Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 28:20 - ಪರಿಶುದ್ದ ಬೈಬಲ್‌

20 ನಂಬಿಗಸ್ತನು ಬಹಳವಾಗಿ ಆಶೀರ್ವದಿಸಲ್ಪಡುವನು. ಐಶ್ವರ್ಯವಂತನಾಗುವುದಕ್ಕಾಗಿಯೇ ಪ್ರಯತ್ನಿಸುವವನು ದಂಡನೆ ಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಂಬಿಗಸ್ತನು ಆಶೀರ್ವಾದಪೂರ್ಣನಾಗುವನು, ಧನವಂತನಾಗಲು ಆತುರಪಡುವವನು ದಂಡನೆಯನ್ನು ಹೊಂದದೆ ಇರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಪ್ರಾಮಾಣಿಕನಿಗೆ ಪೂರ್ಣಾಶೀರ್ವಾದ; ಹಣವಂತನಾಗಲು ಹಾತೊರೆಯುವವನು ಶಿಕ್ಷಾರ್ಹ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಂಬಿಗಸ್ತನು ಆಶೀರ್ವಾದಪೂರ್ಣನಾಗುವನು; ಧನವಂತನಾಗಲು ಆತುರಪಡುವವನು ದಂಡನೆಯನ್ನು ಹೊಂದದಿರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನಂಬಿಗಸ್ತನಾದ ಮನುಷ್ಯನು ಆಶೀರ್ವಾದಗಳಲ್ಲಿ ತುಂಬಿತುಳುಕುವನು; ಆದರೆ ಧನವಂತನಾಗಲು ಆತುರಪಡುವವನು, ನಿರ್ದೋಷಿಯಾಗಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 28:20
22 ತಿಳಿವುಗಳ ಹೋಲಿಕೆ  

ಮೋಸದಿಂದ ಸಂಪಾದಿಸಿದ ಹಣವು ಕ್ಷಯಿಸಿ ಹೋಗುವುದು. ದುಡಿದು ಸಂಪಾದಿಸಿದ ಹಣ ಹೆಚ್ಚುತ್ತಾ ಹೋಗುವುದು.


ನಿನಗೆ ಸಂಭವಿಸುವ ಸಂಗತಿಗಳ ವಿಷಯದಲ್ಲಿ ಭಯಪಡಬೇಡ. ನಾನು ನಿನಗೆ ಹೇಳುವುದೇನೆಂದರೆ, ಸೈತಾನನು ನಿಮ್ಮಲ್ಲಿ ಕೆಲವರನ್ನು ಪರೀಕ್ಷಿಸುವುದಕ್ಕಾಗಿ ಸೆರೆಮನೆಗೆ ಹಾಕಿಸುತ್ತಾನೆ. ನೀವು ಹತ್ತು ದಿನಗಳ ಕಾಲ ಸಂಕಟವನ್ನು ಅನುಭವಿಸುವಿರಿ. ನೀನು ಸಾಯಬೇಕಾದರೂ ನಂಬಿಗಸ್ತನಾಗಿದ್ದರೆ, ನಾನು ನಿನಗೆ ಜೀವವೆಂಬ ಕಿರೀಟವನ್ನು ದಯಪಾಲಿಸುವೆನು.


ಜಿಪುಣನು ಐಶ್ವರ್ಯವಂತನಾಗಲು ಆತುರಪಡುವನು: ಆದರೆ ತಾನು ಬೇಗನೆ ಬಡವನಾಗಲಿರುವುದನ್ನು ಅವನು ಗ್ರಹಿಸಿಕೊಳ್ಳಲಾರನು.


ಸುಲಭವಾಗಿ ಬಾಚಿಕೊಂಡ ಸ್ವಾಸ್ತ್ಯವು ಕೊನೆಯಲ್ಲಿ ಆರ್ಶೀವಾದದಾಯಕವಾಗಿರುವುದಿಲ್ಲ.


ಒಳ್ಳೆಯವನನ್ನು ಆಶೀರ್ವದಿಸುವಂತೆ ಜನರು ದೇವರನ್ನು ಪ್ರಾರ್ಥಿಸುವರು. ದುಷ್ಟನ ಮಾತುಗಳಲ್ಲಾದರೋ ಕುತಂತ್ರವೇ ಅಡಗಿಕೊಂಡಿದೆ.


ನಂಬಿಗಸ್ತರಿಗಾಗಿ ದೇಶದಲ್ಲೆಲ್ಲಾ ಹುಡುಕಿ ನೋಡುತ್ತೇನೆ. ನನ್ನ ಸೇವೆಗೆ ಅವರನ್ನೇ ನೇಮಿಸಿಕೊಳ್ಳುವೆನು. ಪರಿಶುದ್ಧರು ಮಾತ್ರ ನನ್ನ ಸೇವಕರಾಗಿರಲು ಸಾಧ್ಯ.


ಇದಾದ ಬಳಿಕ ನನ್ನ ಸಹೋದರ ಹಾನಾನಿಯನನ್ನು ಜೆರುಸಲೇಮಿನ ಆಡಳಿತಗಾರನನ್ನಾಗಿ ನೇಮಿಸಿದೆನು. ಹನನ್ಯನನ್ನು ಜೆರುಸಲೇಮಿನ ಕೋಟೆಗೆ ಅಧಿಪತಿಯನ್ನಾಗಿ ಆರಿಸಿದೆನು. ಹಾನಾನಿಯು ನಂಬಿಗಸ್ತನೂ ದೇವರಿಗೆ ಭಯಪಡುವವನೂ ಆಗಿದ್ದುದರಿಂದ ನಾನು ಅವನನ್ನು ಆರಿಸಿಕೊಂಡೆನು.


“ನೀನು ಎಲ್ಲಿ ವಾಸಮಾಡುತ್ತಿರುವೆ ಎಂಬುದು ನನಗೆ ತಿಳಿದಿದೆ. ಸೈತಾನನ ಸಿಂಹಾಸನ ವಿರುವ ಕಡೆಯಲ್ಲಿ ನೀನು ವಾಸಿಸುತ್ತಿರುವೆ. ಆದರೆ ನೀನು ನನಗೆ ನಂಬಿಗಸ್ತನಾಗಿರುವೆ. ಅಂತಿಪನ ಕಾಲದಲ್ಲಿಯೂ ನೀನು ನನ್ನಲ್ಲಿಟ್ಟಿರುವ ನಂಬಿಕೆಯನ್ನು ತಿಳಿಸಲು ನಿರಾಕರಿಸಲಿಲ್ಲ. ನಿನ್ನ ಪಟ್ಟಣದಲ್ಲಿ ಕೊಲ್ಲಲ್ಪಟ್ಟ ಅಂತಿಪನು ನನ್ನ ನಂಬಿಗಸ್ತ ಸಾಕ್ಷಿಯಾಗಿದ್ದನು. ನಿನ್ನ ನಗರ ಸೈತಾನನು ವಾಸಿಸುವ ನಗರವಾಗಿದೆ.


ಯೇಸು ತನ್ನ ಶಿಷ್ಯರಿಗೆ ಹೀಗೆಂದನು: “ಒಂದಾನೊಂದು ಕಾಲದಲ್ಲಿ ಒಬ್ಬ ಐಶ್ವರ್ಯವಂತನಿದ್ದನು. ಈ ಐಶ್ವರ್ಯವಂತನು ತನ್ನ ವ್ಯಾಪಾರವನ್ನು ನೋಡಿಕೊಳ್ಳಲು ಒಬ್ಬ ಮೇಲ್ವಿಚಾರಕನನ್ನು ನೇಮಿಸಿದನು. ಸ್ವಲ್ಪಕಾಲದ ನಂತರ, ಆ ಮೇಲ್ವಿಚಾರಕನು ತನಗೆ ಮೋಸಮಾಡುತ್ತಿದ್ದಾನೆಂಬುದು ಐಶ್ವರ್ಯವಂತನಿಗೆ ತಿಳಿಯಿತು.


ಪ್ರಭುವು ಹೀಗೆಂದನು: “ವಿವೇಕಿಯೂ ನಂಬಿಗಸ್ತನೂ ಆದ ಆಳು ಯಾರು? ಕಾಲಕಾಲಕ್ಕೆ ಸರಿಯಾಗಿ ಕೂಲಿಯಾಳುಗಳಿಗೆ ದವಸಧಾನ್ಯವನ್ನು ಅಳೆದುಕೊಟ್ಟು, ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ಯಜಮಾನನಿಂದ ನೇಮಿಸಲ್ಪಟ್ಟವನೇ.


ಐಶ್ವರ್ಯವಂತನಾಗಬೇಕೆಂಬ ಪ್ರಯತ್ನದಲ್ಲಿ ನಿನ್ನ ಆರೋಗ್ಯವನ್ನು ಕಳೆದುಕೊಳ್ಳಬೇಡ. ನೀನು ಜ್ಞಾನಿಯಾಗಿದ್ದರೆ ತಾಳ್ಮೆಯಿಂದಿರುವೆ.


ಅನೇಕರು ತಾವು ನಂಬಿಗಸ್ತರೆಂದು ಹೇಳಿಕೊಳ್ಳುತ್ತಾರೆ. ಆದರೆ ನಿಜವಾಗಿಯೂ ನಂಬಿಗಸ್ತನಾಗಿರುವ ಒಬ್ಬನನ್ನು ಕಂಡುಕೊಳ್ಳುವುದು ಬಹುಕಷ್ಟ.


ಬಡವನನ್ನು ಗೇಲಿಮಾಡಿದರೆ ಅವನನ್ನು ನಿರ್ಮಿಸಿದ ದೇವರಿಗೇ ಅವಮಾನಮಾಡಿದಂತಾಗುವುದು. ಬೇರೊಬ್ಬನ ದುರಾವಸ್ಥೆಯಲ್ಲಿ ಸಂತೋಷಪಡುವವರಿಗೆ ದಂಡನೆಯು ಖಂಡಿತ.


ಅಹೀಮೆಲೆಕನು, “ದಾವೀದನು ನಿನಗೆ ಬಹಳ ನಂಬಿಗಸ್ತನಾಗಿದ್ದಾನೆ. ದಾವೀದನಷ್ಟು ನಂಬಿಗಸ್ತನು ನಿನ್ನ ಇತರ ಅಧಿಕಾರಿಗಳಲ್ಲಿ ಇಲ್ಲವೇ ಇಲ್ಲ. ದಾವೀದನು ನಿನ್ನ ಸ್ವಂತ ಅಳಿಯ. ದಾವೀದನು ನಿನ್ನ ಅಂಗರಕ್ಷಕ ದಳಪತಿ. ದಾವೀದನನ್ನು ನಿನ್ನ ಸ್ವಂತ ಕುಟುಂಬವೆಲ್ಲ ಗೌರವಿಸುತ್ತದೆ.


“ವಿವೇಕಿಯೂ ನಂಬಿಗಸ್ತನೂ ಆದ ಸೇವಕನು ಯಾರು? ಇತರ ಸೇವಕರಿಗೆ ಆಹಾರವನ್ನು ತಕ್ಕ ಸಮಯದಲ್ಲಿ ಕೊಡುವುದಕ್ಕಾಗಿ ಯಜಮಾನನು ಯಾವ ಸೇವಕನ ಮೇಲೆ ಭರವಸೆಯಿಡುತ್ತಾನೋ ಅವನೇ.


“ಯಜಮಾನನು, ‘ನೀನು ನಂಬಿಗಸ್ತನಾದ ಒಳ್ಳೆಯ ಸೇವಕ. ಆ ಸ್ವಲ್ಪ ಹಣವನ್ನು ಒಳ್ಳೆಯ ರೀತಿಯಲ್ಲಿ ಉಪಯೋಗಿಸಿದೆ. ಆದ್ದರಿಂದ ನಾನು ನಿನಗೆ ಇದಕ್ಕಿಂತಲೂ ದೊಡ್ಡ ಕೆಲಸವನ್ನು ಕೊಡುತ್ತೇನೆ. ಬಂದು ನನ್ನ ಸೌಭಾಗ್ಯದಲ್ಲಿ ಸೇರು’ ಎಂದು ಉತ್ತರಕೊಟ್ಟನು.


ಯಾವುದೇ ಕಾರ್ಯದಲ್ಲಿ ಉತ್ಸುಕತೆಯೊಂದೇ ಸಾಲದು, ತಿಳುವಳಿಕೆಯೂ ಬೇಕು. ಯಾವುದೇ ಕಾರ್ಯದಲ್ಲಿ ದುಡುಕದಿರಿ; ಇಲ್ಲವಾದರೆ, ತಪ್ಪಾದೀತು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು