ಜ್ಞಾನೋಕ್ತಿಗಳು 28:12 - ಪರಿಶುದ್ದ ಬೈಬಲ್12 ಒಳ್ಳೆಯವರು ನಾಯಕರಾದಾಗ ಎಲ್ಲರಿಗೂ ಸಂತೋಷ. ಆದರೆ ಕೆಡುಕನು ಅಧಿಪತಿಯಾದಾಗ ಎಲ್ಲರೂ ಅಡಗಿಕೊಳ್ಳುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಶಿಷ್ಟರಿಗೆ ಉಲ್ಲಾಸವಾದರೆ ದೊಡ್ಡ ಸಂಭ್ರಮವಾಗುವುದು, ದುಷ್ಟರಿಗೆ ಏಳಿಗೆಯಾದರೆ ಜನರು ಅಡಗಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಸತ್ಯಸಂಧರಿಗೆ ಜಯವಾದರೆ ಸಂಭ್ರಮ ಸಡಗರ; ದುಷ್ಟರನ್ನು ಉನ್ನತಿಗೇರಿಸಿದರೆ ಬೇರೆಯವರು ಮರೆಯಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಶಿಷ್ಟರಿಗೆ ಉಲ್ಲಾಸವಾದರೆ ದೊಡ್ಡ ಸಂಭ್ರಮವಾಗುವದು; ದುಷ್ಟರಿಗೆ ಏಳಿಗೆಯಾದರೆ ಜನರು ಅಡಗಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನೀತಿವಂತರಿಗೆ ಜಯವಾದರೆ, ದೊಡ್ಡ ಘನತೆ ಇರುವುದು. ಆದರೆ ದುಷ್ಟರಿಗೆ ಏಳಿಗೆಯಾದರೆ, ಮನುಷ್ಯರು ಅಡಗಿಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿ |
ನನ್ನ ತಂದೆಯೇ, ನನ್ನ ಕೈಯಲ್ಲಿರುವ ಚೂರು ಬಟ್ಟೆಯನ್ನು ನೋಡು. ನಾನು ನಿನ್ನ ಅಂಗಿಯ ಮೂಲೆಯನ್ನು ಕತ್ತರಿಸಿಹಾಕಿದೆ. ನಾನು ನಿನ್ನನ್ನು ಕೊಲ್ಲಬಹುದಿತ್ತು, ಆದರೆ ಕೊಲ್ಲಲಿಲ್ಲ! ನೀನು ಇದನ್ನು ಅರ್ಥಮಾಡಿಕೊಳ್ಳಬೇಕೆಂದು ನಾನು ಬಯಸಿದ್ದೇನೆ. ನಾನು ನಿನ್ನ ವಿರುದ್ಧವಾಗಿ ಯಾವ ಸಂಚನ್ನೂ ಮಾಡುತ್ತಿಲ್ಲವೆಂದು ನೀನು ತಿಳಿದುಕೊಳ್ಳಬೇಕಾಗಿದೆ! ನಾನು ನಿನಗೆ ಯಾವ ತಪ್ಪನ್ನೂ ಮಾಡಿಲ್ಲ! ಆದರೆ ನೀನು ನನ್ನನ್ನು ಹುಡುಕುತ್ತಿರುವೆ; ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿರುವೆ.