ಜ್ಞಾನೋಕ್ತಿಗಳು 28:13 - ಪರಿಶುದ್ದ ಬೈಬಲ್13 ಪಾಪಗಳನ್ನು ಅಡಗಿಸಿಕೊಳ್ಳುವವನಿಗೆ ಯಶಸ್ಸು ಇಲ್ಲವೇ ಇಲ್ಲ. ತನ್ನ ಪಾಪವನ್ನು ಅರಿಕೆಮಾಡಿ ಬಿಟ್ಟುಬಿಡುವವನಿಗೆ ಕರುಣೆ ದೊರೆಯುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ದೋಷಗಳನ್ನು ಮುಚ್ಚಿಕೊಳ್ಳುವವನಿಗೆ ಶುಭವಾಗದು, ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರೆಯುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಪಾಪಗಳನ್ನು ಮುಚ್ಚಿಟ್ಟುಕೊಳ್ಳುವವನಿಗೆ ಮುಕ್ತಿ ದೊರಕದು; ಅವುಗಳನ್ನು ಒಪ್ಪಿಕೊಂಡು ಬಿಟ್ಟರೆ ಕರುಣೆ ದೊರಕುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ದೋಷಗಳನ್ನು ಮುಚ್ಚಿಕೊಳ್ಳುವವನಿಗೆ ಶುಭವಾಗದು; ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರೆಯುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನಿಗೆ ಏಳಿಗೆ ಆಗುವುದಿಲ್ಲ. ಆದರೆ ಪಾಪಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರಕುವುದು. ಅಧ್ಯಾಯವನ್ನು ನೋಡಿ |
ನಾನು ಜನರಿಗೆ, ‘ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ’ ಎಂತಲೂ ಅವರಿಗಾಗಿರುವ ಮಾನಸಾಂತರವನ್ನು ಯೋಗ್ಯವಾದ ಕಾರ್ಯಗಳ ಮೂಲಕ ತೋರ್ಪಡಿಸಬೇಕೆಂತಲೂ ಹೇಳಿದೆನು. ಮೊದಲನೆಯದಾಗಿ ದಮಸ್ಕಕ್ಕೂ ಬಳಿಕ ಜೆರುಸಲೇಮಿಗೂ ಜುದೇಯದ ಪ್ರತಿಯೊಂದು ಭಾಗಕ್ಕೂ ಹೋಗಿ ಅಲ್ಲಿರುವ ಜನರಿಗೆ ಈ ಸಂಗತಿಗಳನ್ನು ತಿಳಿಸಿದೆನು. ಅಲ್ಲದೆ ಯೆಹೂದ್ಯರಲ್ಲದ ಜನರ ಬಳಿಗೂ ಹೋದೆನು.
ಅಬ್ಷಾಲೋಮನು ಯೋವಾಬನಿಗೆ, “ನಾನು ನಿನಗೆ ಸಂದೇಶವನ್ನು ಕಳುಹಿಸಿ ಇಲ್ಲಿಗೆ ಬರಲು ಹೇಳಿ ಕಳುಹಿಸಿದ್ದೆನು. ರಾಜನ ಬಳಿಗೆ ನಿನ್ನನ್ನು ಕಳುಹಿಸಲು ನಾನು ಅಪೇಕ್ಷಿಸಿದೆನು. ಗೆಷೂರಿನಿಂದ ನನ್ನನ್ನು ಮನೆಗೆ ಕರೆಸಲು ಅವನು ಇಚ್ಛಿಸಿದ್ದು ಏಕೆ ಎಂಬುದನ್ನು ನೀನು ಕೇಳಬೇಕೆಂದು ನಾನು ಅಪೇಕ್ಷಿಸಿದೆನು. ನಾನು ಅವನನ್ನು ನೋಡಲಾಗದಿದ್ದರೆ ಗೆಷೂರಿನಲ್ಲಿ ವಾಸಿಸುವುದೇ ನನಗೆ ಚೆನ್ನಾಗಿರುತ್ತಿತ್ತು. ಈಗ ರಾಜನನ್ನು ನೋಡಲು ನನಗೆ ಅವಕಾಶವನ್ನು ಕೊಡು. ನಾನು ಪಾಪವನ್ನು ಮಾಡಿದ್ದರೆ ಅವನು ನನ್ನನ್ನು ಕೊಂದುಬಿಡಲಿ!” ಎಂದನು.