ಜ್ಞಾನೋಕ್ತಿಗಳು 28:10 - ಪರಿಶುದ್ದ ಬೈಬಲ್10 ಯಥಾರ್ಥವಂತರನ್ನು ದಾರಿತಪ್ಪಿಸಿ ಅಪಾಯದ ಮಾರ್ಗದಲ್ಲಿ ನಡೆಸುವವನು ತಾನು ತೋಡಿದ ಗುಂಡಿಗೆ ತಾನೇ ಬೀಳುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಯಥಾರ್ಥವಂತರನ್ನು ದುರ್ಮಾರ್ಗಕ್ಕೆ ಎಳೆಯುವವನು, ತಾನು ತೋಡಿದ ಗುಂಡಿಯಲ್ಲಿ ತಾನೇ ಬೀಳುವನು, ನಿರ್ದೋಷಿಗಳಿಗೋ ಸುಖವು ಸೊತ್ತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನೆಟ್ಟಗೆ ನಡೆವವರನ್ನು ಕೆಟ್ಟದಾರಿಗೆ ಎಳೆಯುವವನು ತಾನು ತೋಡಿದ ಗುಂಡಿಯಲ್ಲಿ ತಾನೇ ಬೀಳುವನು; ನಿರ್ದೋಷಿಗಳು ಸುಖಸಂತೋಷಕ್ಕೆ ಬಾಧ್ಯಸ್ಥರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಯಥಾರ್ಥವಂತರನ್ನು ದುರ್ಮಾರ್ಗಕ್ಕೆ ಎಳೆಯುವವನು ತಾನು ತೋಡಿದ ಗುಂಡಿಯಲ್ಲಿ ತಾನೇ ಬೀಳುವನು; ನಿರ್ದೋಷಿಗಳಿಗೋ ಸುಖವು ಸೊತ್ತಾಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಪ್ರಾಮಾಣಿಕರನ್ನು ದುರ್ಮಾರ್ಗದಲ್ಲಿ ದಾರಿತಪ್ಪಿಸುವವನು, ತಾನೇ ತೋಡಿದ ಗುಂಡಿಯಲ್ಲಿ ಬೀಳುವನು. ನಿರ್ದೋಷಿಗಳಾದರೋ ಒಳ್ಳೆಯ ಸೊತ್ತನ್ನು ಪಡೆಯುವರು. ಅಧ್ಯಾಯವನ್ನು ನೋಡಿ |
“ಆದರೆ ನಿನ್ನ ವಿರುದ್ಧವಾಗಿ ಹೇಳಬೇಕಾದ ಕೆಲವು ಸಂಗತಿಗಳಿವೆ. ನಿನ್ನ ಸಭೆಯಲ್ಲಿ ಬಿಳಾಮನ ದುರ್ಬೋಧನೆಗಳನ್ನು ಅನುಸರಿಸುವ ಜನರಿದ್ದಾರೆ. ಇಸ್ರೇಲಿನ ಜನರನ್ನು ಹೇಗೆ ಪಾಪಕ್ಕೆ ಒಳಗಾಗುವಂತೆ ಮಾಡಬೇಕೆಂಬುದನ್ನು ಬಿಳಾಮನು ಬಾಲಾಕನಿಗೆ ದುರ್ಬೋಧನೆ ಮಾಡಿದನು. ಆದ್ದರಿಂದ ಇಸ್ರೇಲರು ವಿಗ್ರಹಗಳಿಗೆ ಅರ್ಪಿತವಾದ ಆಹಾರವನ್ನು ತಿನ್ನುವುದರ ಮೂಲಕವಾಗಿಯೂ ಲೈಂಗಿಕ ಪಾಪಗಳನ್ನು ಮಾಡುವುದರ ಮೂಲಕವಾಗಿಯೂ ಪಾಪ ಮಾಡಿದರು.
ನನ್ನ ಒಡೆಯನೇ, ನನ್ನ ರಾಜನೇ, ನನ್ನ ಮಾತುಗಳನ್ನು ಆಲಿಸು! ನೀನು ನನ್ನ ಮೇಲೆ ಕೋಪಗೊಳ್ಳುವಂತೆ ಯೆಹೋವನು ಮಾಡಿರುವುದಾದರೆ ಆತನಿಗೆ ನೈವೇದ್ಯವನ್ನು ಅರ್ಪಿಸೋಣ. ಆದರೆ ನೀನು ನನ್ನ ಮೇಲೆ ಕೋಪಗೊಳ್ಳುವಂತೆ ಜನರು ಮಾಡಿದ್ದರೆ, ಅವರಿಗೆ ಯೆಹೋವನು ಕೇಡಾಗುವಂತೆ ಮಾಡಲಿ. ನನಗೆ ಯೆಹೋವನು ನೀಡಿದ ಭೂಮಿಯನ್ನು ನಾನು ಬಿಡುವಂತೆ ಜನರು ಬಲವಂತಪಡಿಸಿದರು. ‘ಹೋಗು, ಹೊರದೇಶೀಯರೊಂದಿಗೆ ನೆಲೆಸು. ಹೋಗು, ಇತರ ದೇವರುಗಳನ್ನು ಆರಾಧಿಸು’ ಎಂದು ಜನರು ನನಗೆ ಹೇಳಿದರು.