ಜ್ಞಾನೋಕ್ತಿಗಳು 29:18 - ಪರಿಶುದ್ದ ಬೈಬಲ್18 ಪ್ರವಾದಿಗಳಿಗೆ ದರ್ಶನವಾಗದಿದ್ದರೆ ಜನರು ಹತೋಟಿ ತಪ್ಪುತ್ತಾರೆ. ಆದರೆ ದೇವರ ಕಟ್ಟಳೆಗೆ ವಿಧೇಯನಾಗಿರುವವನು ಸಂತೋಷವಾಗಿರುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ದೇವದರ್ಶನ ಇಲ್ಲದಿರುವಲ್ಲಿ ಜನರು ನಾಶವಾಗುವರು, ಧರ್ಮೋಪದೇಶವನ್ನು ಕೈಕೊಳ್ಳುವವನೋ ಧನ್ಯನಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಪ್ರವಾದನೆಗಳಿಲ್ಲದಿರುವಾಗ ಪ್ರಜೆಗಳು ಅಂಕೆಮೀರಿ ನಡೆಯುತ್ತಾರೆ, ಧರ್ಮಶಾಸ್ತ್ರಾನುಸಾರ ನಡೆಯುವವನು ಭಾಗ್ಯವಂತನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ದೇವದರ್ಶಕರಿಲ್ಲದಿರುವಲ್ಲಿ ಜನರು ಅಂಕೆಮೀರುವರು; ಧರ್ಮೋಪದೇಶವನ್ನು ಕೈಕೊಳ್ಳುವವನೋ ಧನ್ಯನಾಗುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ದೈವ ಪ್ರಕಟನೆ ಇಲ್ಲದಿರುವಾಗ, ಜನರು ನಾಶವಾಗುತ್ತಾರೆ; ಆದರೆ ಜ್ಞಾನೋಪದೇಶವನ್ನು ಕೈಗೊಳ್ಳುವವನು ಧನ್ಯನು. ಅಧ್ಯಾಯವನ್ನು ನೋಡಿ |