ಜ್ಞಾನೋಕ್ತಿಗಳು 29:14 - ಪರಿಶುದ್ದ ಬೈಬಲ್14 ಬಡಜನರಿಗೆ ನ್ಯಾಯದೊರಕಿಸುವ ರಾಜನು ಬಹುಕಾಲ ಆಳುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಬಡವರನ್ನು ನ್ಯಾಯವಾಗಿ ಆಳ್ವಿಕೆ ಮಾಡುವ ರಾಜನ ಸಿಂಹಾಸನವು ಶಾಶ್ವತವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಬಡಬಗ್ಗರನ್ನು ನ್ಯಾಯವಾಗಿ ಆಳುವ ಅರಸನ ಸಿಂಹಾಸನ ಸದಾ ಸುಭದ್ರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಬಡವರನ್ನು ನ್ಯಾಯವಾಗಿ ಆಳುವ ರಾಜನ ಸಿಂಹಾಸನವು ಶಾಶ್ವತವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅರಸನು ಬಡವರಿಗೆ ಪಕ್ಷಪಾತವಿಲ್ಲದೆ ನ್ಯಾಯತೀರಿಸಿದರೆ, ಅವನ ಸಿಂಹಾಸನವು ಎಂದೆಂದಿಗೂ ಸ್ಥಿರಗೊಳ್ಳುವುದು. ಅಧ್ಯಾಯವನ್ನು ನೋಡಿ |
ಆತನು ಬಡಜನರಿಗೆ ಅನ್ಯಾಯಮಾಡದೆ ನ್ಯಾಯವಾದ ತೀರ್ಪನ್ನು ಕೊಡುವನು, ದೇಶದ ಬಡಜನರಿಗೋಸ್ಕರವಾಗಿ ಮಾಡುವ ಆಲೋಚನೆಯನ್ನು ಪಕ್ಷಪಾತವಿಲ್ಲದೆ ಮಾಡುವನು. ಆತನು ಜನರಿಗೆ ಶಿಕ್ಷೆ ಕೊಡಬೇಕೆಂದು ತೀರ್ಮಾನಿಸಿದರೆ ಅದನ್ನು ಆಜ್ಞಾಪಿಸಿ ಶಿಕ್ಷಿಸುವನು. ದುಷ್ಟರಿಗೆ ಮರಣದಂಡನೆಯಾಗಬೇಕೆಂದು ಆತನು ತೀರ್ಮಾನಿಸಿದರೆ, ಆತನು ಆಜ್ಞಾಪಿಸಿ ಕೊಲ್ಲಿಸುವನು. ನ್ಯಾಯವೇ ಆತನಿಗೆ ನಡುಕಟ್ಟು, ಒಳ್ಳೆಯತನವೇ ಆತನಿಗೆ ಸೊಂಟಪಟ್ಟಿಯಾಗಿವೆ.