ಜ್ಞಾನಿಗಳು ತನಗೆ ಮೋಸಮಾಡಿದರೆಂಬುದು ತಿಳಿದಾಗ ಹೆರೋದನು ಬಹಳ ಕೋಪಗೊಂಡನು. ಆ ಮಗು ಹುಟ್ಟಿದ ಸಮಯವನ್ನು ಹೆರೋದನು ಜ್ಞಾನಿಗಳಿಂದ ತಿಳಿದುಕೊಂಡಿದ್ದನು. ಆ ಮಗು ಹುಟ್ಟಿ ಎರಡು ವರ್ಷಗಳಾಗಿದ್ದವು. ಆದ್ದರಿಂದ ಹೆರೋದನು ಬೆತ್ಲೆಹೇಮಿನಲ್ಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿದ್ದ ಎರಡು ವರ್ಷದ ಮತ್ತು ಅವರಿಗಿಂತ ಚಿಕ್ಕವರಾದ ಗಂಡುಮಕ್ಕಳನ್ನೆಲ್ಲಾ ಕೊಲ್ಲಬೇಕೆಂದು ಆಜ್ಞಾಪಿಸಿದನು.