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 27:27 - ಪರಿಶುದ್ದ ಬೈಬಲ್‌

27 ನಿನ್ನ ಇನ್ನಿತರ ಆಡುಗಳು ನಿನಗೆ ಬೇಕಾದಷ್ಟು ಹಾಲನ್ನು ಕೊಡುತ್ತವೆ. ಅದರಿಂದ ನಿನಗೂ ನಿನ್ನ ಕುಟುಂಬಕ್ಕೂ ನಿನ್ನ ಸೇವಕಿಯರಿಗೂ ಬೇಕಾದಷ್ಟು ಆಹಾರವಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ನಿನ್ನ ಊಟಕ್ಕೂ, ಮನೆಯವರ ಆಹಾರಕ್ಕೂ ಮೇಕೆಯ ಹಾಲು ಬೇಕಾದಷ್ಟಾಗುವುದು, ಅದು ನಿನ್ನ ದಾಸಿಯರಿಗೆ ಜೀವನವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ನಿನ್ನ, ನಿನ್ನ ಮನೆಯವರ ಊಟ ತಿಂಡಿಗೆ, ನಿನ್ನ ದಾಸಿಯರ ಜೀವನಕ್ಕೆ ಮೇಕೆಗಳ ಹಾಲೇ ಸಾಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ನಿನ್ನ ಊಟಕ್ಕೂ ಮನೆಯವರ ಆಹಾರಕ್ಕೂ ಮೇಕೆಯ ಹಾಲು ಬೇಕಾದಷ್ಟಾಗುವದು; ನಿನ್ನ ತೊತ್ತುಗಳಿಗೂ ಜೀವನವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ನಿನ್ನ ಊಟಕ್ಕಾಗಿಯೂ, ನಿನ್ನ ಮನೆಯವರ ಆಹಾರಕ್ಕಾಗಿಯೂ ನಿನ್ನ ದಾಸಿಯರ ಜೀವನಕ್ಕಾಗಿಯೂ ಬೇಕಾದಷ್ಟು ಆಡುಗಳ ಹಾಲು ಸಾಕಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 27:27
5 ತಿಳಿವುಗಳ ಹೋಲಿಕೆ  

ಆದ್ದರಿಂದ ನೀವು ದೇವರ ರಾಜ್ಯಕ್ಕಾಗಿ ಮತ್ತು ಆತನ ಚಿತ್ತಕ್ಕನುಸಾರವಾಗಿ ಕಾರ್ಯಗಳನ್ನು ಮಾಡಲು ಬಹಳ ತವಕಪಡಬೇಕು. ಆಗ ನಿಮಗೆ ಅಗತ್ಯವಾದ ಉಳಿದವುಗಳನ್ನು ಸಹ ಕೊಡಲಾಗುವುದು.


ಬಳಿಕ ನಿನ್ನ ಕುರಿಗಳ ಉಣ್ಣೆಯಿಂದ ಬಟ್ಟೆಗಳನ್ನು ತಯಾರಿಸಬಹುದು. ನಿನ್ನ ಆಡುಗಳನ್ನು ಮಾರಿ ಬಂದ ಹಣದಿಂದ ಜಮೀನನ್ನು ಕೊಂಡುಕೊಳ್ಳಬಹುದು.


ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡಿಹೋಗುವನು. ಆದರೆ ಒಳ್ಳೆಯವನು ಸಿಂಹದಂತೆ ಧೀರನಾಗಿರುವನು.


ಆದರೆ ಸುಗ್ಗಿಕಾಲದಲ್ಲಿ ತನಗೆ ಬೇಕಾದ ಆಹಾರವನ್ನೆಲ್ಲ ಅದು ಕೂಡಿಸಿಟ್ಟುಕೊಳ್ಳುವುದು. ಆದ್ದರಿಂದ ಚಳಿಗಾಲದಲ್ಲಿ ಅದಕ್ಕೆ ಬೇಕಾದಷ್ಟು ಆಹಾರ ಇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು