Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 28:19 - ಪರಿಶುದ್ದ ಬೈಬಲ್‌

19 ಕಷ್ಟಪಟ್ಟು ದುಡಿಯುವವನಿಗೆ ಬೇಕಾದಷ್ಟು ಆಹಾರವಿರುವುದು. ನನಸಾಗದ ಕನಸುಗಳನ್ನೇ ಆಲೋಚಿಸಿಕೊಂಡಿರುವವನು ಬಡವನಾಗಿಯೇ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ದುಡಿದು ಹೊಲಗೇಯುವವನಿಗೆ ಹೊಟ್ಟೆ ತುಂಬಾ ಅನ್ನ, ವ್ಯರ್ಥ ಕಾರ್ಯಾಸಕ್ತನಿಗೆ ಹೊಟ್ಟೆತುಂಬಾ ಬಡತನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ದುಡಿದು ಹೊಲ ಗೇಯುವವನಿಗೆ ಹೊಟ್ಟೆ ತುಂಬ ಅನ್ನ; ವ್ಯರ್ಥಕಾರ್ಯಗಳಲ್ಲಿ ಆಸಕ್ತನಾದವನಿಗೆ ಬೇಕಾದಷ್ಟು ಬಡತನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ದುಡಿದು ಹೊಲಗೇಯುವವನಿಗೆ ಹೊಟ್ಟೆ ತುಂಬಾ ಅನ್ನ; ವ್ಯರ್ಥಕಾರ್ಯಾಸಕ್ತನಿಗೆ ಹೊಟ್ಟೆ ತುಂಬಾ ಬಡತನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ತನ್ನ ಹೊಲವನ್ನು ವ್ಯವಸಾಯ ಮಾಡುವವನು ಆಹಾರದಿಂದ ತೃಪ್ತಿಹೊಂದುವನು. ಆದರೆ ವ್ಯರ್ಥ ಕಾರ್ಯವನ್ನು ಹಿಂಬಾಲಿಸುವವನಿಗೆ ಸಾಕಾದಷ್ಟು ಬಡತನವು ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 28:19
9 ತಿಳಿವುಗಳ ಹೋಲಿಕೆ  

ತನ್ನ ಜಮೀನಿನಲ್ಲಿ ದುಡಿಯುವ ರೈತನಿಗೆ ಸಾಕಷ್ಟು ಆಹಾರವಿರುವುದು. ಆದರೆ ಮೂಢನು ಪ್ರಯೋಜನವಿಲ್ಲದ ಸಂಗತಿಗಳಲ್ಲಿ ತನ್ನ ಸಮಯವನ್ನು ಹಾಳುಮಾಡುವನು.


ಶೆಕೆಮಿನ ಹಿರಿಯರು ಅಬೀಮೆಲೆಕನಿಗೆ ಎಪ್ಪತ್ತು ಬೆಳ್ಳಿಯ ನಾಣ್ಯಗಳನ್ನು ಕೊಟ್ಟರು. ಆ ಬೆಳ್ಳಿಯು ಬಾಳ್‌ಬೆರೀತನ ಗುಡಿಗೆ ಸೇರಿತ್ತು. ಕೆಲವು ಗಂಡಸರನ್ನು ಕೂಲಿಗೆ ತೆಗೆದುಕೊಳ್ಳಲು ಅವನು ಈ ಬೆಳ್ಳಿಯನ್ನು ಬಳಸಿಕೊಂಡನು. ಈ ಗಂಡಸರು ಅಯೋಗ್ಯರೂ ದುಷ್ಟರೂ ಆಗಿದ್ದರು. ಅವರು ಅಬೀಮೆಲೆಕನ ಹಿಂಬಾಲಕರಾಗಿದ್ದರು.


ಎತ್ತುಗಳಿಲ್ಲದಿದ್ದರೆ ಕೊಟ್ಟಿಗೆ ಬರಿದಾಗಿರುವುದು. ದೊಡ್ಡ ಸುಗ್ಗಿಪಡೆಯಲು ಎತ್ತಿನ ಶಕ್ತಿ ಜನರಿಗೆ ಅಗತ್ಯ.


ಜ್ಞಾನಿಗಳೊಂದಿಗೆ ಸ್ನೇಹದಿಂದಿರಿ. ಆಗ ನೀವೂ ಜ್ಞಾನಿಗಳಾಗುವಿರಿ. ಆದರೆ ನೀವು ಜ್ಞಾನಹೀನರನ್ನು ನಿಮ್ಮ ಸ್ನೇಹಿತರನ್ನಾಗಿ ಆಯ್ದುಕೊಂಡರೆ, ನಿಮಗೆ ತೊಂದರೆ ಉಂಟಾಗುವುದು.


ನಿದ್ರಾನಿರತನಾಗಿರಬೇಡ, ಬಡವನಾಗುವೆ. ನಿನ್ನ ಸಮಯವನ್ನು ದುಡಿಯಲು ಉಪಯೋಗಿಸಿಕೊಂಡರೆ ನಿನಗೆ ಊಟಕ್ಕೆ ಬೇಕಾದಷ್ಟಿರುವುದು.


ಇವು ನಿನ್ನನ್ನು ಬೇಗನೆ ಬಡವನನ್ನಾಗಿ ಮಾಡಿ ಬರಿದು ಮಾಡುತ್ತದೆ; ಇದ್ದಕ್ಕಿದ್ದಂತೆ ಬಂದು ಎಲ್ಲವನ್ನು ದೋಚಿಕೊಂಡು ಹೋಗುವ ಕಳ್ಳನಂತಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು