ಜ್ಞಾನೋಕ್ತಿಗಳು 29:10 - ಪರಿಶುದ್ದ ಬೈಬಲ್10 ಕೊಲೆಗಾರರು ಯಥಾರ್ಥವಂತರನ್ನು ಯಾವಾಗಲೂ ದ್ವೇಷಿಸುವರು. ಆ ಕೆಡುಕರು ಅವರನ್ನು ಕೊಲ್ಲಬಯಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಕೊಲೆಪಾತಕರು ನಿರ್ದೋಷಿಯನ್ನು ದ್ವೇಷಿಸುವರು, ಯಥಾರ್ಥವಂತನ ಪ್ರಾಣಕ್ಕೂ ಹೊಂಚುಹಾಕುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಕೊಲೆಪಾತಕರು ನೀತಿವಂತನನ್ನು ದ್ವೇಷಿಸುವರು; ಅಂಥವನ ಪ್ರಾಣಕ್ಕೂ ಹೊಂಚುಹಾಕುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಕೊಲೆಪಾತಕರು ನಿರ್ದೋಷಿಯನ್ನು ದ್ವೇಷಿಸುವರು; ಯಥಾರ್ಥವಂತರ ಪ್ರಾಣಕ್ಕೂ ಹೊಂಚುಹಾಕುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಕೊಲೆಪಾತಕರು ಪ್ರಾಮಾಣಿಕರನ್ನು ದ್ವೇಷಿಸುತ್ತಾರೆ. ಆದರೆ ಯಥಾರ್ಥವಂತರನ್ನು ನಾಶಮಾಡಲು ಯತ್ನಿಸುತ್ತಾರೆ. ಅಧ್ಯಾಯವನ್ನು ನೋಡಿ |
ಆಗ ಅರಸನಾದ ಅಹಾಬನು, “ಇನ್ನೂ ಒಬ್ಬನು ಇದ್ದಾನೆ. ನಾವು ಅವನಿಂದ ಯೆಹೋವನನ್ನು ವಿಚಾರಿಸಬಹುದು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ. ಯಾಕೆಂದರೆ ನನ್ನ ವಿಷಯವಾಗಿ ಯೆಹೋವನಿಂದ ಯಾವ ಒಳ್ಳೆಯ ಸಂದೇಶವನ್ನೂ ಅವನು ಕೊಡುವದಿಲ್ಲ. ನನ್ನ ಬಗ್ಗೆ ಯಾವಾಗಲೂ ಕೆಟ್ಟದ್ದನ್ನೇ ನುಡಿಯುತ್ತಾನೆ. ಅವನು ಇಮ್ಲನ ಮಗನಾದ ಮೀಕಾಯೆಹುವು” ಅಂದನು. ಅದಕ್ಕೆ ಯೆಹೋಷಾಫಾಟನು, “ಅಹಾಬನೇ, ನೀನು ಹಾಗೆ ಹೇಳಬಾರದು” ಅಂದನು.
ರಾಜನಾದ ಅಹಾಬನು, “ಬೇರೊಬ್ಬ ಪ್ರವಾದಿಯು ಇಲ್ಲಿದ್ದಾನೆ. ಅವನು ಇಮ್ಲನ ಮಗನಾದ ಮೀಕಾಯೆಹು ಎಂಬ ಹೆಸರಿನವನು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ. ಯೆಹೋವನ ಪ್ರತಿನಿಧಿಯಾಗಿ ಅವನು ಮಾತನಾಡುವಾಗ ಅವನೆಂದೂ ನನಗೆ ಒಳ್ಳೆಯವುಗಳನ್ನು ಪ್ರವಾದಿಸುವುದಿಲ್ಲ. ಅವನು ಯಾವಾಗಲೂ ನನಗೆ ಕೆಟ್ಟವುಗಳನ್ನೇ ಪ್ರವಾದಿಸುತ್ತಾನೆ” ಎಂದು ಉತ್ತರಿಸಿದನು. ಯೆಹೋಷಾಫಾಟನು, “ರಾಜನಾದ ಅಹಾಬನೇ, ನೀನು ಆ ಸಂಗತಿಗಳನ್ನು ಹೇಳಲೇಬಾರದು!” ಎಂದು ಹೇಳಿದನು.
ಆ ಅಧಿಕಾರಿಗಳು ಯೆರೆಮೀಯನನ್ನು ಬಾವಿಗೆ ಹಾಕಿದ ಸಂಗತಿಯು ಎಬೆದ್ಮೆಲೆಕನೆಂಬ ಮನುಷ್ಯನ ಕಿವಿಗೆ ಬಿತ್ತು. ಎಬೆದ್ಮೆಲೆಕನು ಇಥಿಯೋಪಿಯದವನಾಗಿದ್ದು ಅರಮನೆಯಲ್ಲಿ ಕಂಚುಕಿಯಾಗಿದ್ದನು. ರಾಜನಾದ ಚಿದ್ಕೀಯನು ಬೆನ್ಯಾಮೀನ್ ಊರ ಬಾಗಲಲ್ಲಿ ಕುಳಿತಿದ್ದನು. ಎಬೆದ್ಮೆಲೆಕನು ಅರಮನೆಯನ್ನು ಬಿಟ್ಟು ಬೆನ್ಯಾಮೀನ್ ಊರಹೆಬ್ಬಾಗಿಲಿನ ಹತ್ತಿರ ಕುಳಿತಿದ್ದ ರಾಜನಾದ ಚಿದ್ಕೀಯನ ಹತ್ತಿರ ಬಂದು ಹೀಗೆ ಹೇಳಿದನು: