ಜ್ಞಾನೋಕ್ತಿಗಳು 28:8 - ಪರಿಶುದ್ದ ಬೈಬಲ್8 ಬಡವರಿಗೆ ಮೋಸಮಾಡಿ ಗಳಿಸಿದ ಐಶ್ವರ್ಯ ಕಳೆದುಹೋಗುವುದು; ಬಡವರಿಗೆ ದಯೆ ತೋರುವವನಿಗೆ ಅದು ದೊರೆಯುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಬಡ್ಡಿ ಮತ್ತು ಅನ್ಯಾಯ ಲಾಭದಿಂದ ವೃದ್ಧಿಯಾದ ಆಸ್ತಿಯು ಬಡವರಲ್ಲಿ ಕನಿಕರಪಡುವವನ ಪಾಲಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಬಡ್ಡಿಬಾಕಿಗಳಿಂದ ಬೆಳೆದ ಆಸ್ತಿ, ಬಡವರಲ್ಲಿ ಕನಿಕರವುಳ್ಳವನಿಗೆ ನಿಧಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಬಡ್ಡಿಬಾಚಿಗಳಿಂದ ವೃದ್ಧಿಯಾದ ಆಸ್ತಿಯು ಬಡವರಲ್ಲಿ ಕನಿಕರಪಡುವವನ ಪಾಲಾಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಬಡ್ಡಿಯಿಂದಲೂ ಅನ್ಯಾಯದ ಲಾಭದಿಂದಲೂ ತನ್ನ ಆಸ್ತಿಯನ್ನು ವೃದ್ಧಿಗೊಳಿಸುವವನು, ಬಡವರ ಮೇಲೆ ದಯೆ ತೋರಿಸುವವನಿಗೆ ಅದನ್ನು ಕೂಡಿಸುವನು. ಅಧ್ಯಾಯವನ್ನು ನೋಡಿ |