ಜ್ಞಾನೋಕ್ತಿಗಳು 28:4 - ಪರಿಶುದ್ದ ಬೈಬಲ್4 ನೀನು ನ್ಯಾಯಪ್ರಮಾಣಕ್ಕೆ ವಿಧೇಯನಾಗದಿದ್ದರೆ ಕೆಡುಕರ ಪರವಾಗಿರುವೆ. ನೀನು ನ್ಯಾಯಪ್ರಮಾಣಕ್ಕೆ ವಿಧೇಯನಾಗಿದ್ದರೆ ಕೆಡುಕರಿಗೆ ವಿರೋಧವಾಗಿರುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಧರ್ಮೋಪದೇಶವನ್ನು ಕೈಕೊಳ್ಳದವರು ದುಷ್ಟರನ್ನು ಹೊಗಳುವರು, ಕೈಕೊಳ್ಳುವವರು ಅವರನ್ನು ಎದುರಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಧರ್ಮಶಾಸ್ತ್ರವನ್ನು ಕೈಗೊಳ್ಳದವರು ದುಷ್ಟರನ್ನು ಹೊಗಳುವರು; ಕೈಗೊಳ್ಳುವವರು ಅವರ ವಿರುದ್ಧ ಹೋರಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಧರ್ಮೋಪದೇಶವನ್ನು ಕೈಕೊಳ್ಳದವರು ದುಷ್ಟರನ್ನು ಹೊಗಳುವರು, ಕೈಕೊಳ್ಳುವವರು ಅವರನ್ನು ಎದುರಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಬೋಧನೆಯನ್ನು ತ್ಯಜಿಸುವವರು ದುಷ್ಟರನ್ನು ಹೊಗಳುತ್ತಾರೆ; ಆದರೆ ಬೋಧನೆಯನ್ನು ಕೈಗೊಳ್ಳುವವರು ಅವರೊಂದಿಗೆ ಹೋರಾಡುತ್ತಾರೆ. ಅಧ್ಯಾಯವನ್ನು ನೋಡಿ |
ಪ್ರಿಯ ಸ್ನೇಹಿತರೇ, ನಾವೆಲ್ಲರೂ ಹಂಚಿಕೊಳ್ಳುವ ರಕ್ಷಣೆಯನ್ನು ಕುರಿತು ನಿಮಗೆ ಬರೆಯಬೇಕೆಂದು ನಾನು ಬಹಳವಾಗಿ ಇಚ್ಛಿಸಿದ್ದೆನು. ಆದರೆ ಮತ್ತೊಂದು ವಿಷಯದ ಬಗ್ಗೆ ನಾನು ನಿಮಗೆ ಬರೆಯುವುದು ಅಗತ್ಯವೆನಿಸಿತು. ದೇವರು ತನ್ನ ಪರಿಶುದ್ಧ ಜನರಿಗೆ ದಯಪಾಲಿಸಿರುವ ನಂಬಿಕೆಗಾಗಿ ನೀವು ಪ್ರಯಾಸಪಟ್ಟು ಹೋರಾಡುವಂತೆ ನಾನು ನಿಮ್ಮನ್ನು ಪ್ರೋತ್ಸಾಹಿಸಲು ಇಚ್ಛಿಸುತ್ತೇನೆ. ದೇವರು ನಮಗೆ ಈ ನಂಬಿಕೆಯನ್ನು ಒಂದೇಸಲ ದಯಪಾಲಿಸಿದನು. ಅದು ಸರ್ವಕಾಲಗಳಲ್ಲಿಯೂ ಒಳ್ಳೆಯದಾಗಿದೆ.
ಆ ದಿವಸಗಳಲ್ಲಿ ಯೆಹೂದದ ಜನರು ಸಬ್ಬತ್ ದಿನದಲ್ಲಿ ಕೆಲಸ ಮಾಡುವುದನ್ನು ನೋಡಿದೆನು. ಅವರು ದ್ರಾಕ್ಷಿಯನ್ನು ತುಳಿದು ದ್ರಾಕ್ಷಾರಸ ತಯಾರಿಸುತ್ತಿದ್ದರು. ದವಸಧಾನ್ಯಗಳನ್ನು ಕತ್ತೆಗಳ ಮೇಲೆ ಹೇರಿಸಿಕೊಂಡು ಹೋಗುತ್ತಿದ್ದರು. ಬೆಳೆಯನ್ನು ಮಾರಲು ಜೆರುಸಲೇಮಿಗೆ ಬರುತ್ತಿದ್ದರು. ನಾನು ಅವರನ್ನು ಕಟುವಾಗಿ ಎಚ್ಚರಿಸಿ ಇನ್ನು ಮುಂದೆ ಸಬ್ಬತ್ ದಿನದಲ್ಲಿ ಪಟ್ಟಣದೊಳಗೆ ಏನನ್ನೂ ತರಬಾರದೆಂದು ಆಜ್ಞಾಪಿಸಿದೆನು.