ಜ್ಞಾನೋಕ್ತಿಗಳು 29:2 - ಪರಿಶುದ್ದ ಬೈಬಲ್2 ಅಧಿಪತಿಯು ಒಳ್ಳೆಯವನಾಗಿರುವಾಗ ಜನರೆಲ್ಲರೂ ಸಂತೋಷವಾಗಿರುವರು. ಕೆಡುಕನು ಆಳುವಾಗ ಜನರೆಲ್ಲರೂ ಸಂಕಟಪಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಶಿಷ್ಟರ ವೃದ್ಧಿ ಜನರಿಗೆ ಉಲ್ಲಾಸ, ದುಷ್ಟನ ಆಳ್ವಿಕೆ ಜನರಿಗೆ ನರಳಾಟ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಸಜ್ಜನರ ಅಧಿಕಾರದಿಂದ ಜನರಿಗೆ ನಲಿದಾಟ; ದುರ್ಜನರ ಆಳ್ವಿಕೆಯಿಂದ ಜನರಿಗೆ ನರಳಾಟ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಶಿಷ್ಟರ ವೃದ್ಧಿ ಜನರಿಗೆ ಉಲ್ಲಾಸ; ದುಷ್ಟನ ಆಳಿಕೆ ಜನರಿಗೆ ನರಳಾಟ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಶಿಷ್ಟರು ಅಧಿಕಾರಕ್ಕೆ ಬಂದರೆ ಜನರು ಹರ್ಷಿಸುತ್ತಾರೆ. ಆದರೆ ದುಷ್ಟರು ಆಳಿದರೆ, ಜನರಿಗೆ ನರಳಾಟ. ಅಧ್ಯಾಯವನ್ನು ನೋಡಿ |
ಜ್ಞಾನಿಗಳು ತನಗೆ ಮೋಸಮಾಡಿದರೆಂಬುದು ತಿಳಿದಾಗ ಹೆರೋದನು ಬಹಳ ಕೋಪಗೊಂಡನು. ಆ ಮಗು ಹುಟ್ಟಿದ ಸಮಯವನ್ನು ಹೆರೋದನು ಜ್ಞಾನಿಗಳಿಂದ ತಿಳಿದುಕೊಂಡಿದ್ದನು. ಆ ಮಗು ಹುಟ್ಟಿ ಎರಡು ವರ್ಷಗಳಾಗಿದ್ದವು. ಆದ್ದರಿಂದ ಹೆರೋದನು ಬೆತ್ಲೆಹೇಮಿನಲ್ಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿದ್ದ ಎರಡು ವರ್ಷದ ಮತ್ತು ಅವರಿಗಿಂತ ಚಿಕ್ಕವರಾದ ಗಂಡುಮಕ್ಕಳನ್ನೆಲ್ಲಾ ಕೊಲ್ಲಬೇಕೆಂದು ಆಜ್ಞಾಪಿಸಿದನು.