ಜ್ಞಾನೋಕ್ತಿಗಳು 29:23 - ಪರಿಶುದ್ದ ಬೈಬಲ್23 ದುರಾಭಿಮಾನಿಯನ್ನು ಅವನ ದುರಾಭಿಮಾನವೇ ನಾಶಪಡಿಸುವುದು. ಆದರೆ ದೀನನನ್ನು ಬೇರೆ ಜನರು ಗೌರವಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಗರ್ವವು ಮನುಷ್ಯನನ್ನು ದೀನಸ್ಥಿತಿಗೆ ತರುವುದು, ದೀನಮನಸ್ಸುಳ್ಳವನು ಮಾನವನ್ನು ಪಡೆಯುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಗರ್ವವು ಮನುಷ್ಯನನ್ನು ದೀನಸ್ಥಿತಿಗೆ ಇಳಿಸುವುದು; ನಮ್ರತೆ ಅವನನ್ನು ಗೌರವಸ್ಥಿತಿಗೆ ಏರಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಗರ್ವವು ಮನುಷ್ಯನನ್ನು ದೀನಸ್ಥಿತಿಗೆ ತರುವದು; ದೀನಮನಸ್ಸುಳ್ಳವನು ಮಾನವನ್ನು ಪಡೆಯುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಗರ್ವವು ಮನುಷ್ಯನನ್ನು ಹೀನಸ್ಥಿತಿಗೆ ತರುವುದು; ಆದರೆ ಆತ್ಮದಲ್ಲಿ ದೀನರು ಮೆಚ್ಚಿಕೆಯನ್ನು ಪಡೆಯುವರು. ಅಧ್ಯಾಯವನ್ನು ನೋಡಿ |
ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.